Skip to main content

Posts

Showing posts from May, 2025

ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ನಾಯಕರಾಗಿ ನಟಿಸುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರದ ನಿರ್ದೇಶಕ ಜಡೇಶ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ...

ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ನಾಯಕರಾಗಿ ನಟಿಸುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರದ ನಿರ್ದೇಶಕ ಜಡೇಶ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ... ಪೋಸ್ಟರ್ ಬಿಡುಗಡೆ ಮಾಡಿ ನೆಚ್ಚಿನ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ* .   ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಅವರ ಪುತ್ರ ಸೂರಜ್ ಗೌಡ "ಸಾರಥಿ ಫಿಲಂಸ್" ಮೂಲಕ ನಿರ್ಮಾಣ‌ ಮಾಡುತ್ತಿರುವ ಹಾಗೂ ದುನಿಯಾ ವಿಜಯ್, ರಚಿತಾ ರಾಮ್, ರಿತನ್ಯ ಮುಂತಾದವರು ಅಭಿನಯಿಸುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರದ ನಿರ್ದೇಶಕರಾದ ಜಡೇಶ್ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನೆಚ್ಚಿನ ನಿರ್ದೇಶಕನಿಗೆ "ಲ್ಯಾಂಡ್‌ ಲಾರ್ಡ್" ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.  "ಜಂಟಲ್ ಮ್ಯಾನ್", "ಗುರುಶಿಷ್ಯರು" ಚಿತ್ರಗಳ ನಿರ್ದೇಶಕ, "ಕಾಟೇರ" ಚಿತ್ರದ ಲೇಖಕ ಜಡೇಶ ಕೆ ಹಂಪಿ ಅವರು ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ "ಲ್ಯಾಂಡ್ ಲಾರ್ಡ್" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಇದೇ ವರ್ಷದಲ್ಲೇ ತೆರೆಗೆ ಬರುವ ಸಾಧ್ಯತೆ ಇದೆ.  ವಿಜಯ್ ಕುಮಾರ್(ದುನಿಯಾ ವಿಜಯ್) ನಾಯಕರಾಗಿ ನಟಿಸುತ್ತಿರುವ ಈ ಚಿತ್...

ಜೂನ್ 20 ರಂದು ತೆರೆಗೆ ಬರಲಿದೆ ಧರ್ಮ ಕೀರ್ತಿರಾಜ್ ಅಭಿನಯದ "ಬುಲೆಟ್"...

ಜೂನ್ 20 ರಂದು ತೆರೆಗೆ ಬರಲಿದೆ ಧರ್ಮ ಕೀರ್ತಿರಾಜ್ ಅಭಿನಯದ "ಬುಲೆಟ್"... ಟೀಸರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿದೆ ಸತ್ಯಜಿತ್‌ ಶಬ್ಬೀರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ.. ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಬುಲೆಟ್" ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  ನಾನು ಭಾರತಿರಾಜ ಅವರ ನಿರ್ದೇಶನದ "ಪದಿನಾರು ವಯದಿನಿಲೆ" ಚಿತ್ರದಲ್ಲಿ ಅಭಿನಯಿಸುವ ಮೂಲಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ಸಂಗೀತ ನಿರ್ದೇಶಕರಾದ ಇಳಯರಾಜ ಅವರು ಶಬ್ಬೀರ್ ಅಂತ ಇದ್ದ ನನ್ನ ಹೆಸರಿನ ಮುಂದೆ ಸತ್ಯಜಿತ್‌ ಎಂದು ಸೇರಿಸಿದರು. ಅಂದಿನಿಂದ ನನ್ನ ಹೆಸರು ಸತ್ಯಜಿತ್ ಶಬ್ಬೀರ್. ಈವರೆಗೂ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳ 75 ಚಿತ್ರಗಳಲ್ಲಿ ನಟಿಸಿದ್ದೇನೆ. ಮೂಲತಃ ಕರ್ನಾಟಕದವನಾಗಿರುವ ನಾನು ಆನಂತರ ಚೆನ್ನೈ ಹಾಗೂ ಮುಂಬೈ...

ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ...

ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ... ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್‌ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ.‌ ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕ ಅಲೋಕ್ ಬಾಬು (ಆಲ್ ಓಕೆ) ಭಾಗವಹಿಸಿ, 8ನೇ ನಾವಿಕ ಕನ್ನಡ ಸಮಾವೇಶ -2025ರ ಬಗ್ಗೆ ಮಾಹಿತಿ ಹಂಚಿಕೊಂಡರು. ಹಿರಿಯ ನಟ ಶ್ರೀನಾಥ್‌ ಮಾತನಾಡಿ, ವಿಶ್ವದಲ್ಲಿ ಎಲ್ಲೆಲ್ಲೋ ಚದುರಿ ಹೋಗಿರುವ ಕನ್ನಡಿಗರು ಅನೇಕ ಜನ ನಾವಿಕ ವಿಶ್ವ ಕನ್ನಡ ಸಮಾವೇಶ ಬರ್ತಾರೆ. ಅಮೆರಿಕಾ ಮಾತ್ರವಲ್ಲ, ಬೇರೆ ಬೇರೆ ಕಡೆಯಿಂದ ಬರುತ್ತಾರೆ. ಅಮೆರಿಕಾದಲ್ಲಿ ಜನ ಸುಖ ಸಂತೋಷದಿಂದ ಇದ್ದಾರೆ. ಆದ್ರೆ ಅವರಲ್ಲಿ ಸೆಂಟಿಮೆಂಟ್‌ ಕೊರತೆ ಇದೆ. ಇಲ್ಲಿ ಎಲ್ಲಾ ಕೊರತೆ ಇದೆ. ಸೆಂಟಿಮೆಂಟ್‌ ತುಂಬಾ ಇದೆ. ಆ ಸೆಂಟಿಮೆಂಟ್‌ ಹೃದಯದಲ್ಲಿ ತುಂಬಿಕೊಂಡೆ ಇಲ್ಲಿಂದ ಅಮೆರಿಕಾ ಹೋಗಿದ್ದಾರೆ. ಸೆಂಟಿಮೆಂಟ್‌ ಅವರು ಹತೋರೆಯುತ್ತಾರೆ. ...