ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್... ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ. ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ರಾಜಶೇಖರ್ ಅವರ ಪುತ್ರಿ ಈ ಚಿತ್ರದ ನಿರ್ದೇಶಕರು ಎಂದು ತಿಳಿದು ಸಂತೋಷವಾಯಿತು. ಆ ಕಾರಣಕ್ಕಾಗಿ ಹಾಗೂ ಸ್ನೇಹಿತರಾದ ದಾಸೇಗೌಡರ ಪ್ರೀತಿಯ ಆಹ್ವಾನಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ಟ್ರೇಲರ್ ನೋಡಿದಾಗ ವಿಭಿನ್ನ ಕಂಟೆಂಟ್ ವುಳ್ಳ ಚಿತ್ರ ಎಂದು ತಿಳಿಯುತ್ತದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಮ್ಮ ಅಪ್ಪನ ಕಾರ್ಯವೈಖರಿ ನೋಡಿ ನಿರ್ದೇಶನ ಕಲಿತ್ತಿದ್ದೇನೆ. ನಟಿಯಾ...