Skip to main content

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್..

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್..
ಗಡಿಮೀರಿದ ಪ್ರೇಮಕಥೆ 'ಏಳುಮಲೆ'ಯಿಂದ ಬಂತು ಮೊದಲ ಹಾಡು...
ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್..

ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್‌ ಆಗಿದೆ.

ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತ ಒದಗಿಸಿದ್ದಾರೆ. 

ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶನಾಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್‌ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ.
ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
 
ಸಹ ನಿರ್ದೇಶಕರಾಗಿ, ಗೀತ ಸಾಹಿತಿಯಾಗಿ ‘ಕಾಟೇರ’, ‘ಗುರುಶಿಷ್ಯರು’ ಸೇರಿದಂತೆ ಅನೇಕ ಸಿನಿಮಾಗಳನ್ನು ಮಾಡಿರುವ ಪುನೀತ್‌ ರಂಗಸ್ವಾಮಿ ಈಗ ‘ಏಳುಮಲೆ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಅದ್ವಿತ್‌ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮನ್‌ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್‌‌ ಆಗುತ್ತಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...