ನಾಳೆಯಿಂದ ಸೈಕಲಾಜಿಕಲ್ ಥ್ರಿಲ್ಲರ್ 'ಗ್ರೀನ್' ಸಿನಿಮಾ zee5 ಒಟಿಟಿಯಲ್ಲಿ ಪ್ರಸಾರ... ಕಾಡುವ ಕಥೆ 'ಗ್ರೀನ್' ಸಿನಿಮಾ ನಾಳೆಯಿಂದ zee5 ಒಟಿಟಿಯಲ್ಲಿ ಸ್ಟ್ರೀಮಿಂಗ್.. ಕನ್ನಡ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್ ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಭಿನ್ನ ಕಥಾಹಂದರವಿದೆ. ಇದು ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ತನ್ನ ಇಡೀ ಬದುಕನ್ನೇ ನಿಯಂತಣ ಮಾಡುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಪ್ರಯತ್ನಿಸುವ ನಾಯಕನ ಕಥೆಯೇ ಗ್ರೀನ್. 'ಗ್ರೀನ್’ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಡಿಂಪಿ ಫಾಧ್ಯಾ, ಆರ್ ಜೆ ವಿಕ್ಕಿ ಮತ್ತು ಶಿವ ಮಂಜು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆ. ಮಧುಸೂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಕ್ತಿ ಸ್ಯಾಕ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಗ್ರೀನ್ ಸಿನಿಮಾವನ್ನು ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣ ಮಾಡಿದ್ದಾರೆ.
ಚಿತ್ರೀಕರಣ ಮುಗಿಸಿದ ‘ಮಹಾಕವಿ’.. ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ. ‘ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನು ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನು ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ. ‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾನೆ. ‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ...