Skip to main content

ಆಕ್ಷನ್ ಪ್ಯಾಕ್ಡ್ 'ಗಜರಾಮ' ಟ್ರೇಲರ್ ರಿಲೀಸ್...

ಆಕ್ಷನ್ ಪ್ಯಾಕ್ಡ್ 'ಗಜರಾಮ' ಟ್ರೇಲರ್ ರಿಲೀಸ್... ಪೈಲ್ವಾನ್ ಅವತಾರದಲ್ಲಿ ಖದರ್ ತೋರಿಸಿದ ರಾಜವರ್ಧನ್..
ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ರಾಜವರ್ಧನ್ ಅಭಿನಯದ ಬಹು ನಿರೀಕ್ಷಿತ ಗಜರಾಮ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. 2 ನಿಮಿಷ 46 ಸೆಕೆಂಡ್ ಇರುವ ಟ್ರೇಲರ್ ನಲ್ಲಿ ಆಕ್ಷನ್, ಎಮೋಷನ್, ಸೆಂಟಿಮೆಂಟ್, ಲವ್ ಅಂಶಗಳೇ ಹೈಲೆಟ್ಸ್.. ರಾಜವರ್ಧನ್ ಕುಸ್ತಿಕಣದಲ್ಲಿ ಪೈಲ್ವಾನ್ ಆಗಿ ತೊಡೆ ತಟ್ಟಿದ್ದು, ಕಬೀರ್ ಸಿಂಗ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್‌ ಖದರ್ ತೋರಿಸಿದ್ದು, ತಪಸ್ವಿನಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 
ಮಾಸ್ ಕ್ವೀನ್ ರಾಗಿಣಿ ದ್ವಿವೇದಿ ಹೆಜ್ಜೆ ಹಾಕಿರುವ ಸಾರಾಯಿ ಶಾಂತಮ್ಮ ಹಾಡು ಈಗಾಗಲೇ ಹಿಟ್ ಲೀಸ್ಟ್ ಸೇರಿದೆ. ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ , ಚೇತನ್ ಕುಮಾರ್ ಅವರ ಸಾಹಿತ್ಯವಿದೆ. ಮೆಲೋಡಿ ಮಾಂತ್ರಿಕ ಮನೋಮೂರ್ತಿ ಸಂಗೀತ ಚಿತ್ರದ ತೂಕ ಹೆಚ್ಚಿಸಿದೆ. 
ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಅವರೀಗ 'ಗಜರಾಮ' ಸಿನಿಮಾ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. 'ಬಾಂಡ್ ರವಿ' ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ 'ಗಜರಾಮ' ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಟ್ರೇಲರ್ ಮೂಲಕ ಆಮಂತ್ರಣ ಕೊಟ್ಟಿರುವ ಚಿತ್ರತಂಡ ಫೆಬ್ರವರಿ 7ಕ್ಕೆ ಸಿನಿಮಾವನ್ನು ತೆರೆಗೆ ತರಲಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.