Skip to main content

ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ..

ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ..ಎಸ್ ರಮೇಶ್(ಬನಶಂಕರಿ) ನಿರ್ಮಾಣದ ಹಾಗೂ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರದಲ್ಲಿ ರಾಗಿಣಿ ದ್ವಿವೇದಿ - ಧರ್ಮ ಕೀರ್ತಿರಾಜ್ ನಟನೆ...
ಎಸ್ ರಮೇಶ್(ಬನಶಂಕರಿ) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಸಿಂಧೂರಿ" ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.
 ನಿರ್ದೇಶಕನಾಗಿ ಇದು ನನಗೆ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಶಂಕರ್ ಕೋನಮಾನಹಳ್ಳಿ, ಮೇ 10 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಸಕಲೇಶಪುರ ಮುಂತಾದ ಕಡೆ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಶೀರ್ಷಿಕೆ ಕೇಳಿದರೆ, ರೋಹಿಣಿ ಸಿಂಧೂರಿ ಮತ್ತು ಡಿ.ಕೆ. ರವಿ ಅವರ ಕಥೆಯಾ? ಎಂದು ಹಲವರು ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಕಾಲ್ಪನಿಕ ಕಥೆ. ಇದೊಂದು ಮರ್ಡರ್ ಮಿಸ್ಟ್ರಿ. ಇಲ್ಲಿ ರಾಗಿಣಿ ಮತ್ತು ಧರ್ಮ ಕೀರ್ತಿರಾಜ್ ಜೋಡಿಯಾಗಿ ನಟಿಸುತ್ತಿಲ್ಲ. ರಾಗಿಣಿ ಅವರು ಕಥೆಗೆ ಟರ್ನಿಂಗ್‍ ಪಾಯಿಂಟ್‍ ನೀಡುವ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾನು ‘ಬಿಂಗೋ’ ಚಿತ್ರದ ಚಿತ್ರೀಕರಣ ಮಾಡುವಾಗ, ರಾಗಿಣಿ ಅವರಿಗೆ ನನ್ನ ಕೆಲಸ ಇಷ್ಟವಾಗಿ, ಜೊತೆಯಾಗಿ ಇನ್ನೊಂದು ಸಿನಿಮಾ ಮಾಡೋಣ ಎಂದರು. ಆ ಸಂದರ್ಭದಲ್ಲಿ ಒಂದು ಕಥೆ ಹೇಳಿದೆ. ಅವರಿಗೆ ಇಷ್ಟವಾಗಿ ಈ ಚಿತ್ರ ಮಾಡೋಣ ಎಂದರು. ಚಿತ್ರಕಥೆ ಬರೆದೆ. ನಿರ್ಮಾಪಕರಿಗೂ ಓಕೆ ಆಯಿತು. ಇಂದು ಚಿತ್ರ ಪ್ರಾರಂಭವಾಗಿದೆ. ಸಾಮಾನ್ಯವಾಗಿ ಧರ್ಮ ಅವರು ಚಾಕಲೋಟ್‍ ಬಾಯ್‍ ಆಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಅವರದ್ದು ವಿರುದ್ಧವಾದ ಪಾತ್ರ. ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಚಿತ್ರದ ನಾಯಕಿ ಹಾಗೂ ಉಳಿದ ತಾರಾಬಳಗದ ಬಗ್ಗೆ ಸದ್ಯದಲ್ಲೇ ತಿಳಿಸುತ್ತೇವೆ ಎಂದರು.
ಏಳೆಂಟು ವರ್ಷಗಳ ಹಿಂದೆ ‘ವಿಕ್ಕಿ’ ಎಂಬ ಚಿತ್ರ ಮಾಡಿದ್ದೆ. ನಿರ್ದೇಶಕರು ಮೋಸ ಮಾಡಿ ಹೋದರು. ಕೊನೆಗೆ ನಾನು ಚಿತ್ರ ಮುಗಿಸಿ ಬಿಡುಗಡೆ ಮಾಡಿದೆ. ಮುಂದೆ ಚಿತ್ರ ಮಾಡಬಾರದು ಎಂದು ನಿರ್ಧರಿಸಿದ್ದೆ. ಶಂಕರ್ ಬಂದು ಕಥೆ ಹೇಳಿದರು. ಬನಶಂಕರಮ್ಮನ ಆಶೀರ್ವಾದದಿಂದ ಒಂದೊಳ್ಳೆಯ ದಿನದಂದು ಚಿತ್ರ ಪ್ರಾರಂಭಿಸಿದ್ದೇನೆ ಎಂದು ನಿರ್ಮಾಪಕ ಎಸ್ ರಮೇಶ್ (ಬನಶಂಕರಿ) ತಿಳಿಸಿದರು.
