Skip to main content

ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’. 
‘ಸಂಕಷ್ಟಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ‘ಅಬ್ಬಬ್ಬ!’ ಖ್ಯಾತಿಯ ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಚಿತ್ರ ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಾಯಕ ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಒಂದು ಸಮಯದಲ್ಲಿ ಉದಯ ಮ್ಯೂಸಿಕ್ ನಲ್ಲಿ ಜನಪ್ರಿಯ ನಿರೂಪಕರಾಗಿದ್ದ ಲಿಖಿತ್ ಶೆಟ್ಟಿ ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕಳೆದ ವರ್ಷ ತೆರೆಕಂಡ ಕೆ. ಎಮ್. ಚೈತನ್ಯ ನಿರ್ದೇಶನದ ಅಬ್ಬಬ್ಬ ಚಿತ್ರದಲ್ಲಿ ಕೂಡ ನಾಯಕನಾಗಿ ಗಮನ ಸೆಳೆದಿದ್ದರು. ‘ಫುಲ್ ಮೀಲ್ಸ್’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ತೊಡಗಿಸಿಕೊಂಡಿರುವ ಲಿಖಿತ್ ಶೆಟ್ಟಿ ತಮ್ಮ ಹಿಂದಿನ ಸಿನೆಮಾಗಳಿಗಿಂತ ಹೆಚ್ಚಿನ ಯಶಸ್ಸನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಸಿನೆಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಂಪೂರ್ಣವಾಗಿ ಮುಗಿದಿದ್ದು, ಸಿನೆಮಾ ಚೆನ್ನಾಗಿ ಮೂಡಿ ಬಂದಿದೆ ಎಂಬ ಖುಷಿಯಲ್ಲಿ ಚಿತ್ರತಂಡವಿದೆ, ಚಿತ್ರದ ಪ್ರಚಾರ ಕಾರ್ಯದ ಮೊದಲ ಹಂತವಾಗಿ, ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ದಿನ ಪೋಸ್ಟರ್ ಜೊತೆ, ಸಿನೆಮಾ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ. ಮುಂದಿನ ಹಂತಗಳಲ್ಲಿ ಚಿತ್ರದ ಹಾಡು ಮತ್ತು ಟ್ರೈಲರ್ ಬಿಡುಗಡೆಯೊಂದಿಗೆ ಮತ್ತಷ್ಟು ಪ್ರಚಾರ ಮಾಡುತ್ತಾ ನವೆಂಬರ್ ಇಪ್ಪತ್ತೊಂದಕ್ಕೆ ‘ಫುಲ್ ಮೀಲ್ಸ್’ ಸವಿಯಲು ಜನರನ್ನು ಚಿತ್ರಮಂದಿರದತ್ತ ಬರುವಂತೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ. 
ಫುಲ್ಸ್ ಮೀಲ್ಸ್ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ. ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.
ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದಾರೆ. ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, , ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ.
ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...