Skip to main content

ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ...

ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ...
ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್‌ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ.‌ ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕ ಅಲೋಕ್ ಬಾಬು (ಆಲ್ ಓಕೆ) ಭಾಗವಹಿಸಿ, 8ನೇ ನಾವಿಕ ಕನ್ನಡ ಸಮಾವೇಶ -2025ರ ಬಗ್ಗೆ ಮಾಹಿತಿ ಹಂಚಿಕೊಂಡರು.
ಹಿರಿಯ ನಟ ಶ್ರೀನಾಥ್‌ ಮಾತನಾಡಿ, ವಿಶ್ವದಲ್ಲಿ ಎಲ್ಲೆಲ್ಲೋ ಚದುರಿ ಹೋಗಿರುವ ಕನ್ನಡಿಗರು ಅನೇಕ ಜನ ನಾವಿಕ ವಿಶ್ವ ಕನ್ನಡ ಸಮಾವೇಶ ಬರ್ತಾರೆ. ಅಮೆರಿಕಾ ಮಾತ್ರವಲ್ಲ, ಬೇರೆ ಬೇರೆ ಕಡೆಯಿಂದ ಬರುತ್ತಾರೆ. ಅಮೆರಿಕಾದಲ್ಲಿ ಜನ ಸುಖ ಸಂತೋಷದಿಂದ ಇದ್ದಾರೆ. ಆದ್ರೆ ಅವರಲ್ಲಿ ಸೆಂಟಿಮೆಂಟ್‌ ಕೊರತೆ ಇದೆ. ಇಲ್ಲಿ ಎಲ್ಲಾ ಕೊರತೆ ಇದೆ. ಸೆಂಟಿಮೆಂಟ್‌ ತುಂಬಾ ಇದೆ. ಆ ಸೆಂಟಿಮೆಂಟ್‌ ಹೃದಯದಲ್ಲಿ ತುಂಬಿಕೊಂಡೆ ಇಲ್ಲಿಂದ ಅಮೆರಿಕಾ ಹೋಗಿದ್ದಾರೆ. ಸೆಂಟಿಮೆಂಟ್‌ ಅವರು ಹತೋರೆಯುತ್ತಾರೆ. ಈ ಸಮಾರಂಭದಲ್ಲಿ ಆ ಸೆಂಟಿಮೆಂಟ್‌ ಅನುಭವಿಸುತ್ತಾರೆ. ದೋಣಿ ನಡೆಸುವವರು ನಾವಿಕರು. ಪ್ರತಿ ವರ್ಷವೂ ನಾನು ಅಲ್ಲಿಗೆ ಬಂದಿದ್ದೇನೆ. ಚದುರಿ ಹೋಗಿರುವ ಪ್ರತಿಯೊಬ್ಬ ಕಲಾವಿದನ ಜೊತೆ ಮಾತನಾಡಬೇಕು ಎಂಬ ಆಸೆ. ಅದನ್ನು ಈ ರೀತಿ ಕಾರ್ಯಕ್ರಮಗಳ ಮೂಲಕ ಈಡೇರಿಸಿಕೊಳ್ಳುತ್ತೇವೆ. ಮೂರು ದಿನ ಅಲ್ಲಿ ಕನ್ನಡ, ಕನ್ನಡ ಕಲರವ ಇರಲಿದೆ ಎಂದು ಹೇಳಿದರು.
ಈ ಸಮಾವೇಶದಲ್ಲಿ ಬಿಸಿನೆಸ್ ಫೋರಮ್, ವುಮೆನ್ಸ್ ಫೋರಮ್ ಕವಿ ಗೋಷ್ಠಿ, ಯೂಥ್ ಫೋರಮ್, ಸಾಹಿತ್ಯ ಗೋಷ್ಠಿ ಹೀಗೆ ಅನೇಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಸತತವಾಗಿ ನಡೆಯಲಿವೆ. ಈ ಸಮಾವೇಶದಲ್ಲಿ ಅನಿವಾಸಿಯರು ಮಾತ್ರವಲ್ಲದೇ ಕರ್ನಾಟಕದ ಖ್ಯಾತನಾಮ ಕಲಾವಿದರಿಂದ ವೈವಿದ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
ಈ ಸಮಾವೇಶವ ವಿಶ್ವ ಕನ್ನಡಿಗರು ಸಂಸ್ಥೆಯು ಫ್ಲೋರಿಡಾ ರಾಜ್ಯದಲ್ಲಿರುವ ನಾಲ್ಕು ಪ್ರಮುಖ ಕನ್ನಡ ಸಂಘಗಳಾದ ಶ್ರೀಗಂಧ ಕನ್ನಡ ಕೂಟ. ಟಾಂಪ, ಒರ್ಲಾಂಡೋ ಕನ್ನಡ ಕೂಟ, ನಂದಿ ಕನ್ನಡ ಕೂಟ, ಮಯಾಮಿ, ಮತ್ತು ಸವಿಕನ್ನಡ ಕೂಟ ಜ್ಯಾಕ್ಸನ್ವೆಲ್ ಸಹಯೋಗದೊಂದಿಗೆ ಈ ಬೃಹತ್ ವಿಶ್ವ ಕನ್ನಡ ಸಮಾವೇಶವನ್ನು ಆಯೋಜಿಸುತ್ತಿದೆ. ಈ ಜಾಗತಿಕ ಸಮಾವೇಶವು ನಮ್ಮ ಭಾಷೆ, ಸಂಸ್ಕೃತಿ ಮತ್ತು ಏಕತೆಯನ್ನು ಆಚರಿಸಲು ಖಂಡಗಳಾದ್ಯಂತದ ಸಾವಿರಾರು ಕನ್ನಡಿಗರನ್ನು ಮತ್ತೊಮ್ಮೆ ಒಟ್ಟುಗೂಡಿಸುತ್ತದೆ.
