Skip to main content

ಕನ್ನಡ ಚಿತ್ರರಂಗದ ದಿಗ್ಗಜರಿಂದ 'ಕಸ್ಟಡಿ' ಹಾಗೂ 'ಪಾಲ್ಗುಣಿ' ಚಿತ್ರಗಳ ಟ್ರೇಲರ್ ಬಿಡುಗಡೆ..

ಕನ್ನಡ ಚಿತ್ರರಂಗದ ದಿಗ್ಗಜರಿಂದ 'ಕಸ್ಟಡಿ' ಹಾಗೂ 'ಪಾಲ್ಗುಣಿ' ಚಿತ್ರಗಳ ಟ್ರೇಲರ್ ಬಿಡುಗಡೆ..
 ಇದೇ‌ ಮೊದಲ ಬಾರಿಗೆ ಒಂದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿರುವ, ಒಬ್ಬರೆ ನಿರ್ದೇಶಕ ನಿರ್ದೇಶಿಸಿರುವ ಎರಡು ಚಿತ್ರಗಳು ಒಂದೇ ದಿನ(ಆಗಸ್ಟ್ 8) ಬಿಡುಗಡೆ..
ನಾಗೇಶ್ ಕುಮಾರ್ ಯು.ಎಸ್ & ಜೆ.ಜೆ.ಶ್ರೀನಿವಾಸ್ ನಿರ್ಮಿಸಿರುವ, ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿರುವ "ಕಸ್ಟಡಿ" ಹಾಗೂ "ಪಾಲ್ಗುಣಿ" ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಎರಡು ಚಿತ್ರಗಳ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಗೌ. ಕಾರ್ಯದರ್ಶಿ ಪ್ರವೀಣ್ ಕುಮಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವನಾಥ್, ನಿರ್ಮಾಪಕರಾದ ಭಾ.ಮ.ಹರೀಶ್, ಎಂ.ಜಿ.ರಾಮಮೂರ್ತಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"ಕಸ್ಟಡಿ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೆ, "ಪಾಲ್ಗುಣಿ" ಮಂಡ್ಯದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿದ ಕಥಾಹಂದರ ಹೊಂದಿರುವ ಚಿತ್ರ. "ಭೀಮ" ಖ್ಯಾತಿಯ ಪ್ರಿಯಾ ಅವರು "ಕಸ್ಟಡಿ" ಚಿತ್ರದ ಪ್ರಮುಖಪಾತ್ರದಲ್ಲಿ, ರೇಖಾಶ್ರೀ ಅವರು "ಪಾಲ್ಗುಣಿ" ಪಾತ್ರದಲ್ಲಿ ನಟಿಸಿದ್ದಾರೆ. ನನ್ನ ನಿರ್ದೇಶನದ ಎರಡು ಚಿತ್ರಗಳನ್ನು ನಾಗೇಶ್ ಕುಮಾರ್ ಯು.ಎಸ್ ಅವರೆ ನಿರ್ಮಾಣ ಮಾಡಿದ್ದಾರೆ. ನನಗೆ ತಿಳಿದ ಹಾಗೆ ಒಬ್ಬರೆ ನಿರ್ಮಿಸಿರುವ ಹಾಗೂ ಒಬ್ಬರೆ ನಿರ್ದೇಶಿಸಿರುವ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಈ ಎರಡು ಚಿತ್ರಗಳು ಆಗಸ್ಟ್ 8 ರಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ ಬಿಡುಗಡೆಯಾಗುತ್ತಿದೆ. ನಮ್ಮ ಎರಡು ಚಿತ್ರಗಳಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಜೆ.ಜೆ.ಶ್ರೀನಿವಾಸ್.
ನಮ್ಮ ಎರಡು ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಇಷ್ಟು ಜನ ಗಣ್ಯರು ಬಂದು ಹಾರೈಸಿದ್ದು ಬಹಳ ಖುಷಿಯಾಗಿದೆ. ಅವರಿಗೆಲ್ಲಾ ಧನ್ಯವಾದ. ಇನ್ನೂ ಈ ಎರಡು ಚಿತ್ರಗಳು ವಿಭಿನ್ನ ಜಾನರ್ ನ ಸಿನಿಮಾಗಳು. ಚಿತ್ರತಂಡದ ಸಹಕಾರದಿಂದ ಎರಡು ಚಿತ್ರಗಳು ಆಗಸ್ಟ್ 8 ರಂದು ತೆರೆಗೆ ಬರುತ್ತಿದೆ. ನಾವೇ ಕೆಲವು ಸ್ನೇಹಿತರು ಸೇರಿ ಈ ಚಿತ್ರಗಳನ್ನು ವಿತರಣೆ ಕೂಡ ಮಾಡುತ್ತಿದ್ದೇವೆ‌ ಎಂದು ನಿರ್ಮಾಪಕ ನಾಗೇಶ್ ಕುಮಾರ್ ಯು ಎಸ್ ತಿಳಿಸಿದರು.
ನನಗೆ ನಿರ್ದೇಶಕರು ಬಂದು ಕಥೆ ಹೇಳಿದ್ದು ಬೇರೆ ಚಿತ್ರದ್ದು. ಆದರೆ, ಮೂರುದಿನಗಳು ಬಳಿಕ ಮತ್ತೊಂದು ಕಥೆ ಹೇಳಿದರು. ಅದೇ "ಕಸ್ಟಡಿ" ಚಿತ್ರದ ಕಥೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ. ದುರ್ಗಾ ಪರಮೇಶ್ವರಿ ನನ್ನ ಪಾತ್ರದ ಹೆಸರು ಎಂದರು‌ "ಭೀಮ" ಚಿತ್ರದ ಖ್ಯಾತಿಯ ನಟಿ ಪ್ರಿಯಾ.
"ಪಾಲ್ಗುಣಿ" ನನ್ನ ಅಭಿನಯದ ನಾಲ್ಕನೇ ಚಿತ್ರ. ಈ ಚಿತ್ರದಲ್ಲಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. "ಪಾಲ್ಗುಣಿ" ನನ್ನ ಪಾತ್ರದ ಹೆಸರು ಎಂದು ನಟಿ ರೇಖಾಶ್ರೀ ತಿಳಿಸಿದರು.
ನಾನು "ಕಸ್ಟಡಿ" ಹಾಗೂ "ಪಾಲ್ಗುಣಿ" ಎರಡು ಚಿತ್ರಗಳಲ್ಲೂ ನಟಿಸಿದ್ದೇನೆ. "ಕಸ್ಟಡಿ" ಚಿತ್ರಕ್ಕೆ ಸಂಕಲನವನ್ನೂ ಮಾಡಿದ್ದೇನೆ ಎಂದು ನಾಗೇಂದ್ರ ಅರಸ್ ಹೇಳಿದರು.ನಿರ್ಮಾಪಕ "ಚಿಂಗಾರಿ" ಮಹದೇವು, ವಿಕ್ಟರಿ ವಾಸು, ಆರಾಧ್ಯ, ವಿನ್ಯಾ ಶೆಟ್ಟಿ, "ಚೀತಾ" ಸೀನು, ಶ್ರೀನಿವಾಸ್,‌ ಮ್ಯಾಜಿಕ್ ರಮೇಶ್, ಅಶ್ವಿತ ಸೇರಿದಂತೆ "ಕಸ್ಟಡಿ" ಹಾಗೂ "ಪಾಲ್ಗುಣಿ" ಚಿತ್ರಗಳ ಕಲಾವಿದರು ಹಾಗೂ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...