Skip to main content

ಧನ್ವೀರ್ ಅಭಿನಯದ "ವಾಮನ" ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್.

ಧನ್ವೀರ್ ಅಭಿನಯದ "ವಾಮನ" ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್.ಚೇತನ್ ಗೌಡ ನಿರ್ಮಾಣದ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ..
ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ "ವಾಮನ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ "ವಾಮನ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು. 
ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ "ವಾಮನ". ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ " ಕೈವಾ" ನನ್ನಿಷ್ಟದ ಚಿತ್ರ. "ವಾಮನ" ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ "ಮುದ್ದು ರಾಕ್ಷಸಿ" ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ‌. ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಿ. ನಾನು ಕೂಡ "ವಾಮನ" ಚಿತ್ರವನ್ನು ಧನ್ವೀರ್ ಜೊತೆಗೆ ನೋಡುತ್ತೇನೆ ಎಂದು ದರ್ಶನ್ ತಿಳಿಸಿದರು. 
ನಾನು ಮೊದಲಿಗೆ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ನಮ್ಮ ಚಿತ್ರದ ತಾಯಿ - ಮಗನ ಬಾಂಧವ್ಯ ಸಾರುವ ಹಾಡನ್ನು ಅನಾವರಣ ಮಾಡಿದ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ದರ್ಶನ್ ಅವರು ಇಂದಿನ ಸಮಾರಂಭಕ್ಕೆ ಬರಬೇಕಿತ್ತು. ಆದರೆ ಅವರು ದೂರದ ಊರಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ನನ್ನಿಂದ ನಿರ್ಮಾಪಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶ ಅವರದು. ಹಾಗಾಗಿ ನನ್ನನ್ನು ಅವರಿರುವ ಕಡೆಗೆ ಕರೆಸಿಕೊಂಡು ಟ್ರೇಲರ್ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳಾಡಿದ್ದಾರೆ. ಚಿತ್ರಮಂದಿರದಲ್ಲೇ "ವಾಮನ" ಚಿತ್ರವನ್ನು ನೋಡುವುದಾಗಿ ಹೇಳಿದ್ದಾರೆ. ಇಷ್ಟು ಜನರು ನಮ್ಮ ಚಿತ್ರದ ಸಮಾರಂಭಕ್ಕೆ ಬಂದಿರುವುದು ನನಗೆ ಬಹಳ ಖುಷಿಯಾಗಿದೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ತಂತ್ರಜ್ಞರ ಸಹಕಾರ ಕೂಡ ಅಪಾರವಾಗಿದೆ ಎಂದು ನಾಯಕ ಧನ್ವೀರ್ ತಿಳಿಸಿದರು. 
 ನಮ್ಮ ಚಿತ್ರದ ಟ್ರೇಲರ್ ಹಾಗೂ ಹಾಡನ್ನು ಬಿಡುಗಡೆ ಮಾಡಿಕೊಟ್ಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಅವರಿಗೆ ವಿಶೇಷ ಧನ್ಯವಾದ. "ವಾಮನ" ನಮ್ಮ ಸಂಸ್ಥೆಯ ನಿರ್ಮಾಣದ ಮೊದಲ ಚಿತ್ರ. ನಿರ್ದೇಶಕರು ಒಂದೊಳ್ಳೆ‌ ಚಿತ್ರ ಮಾಡಿಕೊಟ್ಟಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ.‌ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಚೇತನ್ ಗೌಡ.
ಸಹ ನಿರ್ಮಾಪಕಿ ರೂಪ ಚೇತನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
"ವಾಮನ" ತಾಯಿ - ಮಗನ‌ ಬಾಂಧವ್ಯದ ಕಥೆ. ಇದರೆ ಜೊತೆಗೆ ನೋಡುಗರಿಗೆ ಬೇಕಾದ‌ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ‌ಉತ್ತಮವಾಗಿ ಮೂಡಿ ಬರಲು ಇಡೀ ತಂಡದ ಸಹಕರವೇ ಕಾರಣ ಎಂದು ನಿರ್ದೇಶಕ ಶಂಕರ್ ರಾಮನ್ ತಿಳಿಸಿದರು. 
ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಇಂದು ನಮ್ಮ‌ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಇಷ್ಟು ಜನ ಬಂದು ಹಾರೈಸಿದ್ದಾರೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕಿ ರೀಷ್ಮಾ ನಾಣಯ್ಯ ಹೇಳಿದರು.
ಚಿತ್ರದಲ್ಲಿ ನಟಿಸಿರುವ ತಾರಾ ಅನುರಾಧ, ಬಹುಭಾಷಾ ನಟ ಸಂಪತ್ ರಾಜ್, ಚಿತ್ಕಲಾ ಬಿರಾದಾರ್, ಕೋಟೆ ಪ್ರಭಾಕರ್, ಪೆಟ್ರೋಲ್ ಪ್ರಸನ್ನ, ಕಾಕ್ರೋಜ್ ಸುಧೀ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಸಿ.ಆರ್.ಬಾಬಿ ಹಾಗೂ ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಗೂ ನೃತ್ಯ ನಿರ್ದೇಶಕ ಭೂಷಣ್ ಮುಂತಾದವರು "ವಾಮನ" ಚಿತ್ರದ ಕುರಿತು ಮಾತನಾಡಿದರು. 
 .

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.