Skip to main content

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..
 'ಫ್ಲರ್ಟ್' ಚಂದನ್ ಕುಮಾರ್ ನಟನೆ, ನಿರ್ದೇಶನದ ಶೈಲಿಗೆ ಪ್ರಶಂಸೆಯ ಸುರಿಮಳೆ.. ಯುವ ಸಿಸಿಎಲ್ ಪ್ರತಿಭೆ ಚಂದನ್ ಕೈಲಿ ಅರಳಿದ ಫ್ಲರ್ಟ್ ಕಥಾನಕ 
 ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು 
ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಫ್ರೆಂಡ್ ಶಿಪ್ ಆಂಥೆಮ್ ನ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು.     
   ‌‌‌‌ಫ್ಲರ್ಟ್ ಚಿತ್ರದಲ್ಲಿ ನಟಿಸುವ ಜತೆಗೆ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನೂ ಸಹ ಚಂದನ್ ಕುಮಾರ್ ಅವರೇ ಹೊತ್ತಿದ್ದಾರೆ. ಅಲ್ಲದೆ ಎವರೆಸ್ಟ್ ಪಿಕ್ಚರ್ಸ್ ಬ್ಯಾನರ್ ಅಡಿ ಚಂದನ್ ಅವರ ಪತ್ನಿ ಕವಿತಾಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ಇದಕ್ಕೆ ವಿವರಣೆಯನ್ನೂ ಚಂದನ್ ನೀಡಿದ್ದಾರೆ.   
 ವಿಶೇಷವಾಗಿ ಸುದೀಪ್ ಅವರ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿದ್ದಾರೆ. 
ಹಾಡಿನ ಬಿಡುಗಡೆ ಸಂದರ್ಭದಲ್ಲಿ‌ ‌ಸುದೀಪ್‌ ಅವರು ಚಂದನ್ ಗೆ ವಿಡಿಯೋ ಮೂಲಕ ಶುಭ ಹಾರೈಸಿದರು.
   ಈ ಸಂದರ್ಭದಲ್ಲಿ ನಾಯಕ, ನಿರ್ದೇಶಕ ಚಂದನ್ ಮಾತನಾಡುತ್ತ ಇದೊಂದು ರೋಮ್ ಕಾಮ್ ಸಿನಿಮಾ ಆದರೂ ಫ್ರೆಂಡ್ ಶಿಪ್, ಲವ್, ಹೀಗೆ ಎಲ್ಲಾ ಥರದ ಎಂಟರ್ ಟೈನಿಂಗ್ ಎಲಿಮೆಂಟ್ಸ್ ಒಳಗೊಂಡಿದೆ. ಫ್ಲರ್ಟ್ ಎಂದರೆ ಬರೀ ಚುಡಾಯಿಸುವುದು ಎಂದರ್ಥವಲ್ಲ. ಗಾಢವಾದ ಪ್ರೀತಿಯನ್ನೂ ಸಹ ಫ್ಲರ್ಟ್ ಎಂದೇ ಕರೆಯುತ್ತಾರೆ ಎಂದು ಮಾತು ಆರಂಭಿಸಿದ ಚಂದನ್, ಎಲ್ಲರ ಡವ್ ನಲ್ಲೂ ಒಂದೊಂದು ಲವ್ ಇದೆ ಎನ್ನುತ್ತಾರೆ. ಈ ಚಿತ್ರದಲ್ಲಿ ರೋಮ್ ಕಾಮ್ ಜತೆಗೆ ಸೈಕೋ ಕ್ಯಾರೆಕ್ಟರ್ ಕೂಡ ಇದೆ. ಇಡೀ ಚಿತ್ರ ಎಲ್ಲೂ ಬೋರಾಗದಂತೆ ಫಾಸ್ಟ್ ಆಗಿ ಸಾಗುತ್ತದೆ. ಈಗ ರಿಲಿಸಾಗಿರುವ ಫ್ರೆಂಡ್ ಶಿಪ್ ಆಂಥೆಮ್ ಸಾಂಗನ್ನು ಸುದೀಪ್ ಹಾಡಿದ್ದಾರೆ ಎಂದು ಹೇಳಿದರು.
 ಹಿರಿಯ ನಟಿ ಶೃತಿ, ಸಾಧು ಕೋಕಿಲ ಅವರೂ ಒಂದೊಳ್ಳೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಿರಿ ನನ್ನ ಸ್ನೇಹಿತನಾಗಿ ನಟಿಸಿದ್ದಾರೆ. ಇಬ್ಬರು ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ ಎಂದು ವಿವರಿಸಿದರು.
   ನಟ ಸಾಧು ಕೋಕಿಲ ಮಾತನಾಡುತ್ತ ನಾನು ಸಾಮಾನ್ಯವಾಗಿ ಕಾರ್ಯಕ್ರಮಗಳಿಗೆ ಕೈಕೊಡೋದೇ ಜಾಸ್ತಿ. ಆದರೆ ಈತ ಸಬ್ಜೆಕ್ಟ್ ಮಾಡಿಕೊಂಡಿರುವ ರೀತಿ ನನಗೆ ತುಂಬಾ ಇಷ್ಟವಾಯಿತು. ನಿರ್ದೇಶಕನೇ ನಿರ್ಮಾಪಕನಾದಾಗ ಜವಾಬ್ದಾರಿ ಜಾಸ್ತಿ ಇರುತ್ತದೆ. ಒಂದೊಳ್ಳೇ ಥಾಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ನನ್ನದೂ ಸಹ ನಾನು ಈವರೆಗೆ ಮಾಡಿರದಂಥ ರೋಲ್,ಅವರ ನಿರ್ದೇಶನದ ಶೈಲಿ ಇಷ್ಟವಾಯಿತು. ನಾನಿಷ್ಟೊತ್ತು ಮಾತಾಡ್ತಿದ್ದೇನೆಂದರೆ ಅದಕ್ಕೆ ಕಾರಣ ಚಂದನ್ ಎಂದು ನಾಯಕ, ನಿರ್ದೇಶಕನನ್ನು ಹಾಡಿ ಹೊಗಳಿದರು.
      ನಾಯಕಿಯರಾದ ನಿಮಿಕಾ ರತ್ನಾಕರ್ ಅಕ್ಷತಾ ಬೋಪಣ್ಣ ಮಾತನಾಡುತ್ತ ಈ ಚಿತ್ರದ ಕಥೆ, ನಿರೂಪಣೆಯೇ ವಿಭಿನ್ನವಾಗಿದೆ. ಇಂಥ ಒಂದು ಚಿತ್ರದ ಭಾಗವಾಗಿರುವುದಕ್ಕೆ ನಮಗೆ ತುಂಬಾ ಖುಷಿಯಾಯ್ತು ಎಂದು ಹೇಳಿಕೊಂಡರು.
    ನಂತರ ಸ್ನೇಹಿತನ‌ ಪಾತ್ರ ಮಾಡಿರೋ ಗಿರಿ, ಮೂಗು ಸುರೇಶ್, ತಂತಮ್ಮ ಕ್ಯಾರೆಕ್ಟರ್ ಬಗ್ಗೆ ಮಾತಾಡಿದರು.
    ಜಸ್ಸಿ ಗಿಫ್ಟ್ ಈ ಚಿತ್ರದ ಸಂಗೀತ ನಿರ್ದೇಶಕರಾಗಿದ್ದು ಉಳಿದ 3 ಹಾಡುಗಳ ಜತೆಗೆ ಹಿನ್ನೆಲೆ ಸಂಗೀತವನ್ನೂ ಅವರೇ ಒದಗಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.