Skip to main content

ಲೇಟ್‌ ಆಗಿ ಬಂದ್ರೂ ಲೇಟೆಸ್ಟ್‌ ಆಗಿ ಬರ್ತಿದ್ದಾನೆ ಗಣ: ಸೀಟ್‌ ಎಡ್ಜ್‌ ಟ್ರೈಮ್‌ ಟ್ರಾವೆಲ್‌ ಥ್ರಿಲ್ಲರ್‌ ಕಥೆಯೊಂದಿಗೆ ಬಂದ ಪ್ರಜ್ವಲ್‌ ದೇವರಾಜ್‌...

ಲೇಟ್‌ ಆಗಿ ಬಂದ್ರೂ ಲೇಟೆಸ್ಟ್‌ ಆಗಿ ಬರ್ತಿದ್ದಾನೆ ಗಣ: ಸೀಟ್‌ ಎಡ್ಜ್‌ ಟ್ರೈಮ್‌ ಟ್ರಾವೆಲ್‌ ಥ್ರಿಲ್ಲರ್‌ ಕಥೆಯೊಂದಿಗೆ ಬಂದ ಪ್ರಜ್ವಲ್‌ ದೇವರಾಜ್‌...ಜನವರಿ 31ರ ಶುಕ್ರವಾರ ರಾಜ್ಯದ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಗಣ ಬಿಡುಗಡೆ...
ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್‌ ಫೋನ್.‌ ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್‌ ಆದರೂ ಲೇಟೆಸ್ಟ್‌ ಆಗಿಯೇ ಈ ಚಿತ್ರ ತೆರೆಗೆ ಬರುತ್ತಿದೆ. ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದರೆ, ಯಶಾ ಶಿವಕುಮಾರ್‌, ವೇದಿಕಾ ನಾಯಕಿಯರಾಗಿ ನಟಿಸಿದ್ದಾರೆ. ಇದೀಗ ಇದೇ ಚಿತ್ರ ಜನವರಿ 31ರಂದು ಚಿತ್ರಮಂದಿರಗಳಿಗೆ ಗ್ರ್ಯಾಂಡ್‌ ಆಗಿ ಲಗ್ಗೆ ಇಡುತ್ತಿದೆ.ಹೈದರಾಬಾದ್ ಮೂಲದ ಪಾರ್ಥು ಎಂಬುವವರು ತಮ್ಮ ಚೆರಿ ಕ್ರಿಯೇಷನ್ಸ್ ಬ್ಯಾನರ್‌ ಮೂಲಕ ಗಣ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು ಇವರ ಮೊದಲ ಕನ್ನಡ ಸಿನಿಮಾ. ಇವರಷ್ಟೇ ಅಲ್ಲ, ಗಣ ಸಿನಿಮಾದ ನಿರ್ದೇಶಕರೂ ಕೂಡ ತೆಲುಗು ಮೂಲದವರೇ. ಇತ್ತೀಚೆಗಷ್ಟೇ ಟಾಲಿವುಡ್‌ನಲ್ಲಿ ಹಿಟ್‌ ಆದ ಪುಷ್ಪ 2 ಸಿನಿಮಾ ನಿರ್ದೇಶಕ ಸುಕುಮಾರ್‌ ಅವರ ಜತೆಗೆ ಕೆಲಸ ಮಾಡಿದ ಅನುಭವ ಇರುವ ಹರಿಪ್ರಸಾದ್‌ ಜಕ್ಕ, ಗಣ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಆಗಮಿಸಿದ್ದಾರೆ. 
ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ಪಾರ್ಥು, "ನಾನು ತೆಲುಗು ಮೂಲದವನು, ಗಣ ನನ್ನ ಮೊದಲ ಸಿನಿಮಾ. ಈ ಸಿನಿಮಾ ಕೈ ಹಿಡಿದರೆ, ಇನ್ನೂ ಒಂದಷ್ಟು ಕನ್ನಡ ಸಿನಿಮಾಗಳನ್ನು ಮಾಡುವ ಬಯಕೆ ಇದೆ. ಇದೇ ಜನವರಿ 31ರ ಶುಕ್ರವಾರ ಚಿತ್ರಮಂದಿರಗಳಲ್ಲಿ ನಮ್ಮ ಸಿನಿಮಾ ರಿಲೀಸ್‌ ಆಗುತ್ತಿದೆ. ಕನ್ನಡ ನಾಡಿನ ಪ್ರೇಕ್ಷಕರು ನಮ್ಮ ಸಿನಿಮಾವನ್ನು ಮೆಚ್ಚಿಕೊಂಡು ಅಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ" ಎನ್ನುತ್ತಾರೆ ನಿರ್ಮಾಪಕ ಪಾರ್ಥು. ಟೈಮ್‌ ಟ್ರಾವೆಲಿಂಗ್‌ ಜಾನರ್‌ನ ಸಿನಿಮಾ*
ಚಿತ್ರದ ಬಗ್ಗೆ ಮಾತನಾಡುವ ಅವರು, "ಇದೊಂದು ಪಕ್ಕ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ. ಒಳ್ಳೆಯ ಮನರಂಜನೆಯ ಜತೆಗೆ ಪ್ರೇಕ್ಷಕ ಬಯಸುವ ಎಲ್ಲ ಅಂಶಗಳೂ ಗಣ ಸಿನಿಮಾದಲ್ಲಿದೆ. ಕರ್ಮಷಿಯಲ್‌ ಕೋನದಲ್ಲಿ ನಿರ್ಮಾಣ ಮಾಡಿದರೂ, ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವ ತಾಕತ್ತು ನಮ್ಮ ಈ ಚಿತ್ರಕ್ಕಿದೆ. ಈಗಾಗಲೇ ಟ್ರೇಲರ್‌ನಲ್ಲಿ ಇದಕ್ಕೆ ಉತ್ತರ ಸಿಕ್ಕಿದೆ. ಟೈಮ್‌ ಟ್ರಾವೆಲಿಂಗ್‌ ಜಾನರ್‌ನ ಈ ಸಿನಿಮಾ, ಎರಡು ಕಾಲಘಟ್ಟದಲ್ಲಿ ನಡೆಯುತ್ತದೆ. ಗಟ್ಟಿ ಕಂಟೆಂಟ್‌ ಜತೆಗೆ ಅಮ್ಮ ಮಗನ ಬಾಂಧವ್ಯವೂ ಈ ಸಿನಿಮಾದ ಹೈಲೈಟ್" ಎಂಬುದು ಪಾರ್ಥು ಅವರ ಮಾತು.
 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಣ
ಮುಂದುವರಿದು ಮಾಹಿತಿ ನೀಡುವ ಅವರು, "ಸರಿ ಸುಮಾರು 75 ದಿನಗಳ ಕಾಲ ಈ ಸಿನಿಮಾ ಶೂಟಿಂಗ್ ಮಾಡಿದ್ದೇವೆ.‌ ಎಲ್ಲಿಯೂ ಕೊರತೆ ಬಾರದೆ, ರಿಚ್ ಆಗಿಯೇ ಸಿನಿಮಾ ಮಾಡಿದ್ದೇವೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಬಹುತೇಕ ಶೂಟಿಂಗ್‌ ನಡೆದಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಈಗಾಗಲೇ ಮೂರು ಹಾಡುಗಳು ಸರಿಗಮ ಕನ್ನಡ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಆಗಿವೆ. ಟ್ರೇಲರ್‌ ಸಹ ಎಲ್ಲರಿಗೂ ಇಷ್ಟವಾಗಿದೆ. ಇದೀಗ ಜನವರಿ 31ರ ಶುಕ್ರವಾರ ಕರ್ನಾಟಕದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ. ಕಮರ್ಷಿಯಲ್‌ ಆಗಿ ಟೈಮ್‌ ಟ್ರಾವೆಲಿಂಗ್‌ ಎಳೆಯ ಥ್ರಿಲ್ಲಿಂಗ್‌ ಸಿನಿಮಾ ಇದಾಗಿದ್ದು, ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟವಾಗಬಹುದು" ಎನ್ನುತ್ತಾರೆ ಪಾರ್ಥು.  
ಪಾತ್ರವರ್ಗ ಮತ್ತು ತಾಂತ್ರಿಕ ಬಳಗ ಹೀಗಿದೆ..
ಅಂದಹಾಗೆ ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಪಾತ್ರವರ್ಗದಲ್ಲಿ ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.