Skip to main content

Posts

Showing posts from April, 2025

ಹೊಸತಂಡದ‌ "ದಿ" ಚಿತ್ರಕ್ಕೆ ಸಾಥ್ ನೀಡಿದ‌ ಖ್ಯಾತ ಸಂಭಾಷಣೆಗಾರ ಮಾಸ್ತಿ...

ಹೊಸತಂಡದ‌ "ದಿ" ಚಿತ್ರಕ್ಕೆ ಸಾಥ್ ನೀಡಿದ‌ ಖ್ಯಾತ ಸಂಭಾಷಣೆಗಾರ ಮಾಸ್ತಿ... ಹೊಸಕಥೆ ಆಧಾರಿತ ಈ ಚಿತ್ರ ಮೇ 16ರಂದು ತೆರೆಗೆ.. ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ ಹೊಸತಂಡದ ಹೊಸಪ್ರಯತ್ನ "ದಿ" ಚಿತ್ರದ ಬಿಡುಗಡೆ ದಿನಾಂಕವನ್ನು ಕನ್ನಡ ಚಿತರಂಗದ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಬಿಡುಗಡೆ ಮಾಡಿದ್ದಾರೆ. ಹೊಸಕಥೆ ಆಧರಿಸಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ವಿಜಯ್ ಸಿನಿಮಾಸ್ ಅವರು ವಿಶಾಲ ಕರ್ನಾಟಕಕ್ಕೆ ಈ ಸಿನಿಮಾವನ್ನು ಹಂಚಿಕೆ ಮಾಡಲಿದ್ದಾರೆ.  ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿ ಮಾತನಾಡಿದ ಮಾಸ್ತಿ ಅವರು, ಹೊಸ ರೀತಿಯ ಪ್ರಯತ್ನದೊಂದಿಗೆ ಹೊಸಬರು ಚಿತ್ರರಂಗ ಪ್ರವೇಶಿಸಬೇಕು. ಚಿತ್ರದ ತುಣುಕು ನೋಡಿದಾಗ ಈ ಚಿತ್ರ ಸಹ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ ಅನಿಸಿತು. ಕನ್ನಡ ಜನತೆ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ವಿನಯ್ ವಾಸುದೇವ್, ಕಾರ್ಯಕಾರಿ ನಿರ್ಮಾಪಕ ಸತೀಶ್ ಕುಮಾರ್ ಟಿಎಲ್ ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಅಲೆನ್ ಭರತ್ ಛಾಯಾಗ್ರಹಣ, ಯು.ಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ ಹಾಗೂ ಸಿದ್ದಾರ್ಥ್ ಆರ್ ನಾಯಕ್ ಅವರ ಸಂಕಲನವಿರುವ 'ದಿ" ಚಿತ್ರದ ತಾರಾಬಳಗದಲ್ಲಿ ವಿನಯ್ ವಾಸು...

ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ..

ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ.. ಎಸ್ ರಮೇಶ್(ಬನಶಂಕರಿ) ನಿರ್ಮಾಣದ ಹಾಗೂ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರದಲ್ಲಿ ರಾಗಿಣಿ ದ್ವಿವೇದಿ - ಧರ್ಮ ಕೀರ್ತಿರಾಜ್ ನಟನೆ... ಎಸ್ ರಮೇಶ್(ಬನಶಂಕರಿ) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಸಿಂಧೂರಿ" ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.  ನಿರ್ದೇಶಕನಾಗಿ ಇದು ನನಗೆ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಶಂಕರ್ ಕೋನಮಾನಹಳ್ಳಿ, ಮೇ 10 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಸಕಲೇಶಪುರ ಮುಂತಾದ ಕಡೆ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಶೀರ್ಷಿಕೆ ಕೇಳಿದರೆ, ರೋಹಿಣಿ ಸಿಂಧೂರಿ ಮತ್ತು ಡಿ.ಕೆ. ರವಿ ಅವರ ಕಥೆಯಾ? ಎಂದು ಹಲವರು ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಕಾಲ್ಪನಿಕ ಕಥೆ. ಇದೊಂದು ಮರ್ಡರ್ ಮಿಸ್ಟ್ರಿ. ಇಲ್ಲಿ ರಾಗಿಣಿ ...

ಸೆಟ್ಟೇರಿತು ಸೂರಿ-ಯುವ ಸಿನಿಮಾ… ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

ಸೆಟ್ಟೇರಿತು ಸೂರಿ-ಯುವ ಸಿನಿಮಾ… ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ.. ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್‌ ಪಿಆರ್‌ಕೆ-ಕೆಆರ್‌ಜಿ-ಜಯಣ್ಣ ಫಿಲ್ಮಂ ಬ್ಯಾನರ್‌ನಡಿ ಮತ್ತೊಂದು ಸಿನಿಮಾ..ಯುವ-ರಿತನ್ಯಾಗೆ ಸೂರಿ ಆಕ್ಷನ್‌ ಕಟ್‌  ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಈ ಪ್ರೊಡಕ್ಷನ್ಸ್‌ ನಡಿ ಹೊಸ ಸಿನಿಮಾ ಘೋಷಣೆಯಾಗಿದೆ. ಬಹಳ ದಿನಗಳಿಂದ ಕೇಳಿ ಬರ್ತಿದ್ದ ಯುವರಾಜ್‌ಕುಮಾರ್‌ ಹಾಗೂ ಸುಕ್ಕ ಸೂರಿ ಸಿನಿಮಾಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಅಕ್ಷಯ ತೃತೀಯದಿನವಾದ ಇಂದು ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಸ್ಯಾಂಡಲ್‌ವುಡ್‌ ಸಲಗ ದುನಿಯಾ ವಿಜಯ್‌ಕುಮಾರ್‌ ಕ್ಲ್ಯಾಪ್‌ ಮಾಡಿದ್ದು, ಅಪ್ಪು ಅವರ ಮಗಳು ಧೃತಿ ಪುನೀತ್ ರಾಜ್ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಫ್ಯಾಮಿಲಿ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಕಾರ್ತಿಕ್‌ ಗೌಡ, ಯೋಗಿ ಜಿ ರಾಜ್‌, ನಿರ್ದೇಶಕ ಸೂರಿ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿ...

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕೊತ್ತಲವಾಡಿ...

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕೊತ್ತಲವಾಡಿ... ಮಾಸ್ ಅವತಾರದಲ್ಲಿ ಪೃಥ್ವಿ ಅಂಬರ್... ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್‌ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ. PA Productions ಮೊದಲ ಪ್ರಯತ್ನಕ್ಕೆ ಕೊತ್ತಲವಾಡಿ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಶ್ರೀರಾಜ್ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.  ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಕೊತ್ತಲವಾಡಿಯಲ್ಲಿ ಕಂಪ್ಲೀಟ್ ಮಾಸ್ ಗೆಟಪ್ ತೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್...