 ಚಿತ್ರಕ್ಕೆ ಇಂದು ಒಳ್ಳೆಯ ಆರಂಭ ಸಿಕ್ಕಿದೆ. ಮಹಿಳಾ ಪ್ರಧಾನ ಚಿತ್ರ ಮಾಡುವುದು ಸವಾಲಿನ ಕೆಲಸ. ಜನರನ್ನು ಚಿತ್ರಮಂದಿರಗಳಿಗೆ ಕರೆತರುವುದು ಕಷ್ಟ. ಹೀಗಿರುವಾಗ, ಒಂದು ವಿಭಿನ್ನ ಕಥೆಗಾಗಿ ಎಲ್ಲರೂ ಹುಡುಕಾಟದಲ್ಲಿದ್ದಾರೆ. ಇವತ್ತಿನ ಟ್ರೆಂಡ್‍ಗೆ ಚಿತ್ರ ಮಾಡಬೇಕೆಂದರೆ ಮೊದಲು ನಾವು ಬದಲಾಗಬೇಕು. ಈ ಚಿತ್ರದ ಕಥೆ ಅಸಾಧಾರಣವಾಗಿದೆ ಅಂತಲ್ಲ. ವಿಭಿನ್ನವಾಗಿದೆ. ಹೆಸರಲ್ಲೇ ಕೆಂಪು ಬಣ್ಣವಿದೆ. ಉಗ್ರವಾಗಿದೆ. ದುರ್ಗೆಯ ಶಕ್ತಿ, ಸರಸ್ವತಿಯ ಬುದ್ಧಿ, ಲಕ್ಷ್ಮಿಯ ಸಮೃದ್ಧಿ ಇದೆ. ಈ ಚಿತ್ರದಲ್ಲಿ ಎಲ್ಲಾ ಪಾತ್ರಗಳಿಗೂ ಮಹತ್ವವಿದೆ. ಚಿತ್ರದಲ್ಲಿ ಪ್ರೇಕ್ಷಕರನ್ನು ಹಿಡಿದಿಡುವ ಎಲ್ಲಾ ಅಂಶಗಳು ಸಹ ಇವೆ. ‘ಬಿಂಗೋ’ ಶುರುವಾದಾಗಲೇ ಈ ಚಿತ್ರದ ಬಗ್ಗೆ ಮಾತನಾಡಿಕೊಂಡಿದ್ದೆವು. ಇದೊಂದು ಆ್ಯಕ್ಷನ್‍ ಕಮರ್ಷಿಯಲ್‍ ಚಿತ್ರವಾಗಲಿದೆ ಎಂದು ರಾಗಿಣಿ ದ್ವಿವೇದಿ ಹೇಳಿದರು.
 ಶೀರ್ಷಿಕೆ ಕೇಳಿದರೆ ಇದೊಂಂದು ಮಹಿಳಾ ಪ್ರಧಾನ ಚಿತ್ರ ಅಂತ ಅನಿಸುತ್ತದೆ. ನನ್ನ ಪಾತ್ರದ ಬಗ್ಗೆ ಕೇಳಿ ಬಹಳ ಖುಷಿಯಾಯಿತು. ಇಲ್ಲಿ ನಾನು ಮತ್ತು ರಾಗಿಣಿ ಅವರು ಜೋಡಿಯಲ್ಲ. ನಮ್ಮಿಬ್ಬರ ನಡುವೆ ಸಾಕಷ್ಟು ಹಗ್ಗಜಗ್ಗಾಟವಿದೆ. ಒಂದೊಳ್ಳೆಯ ತಂಡದ ಜೊತೆಗೆ ಕೆಲಸ ಮಾಡುತ್ತಿರುವ ಖುಷಿ ಇದೆ ಎಂದು ತಮ್ಮ ಪಾತ್ರದ ಬಗ್ಗೆ ನಟ ಧರ್ಮ ಕೀರ್ತಿರಾಜ್ ತಿಳಿಸಿದರು.
ನಟ ನಾರಾಯಣಸ್ವಾಮಿ, ರಮೀಜ್ ರಾಕಿ, ಛಾಯಾಗ್ರಾಹಕ ರಾಕೇಶ್‍ ಸಿ ತಿಲಕ್, ಸಂಗೀತ ನಿರ್ದೇಶಕ ಹಿತನ್ ಹಾಸನ್‍ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್‍ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.