Skip to main content

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ..

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ..
ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ 
’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಅನಾವರಣ ಕಾರ್ಯಕ್ರಮವು ಕಿಕ್ಕಿರದ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವುದು ಹೊಸ ಅನುಭವ.
      ಶಂಕರ್‌ಶಾನ್‌ಭೋಗ್ ಸೇರಿದಂತೆ ಹಲವು ಗಾಯಕರುಗಳು ಗೀತೆಯ ಸಾಲು ಹಾಡುವುದರ ಮೂಲಕ, ಹಾಗೂ ಕೋಟೆ ರಾಮಚಂದ್ರಭಟ್ ಸಂಸ್ಕ್ರತ ಭಾಷೆಯ ಟ್ರೇಲರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
       ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು ಪಾದ ಇರಿಸಿದ್ದು ಸಮಾರಂಭಕ್ಕೆ ಭೂಷಣ ತಂದುಕೊಟ್ಟಿತು. ಶ್ರೀ ಪಾದರು ಮಾತನಾಡುತ್ತಾ ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. ಕನ್ನಡ ಚಿತ್ರರಂಗ ಲಾಭದಾಯಕವಲ್ಲದ ಪರಿಸ್ಥಿತಿಯಲ್ಲಿ ಸಿನಿಮಾ ಮಾಡಿದ್ದಾರೆ. ಸಂಸ್ಕ್ರತ ಅನ್ನುವುದು ದೇಶಾಂತರಕ್ಕೂ ಸಲ್ಲುವ ಭಾಷೆ. ಆದ್ದರಿಂದ ವಿಸ್ಕ್ರತವಾದಂತ ನೋಡುಗರು, ಕೇಳುಗರು ಇರುತ್ತಾರೆ. ಇದರ ಹಿಂದೆ ಕೈ ಜೋಡಿಸಿದ ಎಲ್ಲರಿಗೂ ಶ್ರೇಯಸು ಸಿಗಲೆಂದು ಶುಭ ನುಡಿಗಳನ್ನು ಹೇಳಿದರು.
     ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ಸುಬ್ರಹ್ಮಣ್ಯ (ಧರ್ಮಾಧಿಕಾರಿಗಳು, ಮುಕ್ತಿನಾಗ ದೇವಸ್ಥಾನ), ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್(ಶಿಲ್ಪಜ್ಞ), ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‌ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿರುವುದು ಚಿತ್ರಕ್ಕೆ ಹಿರಿಮೆ ತಂದುಕೊಟ್ಟಿದೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‌ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.    
 ಈ ಸಂದರ್ಭದಲ್ಲಿ ಕ.ಸುಚೇಂದ್ರಪ್ರಸಾದ ಸಿನಿಮಾ ಹುಟ್ಟಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡು ಮಾಧ್ಯಮದವರ ಇತ್ಯಾಹ್ಮಕ ಸ್ಪಂದನೆ ಸಿಗಬೇಕಿದೆ. ತಾವುಗಳು ನಮ್ಮ ಮನವಿಯನ್ನು ಒಪ್ಪಿಕೊಳ್ಳಬೇಕೆಂದು ಕೋರಿದರು.
     ಸಿನಿಮಾವು ಹಾದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ. ನಮ್ಮಲ್ಲಿ ದೈವೀಕ ಅನುಭೂತಿ ಸ್ಪುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತಿರಿಸಿಕೊಳ್ಳುತ್ತಾ, ಅದರ ಅಗಾದತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗಲಾರಂಭಿಸಿದೆ. ಇದೆಲ್ಲಾವನ್ನು ಸಂಶೋಧಿಸಿ ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ. ನೀವುಗಳು ವ್ಯಾಪಕ ಪ್ರಚಾರ ಮಾಡಿದರೆ, ನಮ್ಮ ಶ್ರಮ ಸಾರ್ಥಕವಾದಂತೆ ಎಂದು ನಿರ್ಮಾಪಕಿ ಎಸ್.ಆರ್.ಲೀಲಾ ಅಭಿಪ್ರಾಯಪಟ್ಟರು.
       ದೇಶದ ಪ್ರಮುಖ ವಿದ್ವಾಂಸರು ಸಭೆಯಲ್ಲಿ ಹಾಜರಿದ್ದುದಲ್ಲದೆ, ಅನೇಕ ಮಠಾದೀಶರು ತಮ್ಮ ಅನುಗ್ರಹ ಸಂದೇಶವನ್ನು ಚಿತ್ರಕ್ಕೆ ದಯಪಾಲಿಸಿದ್ದುದು, ಪತ್ರಿಕಾ ಮುಖಾಮುಖಿಯ ವಿಶೆಷವಾಗಿತ್ತು. ನಿರ್ದೇಶಕರ ಅಚ್ಚುಕಟ್ಟಾದ ಯೋಜನೆ, ಆಕಾಶವಾಣಿಯ ಹಿರಿಯ ಉದ್ಗೋಷಕಿ ಸುಮತಿರವರ ನವಿರಾದ ನಿರೂಪಣೆ ಕಾಯಕ್ರಮ ಯಶಸ್ವಿಯಾಗಲು ಸಹಕಾರಿ ಆಯಿತು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.