ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ '45" ಚಿತ್ರದ ಟೀಸರ್... ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್.. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ "45" ಚಿತ್ರದ ಟೀಸರ್ ಯುಗಾದಿ ಹಬ್ಬದ ಶುಭದಿನದಂದು ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟೀಸರ್ ಅನಾವರಣ ಮಾಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಡಿ.ಕೆ.ಡಿ ರಿಯಾಲಿಟಿ ಶೋ ಮಾಡುತ್ತಿದ್ದ ಸಮಯದಲ್ಲಿ ಅರ್ಜುನ್ ಜನ್ಯ 4 ರಿಂದ 5 ನಿಮಿಷದಲ್ಲಿ ಈ ಚಿತ್ರದ ಕಥೆ ಹೇಳಿದರು. ಕಥೆ ಕೇಳಿ ಥ್ರಿಲ್ ಆದೆ. ಕಥೆ ಕೊಟ್ಟು ಬಿಡುತ್ತೇನೆ ಯಾರಾದರೂ ನಿರ್ದೇಶನ ಮಾಡಲಿ ಎಂದು ಅರ್ಜುನ್ ಜನ್ಯ ಹೇಳಿದರು. ನೀವು ಕಥೆ ಚೆನ್ನಾಗಿ ಹೇಳಿದ್ದೀರಾ. ನೀವೇ ನಿರ್ದೇಶನ ಮಾಡಿ ಅಂದೆ. ನಂತರ ನಿರ್ಮಾಣಕ್ಕೆ ನಿರ್ಮಾಪಕ ರಮೇಶ್ ರೆಡ್ಡಿ ಮುಂದಾದರು. "ಪ್ರೀತ್ಸೆ...