Skip to main content

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕೆ ಮೆಚ್ಚುಗೆ....

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕೆ ಮೆಚ್ಚುಗೆ....
ಯಶಸ್ಸಿನ ಹಾದಿಯಲ್ಲಿ ಗುರುನಂದನ್ ಅಭಿನಯದ ಚಿತ್ರ... ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರ ಫೆಬ್ರವರಿ 14 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಯು.ಕೆ‌ ಹಾಗೂ ಯು.ಎಸ್ ನಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲಿನ ಜನರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ವಿವರಣೆ ನೀಡಿದರು. "ರಾಜು ಜೇಮ್ಸ್ ಬಾಂಡ್" ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಚಿತ್ರವನ್ನು ಅಂದುಕೊಂಡ ಹಾಗೆ ತರಲು ಸಹಕಾರ ನೀಡಿದ ನಿರ್ಮಾಪಕರಿಗೆ, ಪಾತ್ರಗಳಿಗೆ ಜೀವ ತುಂಬಿದ ಕಲಾವಿದರಿಗೆ , ಉತ್ತಮವಾಗಿ ಕಾರ್ಯ ನಿರ್ವಹಿಸಿದ ತಂತ್ರಜ್ಞರಿಗೆ ಹಾಗೂ ವಿತರಕ ಸತ್ಯಪ್ರಕಾಶ್ ಅವರಿಗೆ ಧನ್ಯವಾದ ಎಂದರು. 
ಇದು ನಾವು ದುಡ್ಡಿಗಿಂತ, ಆಸೆಪಟ್ಟು ಮಾಡಿದ ಸಿನಿಮಾ. ಚಿತ್ರವನ್ನು ನೋಡಿದ ಪ್ರೇಕ್ಷಕರು, ಚೆನ್ನಾಗಿದೆ ಅಂತ ಹೇಳುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ವಿತರಕ ಸತ್ಯಪ್ರಕಾಶ್ ಅವರು ಎಲ್ಲಾ ಕಡೆ ಒಳ್ಳೆಯ ಚಿತ್ರಮಂದಿರಗಳನ್ನು ಕೊಡಿಸಿದ್ದರು. ಬೆಂಗಳೂರಿನಲ್ಲೂ‌ ನಮ್ಮ‌ ಚಿತ್ರ ಚೆನ್ನಾಗಿ ಪ್ರದರ್ಶನವಾಗುತ್ತಿದೆ. ಅದಕ್ಕಿಂತ ಉತ್ತರ ಕರ್ನಾಟಕ ಹಾಗೂ ತುಮಕೂರು ಭಾಗದಲ್ಲಿ ಇನ್ನೂ‌ ಹೆಚ್ಚು ಯಶಸ್ವಿಯಾಗಿದೆ. ಇತ್ತೀಚಿಗೆ ಯು.ಕೆ , ಯು.ಎಸ್ ನಲ್ಲೂ‌ ನಮ್ಮ ಚಿತ್ರ ಬಿಡುಗಡೆಯಾಗಿದೆ. ಈಗ ಅಲ್ಲಿ ಭಯಂಕರ ಚಳಿ. ಜನ ಆಚೆ ಬರುವುದೇ ಇಲ್ಲ.‌ ಅಂತಹುದರಲ್ಲೂ ನಮ್ಮ ಚಿತ್ರವನ್ನು ಅಲ್ಲಿನ‌ ಜನರು ಹೌಸ್ ಫುಲ್ ಮಾಡಿದ್ದಾರೆ. ಅಭಿಮಾನಿಗಳಿಗೆ, ಚಿತ್ರತಂಡದ ಸದಸ್ಯರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದ. ನಮ್ಮ ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಆಗಮಿಸಿ ಹಾರೈಸಿದ ಗೃಹ‌ ಮಂತ್ರಿಗಳಾದ ಶ್ರೀ ಪರಮೇಶ್ವರ್ ಹಾಗೂ ನಟಿ ರಮ್ಯ ಅವರಿಗೆ. ಚಿತ್ರ ಬಿಡುಗಡೆ ಆದ ಮೇಲೆ‌ ಶೋ ರೀಲ್ ವೀಕ್ಷಿಸಿ ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ‌ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ತುಂಬು ಹೃದಯದ ವಿಶೇಷ ಧನ್ಯವಾದ ಎಂದರು ನಿರ್ಮಾಪಕರಾದ ಕಿರಣ್ ಭರ್ತೂರ್ ಹಾಗೂ ಮಂಜುನಾಥ್ ವಿಶ್ವಕರ್ಮ.
ನಾನು ಹೋದ ಕಡೆ ಎಲ್ಲ ಬಾಂಡ್ ಅಂತಲೇ ಗುರುತ್ತಿಸುತ್ತಿರುವುದು ಖುಷಿಯಾಗಿದೆ. ಒಳ್ಳೆಯ ಚಿತ್ರ ನೀಡಿದ ನಿರ್ಮಾಪಕರಿಗೆ, ‌ನಿರ್ದೇಶಕರಿಗೆ ಹಾಗೂ ತಂಡಕ್ಕೆ ನಾಯಕ ಗುರುನಂದನ್ ಧನ್ಯವಾದ ತಿಳಿಸಿದರು. 
ಚಿತ್ರಕ್ಕೆ ಹಾಗೂ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ತುಂಬಾ ಸಂತೋಷವಾಗಿದೆ ಎಂದರು‌ ನಾಯಕಿ ಮೃದುಲ. ವಿತರಕ ಸತ್ಯಪ್ರಕಾಶ್ ಸಹ ಚಿತ್ರದ ಯಶಸ್ಸಿನ‌ ಖುಷಿಯನ್ನು ಮಾತಿನ ಮೂಲಕ ಹಂಚಿಕೊಂಡರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.