ನಾವಿಕ ಸಂಸ್ಥೆಯ ಅಧ್ಯಕ್ಷರಾದ ಶಿವಕುಮಾರ್ ಮತ್ತು ಸಮ್ಮೇಳನ ಸಂಚಾಲಕರಾದ ಹರ್ಷಿತ್ ಗೌಡ, ಈ ಸಾಂಸ್ಕೃತಿಕ ವೈಭವವನ್ನು 'ಸಾರುವ ಸಮಾವೇಶವನ್ನು ಉತ್ಸಾಹ ಮತ್ತು ದೂರದೃಷ್ಟಿಯಿಂದ ಮುನ್ನಡೆಸುತ್ತಿದ್ದು, ಜನಶಕ್ತಿಯ ಉತ್ಸವವನ್ನಾಗಿ ಮಾಡಲು ಎಲ್ಲ ಕನ್ನಡಿಗರಿಗೆ ಕರೆ ನೀಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅನೇಕ ಸಚಿವರನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು, ಭಾಗವಹಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ, ಕರ್ನಾಟಕ ಮತ್ತು ಅಮೆರಿಕದಾದ್ಯಂತ ಇರುವ ಪ್ರಮುಖ ಮಠಗಳ ಗೌರವಾನ್ವಿತ ಸ್ವಾಮೀಜಿಗಳನ್ನು ಸಹ ಆಶೀರ್ವದಿಸಲು ಆಹ್ವಾನಿಸಲಾಗಿದೆ. ನಟ, ನಿರ್ದೇಶಕ ಹಾಗೂ ನಿರೂಪಕ ರಮೇಶ್ ಅರವಿಂದ್, ಹಿರಿಯ ನಟ, ನಿರ್ಮಾಪಕ ಹಾಗೂ ನಿರ್ದೇಶಕ ಶ್ರೀನಾಥ್ ಮತ್ತು ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ರಾಯಭಾರಿ ರಕ್ಷಿತ್ ಶೆಟ್ಟಿ ಈ ಸಮಾವೇಶದಲ್ಲಿ ಭಾಗವಹಿಸುವುದು ಖಚಿತವಾಗಿದೆ. ಅಲ್ಲದೆ, ಇನ್ನಷ್ಟು ಗಣ್ಯ ವ್ಯಕ್ತಿಗಳು ಈ ಮಹಾ ಕನ್ನಡ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕದ ದಸರಾ ಶೈಲಿಯ ಜಂಬೂ ಸವಾರಿಯಿಂದ ಪ್ರೇರಿತವಾದ ವರ್ಣರಂಜಿತ ಮೆರವಣಿಗೆ ನಡೆಯಲಿದೆ. ಪ್ರಪಂಚದಾದ್ಯಂತದ ಕನ್ನಡ ಕೂಟಗಳು ಕರ್ನಾಟಕ ಜಿಲ್ಲೆಗಳನ್ನು ಪ್ರತಿನಿಧಿಸಲಿವೆ. ಈ ಮೆರವಣಿಗೆಯ ಉದ್ದಕ್ಕೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಜಾನಪದ ಪ್ರದರ್ಶನಗಳು, ಸ್ತಬ್ಧ ಚಿತ್ರಗಳ ಮೂಲಕ ಸಾಂಪ್ರದಾಯಿಕ ಸ್ಮಾರಕಗಳ ಪುನರ್ನಿಮಾಣ ಹಾಗೂ ಕನ್ನಡ ಅಸ್ಮಿತೆಯನ್ನು ಪ್ರತಿಧ್ವನಿಸುವ ಧ್ವಜಗಳು ಮತ್ತು ಸಂಗೀತ ಪ್ರಕಾರಗಳು ಸಾಂಸ್ಕೃತಿಕ ವೈಭವವನ್ನು ಸಾರಲಿವೆ.
ಸಂಗೀತ ರಸ ಸಂಜೆ ಕಾರ್ಯಕ್ರಮ..
ನಾವಿಕ ಕ್ರಿಕೆಟ್ ಟೂರ್ನಮೆಂಟ್ , ಆಧುನಿಕ ವಿಜ್ಞಾನ ಮತ್ತು ಕಾಲಾತೀತ ಆಧ್ಯಾತ್ಮಿಕ ಕಾರ್ಯಕ್ರಮ, ನಾಟಕ, ಕಥೆ ಹೇಳುವುದು, ಕನ್ನಡ ಸಾಹಿತ್ಯದ ಕಿರು ನಾಟಕ ಕಾರ್ಯಕ್ರಮ ಸೇರಿದಂತೆ ಸಂಗೀತ ರಸ ಸಂಜೆ ಕಾರ್ಯಕ್ರಮ ಕೂಡ ನಡೆಯಲಿದೆ. ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಹಾಗೂ ಆಲ್ ಒಕೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.