Skip to main content

ತಿಮ್ಮನ ಮೊಟ್ಟೆಗಳು ಪ್ರೀಮಿಯರ್ ಶೋ ಅಮೇರಿಕಾದ ಡಾಲಸ್ ನಲ್ಲಿ...

ತಿಮ್ಮನ ಮೊಟ್ಟೆಗಳು ಪ್ರೀಮಿಯರ್ ಶೋ ಅಮೇರಿಕಾದ ಡಾಲಸ್ ನಲ್ಲಿ 
ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ “ತಿಮ್ಮನ ಮೊಟ್ಟೆಗಳು” ಚಿತ್ರ ಅಮೇರಿಕಾದ ಡಾಲಸ್ ನಲ್ಲಿ ಅದ್ದೂರಿ ಪ್ರೀಮಿಯರ್ ಶೋನೊಂದಿಗೆ ಬಿಡುಗಡೆಯಾಗಿದೆ.
ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲುವ ಸುಂದರ ಕೌಟುಂಬಿಕ ಕಥಾನಕವನ್ನ ಹೊಂದಿರುವ ಚಿತ್ರ ಕೊಲ್ಕತ್ತಾ ಅಂತರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಹಾಗೂ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.
 ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಬಿ ಎಸ್ ಕೆಂಪರಾಜು ಅವರ ಸಂಕಲನ ಹಾಗೂ ಹೇಮಂತ್ ಜೋಯಿ ಅವರ ಸುಮಧುರ ಸಂಗೀತ ಚಿತ್ರಕ್ಕಿದೆ. ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ಹಾಡಿರುವ ಹಾಡುಗಳು ಇಂಪಾಗಿದ್ದು ಕಥೆಗೆ ಪೂರಕವಾಗಿವೆ. ಸುಚೇಂದ್ರ ಪ್ರಸಾದ್, ಕೇಶವ್ ಗುತ್ತಳಿಕೆ, ಆಶಿಕಾ ಸೋಮಶೇಕರ್, ಪ್ರಗತಿ ಪ್ರಭು, ಶೃಂಗೇರಿ ರಾಮಣ್ಣ, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರ ಅಭಿನಯ ಚಿತ್ರಕ್ಕಿದೆ.ಡಾಲಸ್ ನಲ್ಲಿರುವ ಕನ್ನಡಿಗರು ಲುಂಗಿ ತೊಟ್ಟು, ಹೆಗಲ ಮೇಲೊಂದು ಟವಲ್ ಇಟ್ಟು, ತಲೆಯ ಮೇಲೊಂದು ಮಂಡಾಳೆಯನ್ನ ಹಾಕಿಕೊಂಡು ಮಲೆನಾಡಿನ ಸಾಮಾನ್ಯ ವ್ಯಕ್ತಿಯಂತೆ ಚಿತ್ರ ವೀಕ್ಷಿಸಲು ಬಂದದ್ದು ಎಲ್ಲರ ಗಮನ ಸೆಳೆಯಿತು. ಚಿತ್ರ ನೋಡಿದವರೆಲ್ಲಾ ಮಾನವೀಯ ಮೌಲ್ಯಗಳು, ಪ್ರಕೃತಿ ಮತ್ತು ಮನುಷ್ಯ ನಡುವಿನ ಸಂಬಂಧಗಳು, ದೈವಾರಾಧನೆ ಮತ್ತು ಮನುಷ್ಯನ ನಂಬಿಕೆಗಳ ಬಗ್ಗೆ ಚಿತ್ರದಲ್ಲಿ ಮೂಡಿಬಂದಿರುವ ಬಗೆಯ ಬಗ್ಗೆ ಭಾವನಾತ್ಮಕವಾಗಿ ತಮ್ಮ ಅನಿಸಿಕೆ ಹಂಚಿಕೊಂಡರು.
ಚಿತ್ರದ ಕಥೆಯಲ್ಲಿ ಕಾಳಿಂಗ ಹಾವಿನ ಪಾತ್ರ ಬಹುಮುಖ್ಯವಾಗಿದ್ದು ಚಿತ್ರದ ಓಟಕ್ಕೆ ಸಹಕಾರಿಯಾಗಿದೆ. ಸದ್ಯದಲ್ಲೇ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗುವುದೆಂದು ಚಿತ್ರತಂಡ ಹೇಳಿಕೊಂಡಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.