Skip to main content

ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್...

ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್...
ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ..ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ‌ ಶುಭ ಹಾರೈಸಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಅವರು ಸಹ ಈ ಸಂದರ್ಭದಲ್ಲಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
 "ನಾಗವಲ್ಲಿ ಬಂಗಲೆ" ಚಿತ್ರದಲ್ಲಿ ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಮುಖ್ಯಪಾತ್ರಗಳಿರುತ್ತದೆ. ಆರು ಜನ ಹುಡುಗಿಯರು ಈ ಆರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆರು ಪಾತ್ರಗಳು "ನಾಗವಲ್ಲಿ ಬಂಗಲೆ" ಪ್ರವೇಶಿಸಿದಾಗ ಏನೆಲ್ಲಾ ಆಗುತ್ತದೆ ಎಂಬುದೆ ಚಿತ್ರದ ಕಥಾ ಹಂದರ ಎಂದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್ ತಿಳಿಸಿದರು.‌
ನಮ್ಮ ಆಫೀಸ್ ನಲ್ಲಿ ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಅವರಿದ್ದಾಗ ಅಲ್ಲಿಗೆ ಆಗಮಿಸಿದ ನಿರ್ಮಾಪಕ ನೆ.ಲ ಮಹೇಶ್ ಅವರು, ಜೆ.ಎಂ.ಪ್ರಹ್ಲಾದ್ ಅವರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದರು. ನಿರ್ಮಾಪಕರು ಕಥೆ ಕೇಳಿದ ಕೇವಲ ಐದೇ ದಿನಗಳಲ್ಲಿ ಚಿತ್ರೀಕರಣ ಆರಂಭವಾಯಿತು. ಇದು ಹಾರಾರ್ ಚಿತ್ರವಾದರೂ, ಕೊನೆಯಲ್ಲಿ ದೆವ್ವ ಭೂತಗಳು ಇಲ್ಲ.‌ ಇದೆಲ್ಲಾ ನಮ್ಮ ಮನಸ್ಸಿನ ಭ್ರಮೆ ಎಂಬ ವಿಷಯವನ್ನು ಹೇಳಿದ್ದೇವೆ ಎಂದರು ನಿರ್ದೇಶಕ ಕವಿ ರಾಜೇಶ್.
ಹಂಸ ವಿಷನ್ಸ್ ಲಾಂಛನದಲ್ಲಿ ನಾನು ಹಾಗೂ ನೇವಿ ಮಂಜು ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನೆ.ಲ.ನರೇಂದ್ರ ಬಾಬು‌, ನೇವಿ ಮಂಜು ಹಾಗೂ ಅನೇಕ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಫೆಬ್ರವರಿ 28 ರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ಮಾಪಕ ನೆ.ಲ.ಮಹೇಶ್ ಹೇಳಿದರು.
ನಾಗವಲ್ಲಿ ಪಾತ್ರಧಾರಿ ‌ತೇಜಸ್ವಿನಿ, ಚಿತ್ರದಲ್ಲಿ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಸಿಮ್ರಾನ್, ಮಾನಸ, ರೂಪಶ್ರೀ, ಸುಷ್ಮ, ರಂಜಿತ, ಶ್ವೇತ‌,‌ ನಾಯಕ ಯಶ್ ಹಾಗೂ ನೃತ್ಯ ನಿರ್ದೇಶಕ ತ್ರಿಭುವನ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು. .

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.