Skip to main content

ಜನ ಮೆಚ್ಚಿದ ಚಿತ್ರ... "ಶಾನುಭೋಗರ ಮಗಳು"

ಜನ ಮೆಚ್ಚಿದ ಚಿತ್ರ...
 "ಶಾನುಭೋಗರ ಮಗಳು"
ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಸಾಧ್ವಿ ಹೆಣ್ಣುಮಗಳು ಶರಾವತಿಯ ಕಥೆಯನ್ನು ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು "ಶಾನುಭೋಗರ ಮಗಳು" ಚಿತ್ರದ ಮೂಲಕ ತೆರೆಮೇಲೆ ತಂದಿದ್ದಾರೆ. ಪತ್ರಕರ್ತೆ ಹಾಗೂ 33ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಂತಹ ಭಾಗ್ಯ ಕೃಷ್ಣಮೂರ್ತಿ ಅವರ ಇದೇ ಹೆಸರಿನ ಕಾದಂಬರಿಯನ್ನಾಧರಿಸಿ "ಶಾನುಭೋಗರ ಮಗಳು" ಚಿತ್ರ ತಯಾರಾಗಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ‌
ನಟಿ ರಾಗಿಣಿ ಪ್ರಜ್ವಲ್, ಕಿಶೋರ್, ನಿರಂಜನ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಕಳೆದವಾರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಇತ್ತೀಚೆಗೆ ನಡೆದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಚಿತ್ರತಂಡ ಮಾಹಿತಿ ಹಂಚಿಕೊಂಡಿತು. 
ಚಿತ್ರ ನೋಡಿದ ಎಲ್ಲರೂ ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ‌ ಎಂದೇ ಹೇಳುತ್ತಿದ್ದಾರೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಬರುತ್ತಿಲ್ಲ ಎಂದು ನಿರ್ದೇಶಕ ಕೂಡ್ಲು ರಾಮಕೃಷ್ಣ ಹೇಳಿದರು. 
ಲೇಖಕಿ ಭಾಗ್ಯಕೃಷ್ಣಮೂರ್ತಿ ಕೂಡ ಅದೇ ಮಾತನ್ನು ಹೇಳಿ ಮಾಧ್ಯಮದವರು ಪ್ರೋತ್ಸಾಹಿಸಿದರೆ ನಮ್ಮ ಚಿತ್ರ ಇನ್ನಷ್ಟು ಜನರಿಗೆ ತಲುಪುತ್ತದೆ. ಅದಕ್ಕೆ ನಿಮ್ಮ ಸಹಕಾರ ಬೇಕೆಂದು ಕೇಳಿಕೊಂಡರು.
ಹೆಣ್ಣನ್ನು ಕೇಂದ್ರವಾಗಿಟ್ಟುಕೊಂಡು ಬರುತ್ತಿರುವ ಚಿತ್ರಗಳು ಕಡಿಮೆಯಾಗುತ್ತಿರುವ ಈ ಸಮಯದಲ್ಲಿ ಮಹಿಳಾ‌ ಪ್ರಧಾನ ಚಿತ್ರವೊಂದು ಬಂದಿದೆ. ಚಿತ್ರದಲ್ಲಿ ಇತಿಹಾಸ, ಕಾಲ್ಪನಿಕ‌ ಇತಿಹಾಸ‌ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಕೆಲವು ವಿಷಯಗಳನ್ನು ತೋರಿಸಲಾಗಿದೆ. ಚಿತ್ರ ಚೆನ್ನಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕಿಶೋರ್.
 ನಾಯಕಿ ರಾಗಿಣಿ ಪ್ರಜ್ವಲ್ ಮಾತನಾಡಿ ಈ ವಾರ ೧೧ ಸಿನಿಮಾ ಬಂದಿದೆ. ಅದರ ನಡುವೆ ನಮ್ಮ ಚಿತ್ರವನ್ನು ಜನ ಇಷ್ಟಪಟ್ಟಿದ್ದಾರೆ. ಎಲ್ಲಾ ವರ್ಗದ ಜನರಿಗೂ ನಮ್ಮ ಸಿನಿಮಾ ಕನೆಕ್ಟ್ ಆಗುತ್ತೆ. ಮುಖ್ಯವಾಗಿ ನಾನು ಈ ಸಿನಿಮಾ ಒಪ್ಪಿದ್ದೇ ಕಥೆ ಹಾಗೂ ಕೂಡ್ಲು ಅವರ ನಿರ್ದೇಶನದ ಚಿತ್ರ ಎಂಬ ಕಾರಣಕ್ಕೆ. ಮೊನ್ನೆ ಆಡಿಯನ್ಸ್ ಜತೆ ಸಿನಿಮಾ ನೋಡಿದೆ. ಅವರ ರಿಯಾಕ್ಷನ್ ಕಂಡು ಖುಷಿಯಾಯ್ತು. ಪ್ರಜ್ವಲ್ ಕೂಡ ನನ್ನ ಜತೆ ಬಂದು ಸಿನಿಮಾ ನೋಡಿದರು. ಅತ್ತೆ ಮಾವ ಅವರಿಗೂ ಸಿನಿಮಾ ತೋರಿಸುತ್ತೇನೆ. ಶರಾವತಿ ಪಾತ್ರದ ಮೂಲಕ ಲಾಟ್ ಆಫ್ ಎಮೋಷನ್ಸ್ ಕನೆಕ್ಟ್ ಆದೆ. ಚಿತ್ರದ ಯಾವುದೇ ಅಳುವ ಸೀನ್ ನಲ್ಲಿ ನಾನು ಗ್ಲಿಸರಿನ್ ಹಾಕಿಲ್ಲ ಎಂದರು.
ಛಾಯಾಗ್ರಾಹಕ ಜೈ ಆನಂದ್ ಮಾತನಾಡಿ ಇದು ನನ್ನ ೩೦ನೇ ಸಿನಿಮಾ. ಇದರಲ್ಲಿ ಯಾವುದೇ ಸಿಜಿ ಉಪಯೋಗ ಮಾಡಿಲ್ಲ. ೩೫ ದಿನ ಶೂಟ್ ಮಾಡಿದ್ದೇವೆ. ಮೊದಲು ಪ್ರಜ್ವಲ್ ಅವರಿಗೆ ಈ ಸಬ್ಜೆಕ್ಟ್ ಬಗ್ಗೆ ಹೇಳಿದ್ದೆ. ಅವರು ರಾಗಿಣಿ ಮೇಡಂ ಒಪ್ಪಿಸಿದರು ಎಂದರು.

