Skip to main content

ಹೊಸತಂಡದ‌ "ದಿ" ಚಿತ್ರಕ್ಕೆ ಸಾಥ್ ನೀಡಿದ‌ ಖ್ಯಾತ ಸಂಭಾಷಣೆಗಾರ ಮಾಸ್ತಿ...

ಹೊಸತಂಡದ‌ "ದಿ" ಚಿತ್ರಕ್ಕೆ ಸಾಥ್ ನೀಡಿದ‌ ಖ್ಯಾತ ಸಂಭಾಷಣೆಗಾರ ಮಾಸ್ತಿ...
ಹೊಸಕಥೆ ಆಧಾರಿತ ಈ ಚಿತ್ರ ಮೇ 16ರಂದು ತೆರೆಗೆ..
ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ ಹೊಸತಂಡದ ಹೊಸಪ್ರಯತ್ನ "ದಿ" ಚಿತ್ರದ ಬಿಡುಗಡೆ ದಿನಾಂಕವನ್ನು ಕನ್ನಡ ಚಿತರಂಗದ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಬಿಡುಗಡೆ ಮಾಡಿದ್ದಾರೆ. ಹೊಸಕಥೆ ಆಧರಿಸಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ವಿಜಯ್ ಸಿನಿಮಾಸ್ ಅವರು ವಿಶಾಲ ಕರ್ನಾಟಕಕ್ಕೆ ಈ ಸಿನಿಮಾವನ್ನು ಹಂಚಿಕೆ ಮಾಡಲಿದ್ದಾರೆ. 

ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿ ಮಾತನಾಡಿದ ಮಾಸ್ತಿ ಅವರು, ಹೊಸ ರೀತಿಯ ಪ್ರಯತ್ನದೊಂದಿಗೆ ಹೊಸಬರು ಚಿತ್ರರಂಗ ಪ್ರವೇಶಿಸಬೇಕು. ಚಿತ್ರದ ತುಣುಕು ನೋಡಿದಾಗ ಈ ಚಿತ್ರ ಸಹ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ ಅನಿಸಿತು. ಕನ್ನಡ ಜನತೆ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ವಿನಯ್ ವಾಸುದೇವ್, ಕಾರ್ಯಕಾರಿ ನಿರ್ಮಾಪಕ ಸತೀಶ್ ಕುಮಾರ್ ಟಿಎಲ್ ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.
ಅಲೆನ್ ಭರತ್ ಛಾಯಾಗ್ರಹಣ, ಯು.ಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ ಹಾಗೂ ಸಿದ್ದಾರ್ಥ್ ಆರ್ ನಾಯಕ್ ಅವರ ಸಂಕಲನವಿರುವ 'ದಿ" ಚಿತ್ರದ ತಾರಾಬಳಗದಲ್ಲಿ ವಿನಯ್ ವಾಸುದೇವ್, ದಿಶಾ ರಮೇಶ್, ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಬಲಾ ರಾಜವಾಡಿ, ಕಾಮಿಡಿ ಕಿಲಾಡಿ ಚಂದ್ರು, ಡಾಲಾ ಶರಣ್, ಕಲಾರತಿ ಮಹಾದೇವ ಮುಂತಾದವರಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...