Skip to main content

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್...

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್...
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ‌ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ.‌ ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ರಾಜಶೇಖರ್ ಅವರ ಪುತ್ರಿ ಈ ಚಿತ್ರದ ನಿರ್ದೇಶಕರು ಎಂದು ತಿಳಿದು ಸಂತೋಷವಾಯಿತು. ಆ ಕಾರಣಕ್ಕಾಗಿ ಹಾಗೂ ಸ್ನೇಹಿತರಾದ ದಾಸೇಗೌಡರ ಪ್ರೀತಿಯ ಆಹ್ವಾನಕ್ಕಾಗಿ ಇಲ್ಲಿಗೆ ಬಂದಿದ್ದೇನೆ.‌ ಟ್ರೇಲರ್ ನೋಡಿದಾಗ ವಿಭಿನ್ನ ಕಂಟೆಂಟ್ ವುಳ್ಳ ಚಿತ್ರ ಎಂದು ತಿಳಿಯುತ್ತದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.         ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಮ್ಮ ಅಪ್ಪನ ಕಾರ್ಯವೈಖರಿ ನೋಡಿ ನಿರ್ದೇಶನ ಕಲಿತ್ತಿದ್ದೇನೆ. ನಟಿಯಾಗಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನನಗೆ ನಿರ್ದೇಶಕಿಯಾಗಿ ಮೊದಲ‌ ಚಿತ್ರ. ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಮೆಚ್ಚಿಕೊಂಡು ನಿರ್ಮಾಣ ಮಾಡಿದ ಶಿಲ್ಪ ಪ್ರಸನ್ನ ಅವರಿಗೆ ಧನ್ಯವಾದ. ‘ಆಪಲ್ ಕಟ್’, ಐದು ಜನ ಗೆಳೆಯರ ಸುತ್ತ ನಡೆಯುವ ಕಥೆ. ಜೊತೆಗೆ ನಾನು ಮಾನವಶಾಸ್ತ್ರ ಓದಿದ್ದು, ಚಿತ್ರದಲ್ಲಿ ಮಾನವಶಾಸ್ತ್ರದ ಒಂದು ಅಂಶ ಸೇರಿಸಲಾಗಿದೆ. ಶವವೊಂದನ್ನು ಸಹ ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ.‌ ನಮ್ಮ ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು.  
 ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಮೊದಲಬಾರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಮಾರ್ಚ್ 7 ರಂದು ರಿಲೀಸ್ ಮಾಡುತ್ತಿದ್ದೇವೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣೇಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕಿ ಶಿಲ್ಪ ಪ್ರಸನ್ನ.
 ನಾನು ಈ ಚಿತ್ರದಲ್ಲಿ ಸತ್ಯ ಹೆಸರಿನ ಮಾನವಶಾಸ್ತ್ರ ಪ್ರೊಫೆಸರ್ ಪಾತ್ರ ಮಾಡಿದ್ದೇನೆ ಎಂದು ತಿಳಿಸಿದ‌ ನಾಯಕ ಸೂರ್ಯ ಗೌಡ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣೇಶ್ ಹಾಗೂ ದಾಸೇ ಗೌಡ ಅವರಿಗೆ ಧನ್ಯವಾದ ತಿಳಿಸಿದರು.  
 ‘ನಾನು ಮೂಲತಃ ಬಾಗೆಪಲ್ಲಿ ಹುಡುಗಿ. ಒಳ್ಳೆ ಕಂಟೆಂಟ್ ಇರುವ ಮರ್ಡರ್ ಮಿಸ್ಟರಿ ಸಿನಿಮಾದಲ್ಲಿ ಸೈಕಾಲಜಿ ಸ್ಟೂಡೆಂಟ್ ಆಗಿ ನಟಿಸಿದ್ದೇನೆ" ಎಂದು ನಾಯಕಿ ಅಶ್ವಿ‌ನಿ ಪೋಲೆಪಲ್ಲಿ ಹೇಳಿದರು. 
ಚಿತ್ರದಲ್ಲಿ ನಟಿಸಿರುವ ನಟಿಯರಾದ ಅಮೃತ‌ ಹಾಗೂ ಮೀನಾಕ್ಷಿ ತಮ್ಮ ಪಾತ್ರದ ಕುರಿತು ಮಾತನಾಡಿದರು. ವೀರ ಸಮರ್ಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.