Skip to main content

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಟ್ರೇಲರ್..

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಟ್ರೇಲರ್.. 
 ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ "ಕಣ್ಮಣಿ" ಹಾಗೂ ಶೀರ್ಷಿಕೆ ಗೀತೆ ಕನ್ನಡಿಗರ ಮನ‌ ಗೆದ್ದಿದೆ. ಲಂಡನ್ ಚಿತ್ರೀಕರಣದ ಸನ್ನಿವೇಶಗಳು ಹಾಗೂ ಟೀಸರ್ ಸಹ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕುತೂಹಲ ಅಭಿಮಾನಿಗಳ ಮನದಲ್ಲಿ ಮನೆ ಮಾಡಿತ್ತು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಜನವರಿ 31ರಂದು ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ. 
ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ಫೆಬ್ರವರಿ 14 ರಂದು ಅದ್ದೂರಿಯಾಗಿ ಈ ಚಿತ್ರವನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದಾರೆ.
 ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತ ಚಿತ್ರದ ಹೈಲೆಟ್ ಆಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
 ಗುರುನಂದನ್ ಅವರಿಗೆ ನಾಯಕಿಯಾಗಿ ಮೃದುಲಾ ನಟಿಸಿದ್ದಾರೆ. ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 
ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಅಮಿತ್ ಚವಳ್ಕರ್ ಅವರ ಸಂಕಲನವಿರುವ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕೆ ಜಗದೀಶ್ ನಡನಹಳ್ಳಿ ಸಂಭಾಷಣೆ ಬರೆದಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.