Skip to main content

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ...

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ...ಮಾರ್ಚ್ 7ಕ್ಕೆ ಕನಸೊಂದು ಶುರುವಾಗಿದೆ ಸಿನಿಮಾ ರಿಲೀಸ್..
ಟ್ರೇಲರ್ ನಲ್ಲಿ ಕನಸೊಂದು ಶುರುವಾಗಿದೆ..ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದ ಯೋಗಿ..
ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ಕೊಟ್ಟರು.
ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. 'ಕ' ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನಿಮಾ ಮಾಡಲಿ . ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿಯೇ ಕನಸೊಂದು ಶುರುವಾಗಿದೆ ಸಿನಿಮಾವನ್ನು ನೋಡಿ ಹಾರೈಸಿ ಎಂದು ತಿಳಿಸಿದರು.
ನಟ ಲೂಸ್ ಮಾದಯೋಗಿ ಮಾತನಾಡಿ, ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನಿಮಾ ದೊಡ್ಡ ಸಿನಿಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಇವತ್ತಿನ ಪರಿಸ್ಥಿತಿಗೆ ಸಿನಿಮಾ ಮಾಡೋದುವುದು ಸುಲಭ. ಆದರೆ ಅದನ್ನು ತಲುಪಿಸುವುದು ಕಷ್ಟ. ಅದೊಂದು ಫೋಕಸ್ ಆಗಿ ಮಾಡಿ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 
ನಿರ್ದೇಶಕರಾದ ಮಂಜೇಶ್ ಭಾಗವತ್ ಮಾತನಾಡಿ, ಇದು ನನ್ನ ಎರಡನೇ ಸಿನಿಮಾ. ಚಿಕ್ಕ ಕಥೆಯಿಂದ ಶುರುವಾದ ಜರ್ನಿ ಇದು. ಅಂದುಕೊಂಡ ಬಜೆಟ್ ಗಿಂತ ಸ್ವಲ್ಪ ಜಾಸ್ತಿ ಬಜೆಟ್ ಆಯ್ತು. ನಿರ್ಮಾಪಕರು ಕೂಡ ಸಾಥ್ ಕೊಟ್ಟರು. ಕನಸೊಂದು ಶುರುವಾಗಿದೆ ಎಂದರೆ ಅಪ್ಪು ಸರ್ ನೆನಪು ಬರ್ತಾರೆ. ಅವರ ಸಿನಿಮಾದ ಹಾಡಿನಲ್ಲಿ ಬರುವ ಲೈನ್ ಇಟ್ಕೊಂಡು ಟೈಟಲ್ ಇಟ್ಟಿದ್ದೇವೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವೀ. ನೈಜ ಘಟನೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ ಎಂದು ಹೇಳಿದರು.
KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ನಿರ್ಮಿಸಿರುವ 'ಕನಸೊಂದು ಶುರುವಾಗಿದೆ' ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಭಟ್ 
ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ & ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.
ಮಂಜೇಶ್ ಭಾಗವತ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕ್ಯಾಮೆರಾ ಹಿಡಿದಿದ್ದು, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿಎಸ್ ಗೌಡ ಸಂಕಲನ ಜವಾಬ್ದಾರಿ ನಿಭಾಯಿಸಿದ್ದಾರೆ. ಶಶಾಂಕ್, ಸಿಂಪಲ್ ಸುನಿ & ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮಾಚ್ 7ಕ್ಕೆ ಧೀರಜ್ ರಾಜ್ಯಾದ್ಯಂತ ಕನಸೊಂದು ಶುರುವಾಗಿದೆ ಸಿನಿಮಾವನ್ನು ರಿಲೀಸ್ ಮಾಡಲಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.