Skip to main content

"ಠಾಣೆ" ಚಿತ್ರದ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ.

"ಠಾಣೆ" ಚಿತ್ರದ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ.
ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡಿಗೆ ಕನ್ನಡ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರಿಗೂ ಸಹ ಈ ಹಾಡು ಅಚ್ಚುಮೆಚ್ಚಂತೆ. ಬಾಲ ಪ್ರತಿಭೆಗಳ ಗಾಯನದಲ್ಲಿ ಮೂಡಿಬಂದಿರುವ ಈ ಹಾಡನ್ನು ಮೆಚ್ಚಿಕೊಂಡ ನಾರಾಯಣ ಗೌಡ ಅವರು ಚಿತ್ರತಂಡದವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದರು.                   
 ಬಾಲ ಪ್ರತಿಭೆಗಳು ಹಾಡಿರುವ "ಠಾಣೆ" ಚಿತ್ರದ ಅರ್ಥಗರ್ಭಿತ ಈ ಹಾಡನ್ನು ನಾನು ದಿನಕ್ಕೆ ನಾಲ್ಕೈದು ಬಾರಿ ಕೇಳುತ್ತಲೇ ಇರುತ್ತೇನೆ. ಅಷ್ಟು ಇಷ್ಟವಾಗಿದೆ ನನಗೆ ಈ ಹಾಡು. ಮಕ್ಕಳು ತುಂಬಾ ಚೆನ್ನಾಗಿ ಹಾಡಿದ್ದಾರೆ. ರೆಮೊ ಅವರ ಸಾಹಿತ್ಯ ಹಾಗೂ ಮಾನಸ ಹೊಳ್ಳ ಅವರ ಸಂಗೀತ ನಿರ್ದೇಶನ ಕೂಡ ಬಹಳ ಸುಂದರವಾಗಿದೆ. ಮಾನಸ ಹೊಳ್ಳ ಅವರು ನಮ್ಮ ಹಿರಿಯ ನಟ ಶಂಖನಾದ ಅರವಿಂದ್ ಅವರ ಪುತ್ರಿ. ಅವರ ತಂದೆ ಅದ್ಭುತ ಕಲಾವಿದರು. ಮಗಳು ಸಹ ಉತ್ತಮ‌ ಸಂಗೀತ ನಿರ್ದೇಶಕಿ. ಇಂತಹ ಮನಮುಟ್ಟುವ ಹಾಡನ್ನು ನೀಡಿದ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. ನಿಮ್ಮ ತಂಡದ ಜೊತೆಗೆ ಸದಾ ನಾನು ಇರುತ್ತೇನೆ‌. ಹಾಡಿನಷ್ಟೇ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ನಾರಾಯಣ ಗೌಡ ಅವರು ಹಾರೈಸಿದರು. ನಿರ್ದೇಶಕ ಎಸ್ .ಭಗತ್ ರಾಜ್, ನಾಯಕ ಪ್ರವೀಣ್, ಸಂಗೀತ ನಿರ್ದೇಶಕಿ ಮಾನಸ ಹೊಳ್ಳ ಮುಂತಾದ "ಠಾಣೆ" ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕ ರಾಜೇಶ್ ಕೃಷ್ಣ ಅವರು ಹಾಡಿರುವ ಹಾಡೊಂದು ಸದ್ಯದಲ್ಲೇ ಲೇಖಾ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.