ನಿರಂಜನ್ ಶೆಟ್ಟಿ‌ ಮಾತನಾಡುತ್ತ. ಈ ಹಿಂದೆ ಕೂಡ್ಲು ಅವರ ಮಾರ್ಚ್ ೨೨ ಚಿತ್ರದಲ್ಲಿ ಆಕ್ಟ್ ಮಾಡಬೇಕಿತ್ತು. ಆಗಿರಲಿಲ್ಲ. ಇಂಥ ಪಾತ್ರ ಸಿಕ್ಕಿದ್ದೇ ನನ್ನ ಅದೃಷ್ಟ ಎಂದರು.

 ಅಸೋಸೊಯೇಟ್ ಡೈರೆಕ್ಟರ್ ನಾಗರಾಜ್ ಮಾತನಾಡಿ ನಿರ್ಮಾಪಕರು ಸಿ.ಎಂ.ನಾರಾಯಣ್ ಅವರು ನೀಡಿದ ಸಹಕಾರವೇ ಸಿನಿಮಾ ಈ ಹಂತಕ್ಕೆ ಬರಲು ಕಾರಣ‌. ಜನತೆ ನಮ್ಮನ್ನು ಪ್ರೋತ್ಸಾಹಿಸಬೇಕು ಎಂದರು. ಹಿರಿಯ ನಿರ್ದೇಶಕ ಜೊಸೈಮನ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.