Skip to main content

ಏಳುಮಲೆ ಟ್ರೇಲರ್ ರಿಲೀಸ್... ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್..

ಏಳುಮಲೆ ಟ್ರೇಲರ್ ರಿಲೀಸ್... 
ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್..
ಪ್ರಾಮಿಸಿಂಗ್ ಆಗಿದೆ ಏಳುಮಲೆ ಟ್ರೇಲರ್..
ತರುಣ್ ಸಿನಿಮಾಗೆ ಧನಂಜಯ್-ಶರಣ್-ನವೀನ್..
ಗಡಿನಾಡ ಪ್ರೇಮಕಥೆ ಏಳುಮಲೆ ಟ್ರೇಲರ್ ಅನಾವರಣ...ಸಾಥ್ ಕೊಟ್ಟ ಶರಣ್-ಡಾಲಿ-ನವೀನ್..
ಕರ್ನಾಟಕ - ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್ ರಿಲೀಸ್ ಮಾಡಲಾಯಿತು. ಕಾರ್ಯಕ್ರಮಕ್ಕೆ ನಟರಾದ ಡಾಲಿ ಧನಂಜಯ್, ನವೀನ್ ಶಂಕರ್ ಹಾಗೂ ಶರಣ್ ವಿಶೇಷ ಮೆರುಗು ನೀಡಿದರು. 
ಟ್ರೇಲರ್ ಬಿಡುಗಡೆ ಬಳಿಕ ನಟ ಶರಣ್ ಮಾತನಾಡಿ, ಕನ್ನಡದ ಇವೆಂಟ್ ಇಷ್ಟು ಜನರ ಮುಂದೆ ನಡೆಯುತ್ತಿದೆ ಎನ್ನುವುದು ಈ ಚಿತ್ರದ ನಿಜವಾದ ಗೆಲುವು ಇಲ್ಲಿಂದ ಶುರುವಾಗಿದೆ. ಈ ಚಿತ್ರದ ರಿಯಲ್ ಹೀರೋ ತರುಣ್. ಅವರು ಒಂದು ಸಿನಿಮಾದ ಆಯ್ಕೆ ಹೇಗಿದೆ ಅನ್ನೋದಕ್ಕೆ ನನ್ನ ಜರ್ನಿ ಸಾಕ್ಷಿ. ಅವರು ನನ್ನ ಸಿನಿಮಾಗಳ ಕಥೆ ಆಯ್ಕೆ ಮಾಡುತ್ತಾರೆ. ಏಳುಮಲೆ ಟ್ರೇಲರ್ ನೋಡಿದರೆ ಸಿನಿಮಾ ನೋಡ್ಲೇಬೇಕು ಎನಿಸುತ್ತದೆ. ಇದು ಕಂಟೆಂಟ್ ಸಿನಿಮಾ. ಈ ಚಿತ್ರ ದೊಡ್ಡ ಹಿಟ್ ಆಗಲಿದೆ ಎಂಬ ನಂಬಿಕೆ ಇದೆ ಎಂದರು. 
ನಟ ಡಾಲಿ ಧನಂಜಯ್ ಮಾತನಾಡಿ, ಏಳುಮಲೆ ಟೀಸರ್ ನೋಡಿದಾಗಿನಿಂದಲೂ ಬಹಳ ಖುಷಿ ಇದೆ. ತರುಣ್, ರಾಣಾಗೆ ಮೆಸೇಜ್ ಮಾಡಿ ಬಹಳ‌ ಎನರ್ಜಿ ಇದೆ ಎಂದಿದ್ದೆ. ತುಂಬಾ ದಿನ ಆಯ್ತು ಈ ರೀತಿ ಲವ್ ಸ್ಟೋರಿ ನೋಡದೆ. ಸಿನಿಮಾವನ್ನು ತುಂಬಾ ಫ್ಯಾಷನೆಟೆಡ್ ಆಗಿ ಮಾಡಿದ ಯಾವ ಪ್ರಯತ್ನ ಕೂಡ ಇಲ್ಲಿವರೆಗೂ ಸೋತಿಲ್ಲ. ಈ ತಂಡದಲ್ಲಿ ಪ್ರಾಮಾಣಿಕತೆ ಎದ್ದು ಕಾಣಿಸುತ್ತಿದೆ. ಆ ಪ್ರಾಮಾಣಿಕತೆಯೇ ಈ ಸಿನಿಮಾ ಗೆಲ್ಲಿಸುತ್ತದೆ ಎಂಬ ನಂಬಿಕೆ ಇದೆ. ನಂದು ತರುಣ್ ಅವರದ್ದು ಬ್ರದರ್ಸ್ ಸಂಬಂಧ. ಸಿನಿಮಾವನ್ನೇ ನಂಬಿಕೆಕೊಂಡು ಸಿನಿಮಾದಿಂದ ದುಡಿದು ಮತ್ತೆ ಸಿನಿಮಾ ಮಾಡುವುದು ಸವಾಲು. ಸಿನಿಮಾದಲ್ಲಿ ಕನಸು ಮಾತ್ರ ತೋರಿಸಲಾಗುತ್ತದೆ. ಅದಕ್ಕಾಗಿ ಫ್ಯಾಷನ್, ರಿಸ್ಕ್ ತೆಗೆದುಕೊಳ್ಳಬೇಕು. ಅದನ್ನು ತರುಣ್ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ನಟ ನವೀನ್ ಶಂಕರ್ ಮಾತನಾಡಿ, ಟ್ರೇಲರ್ ಬಹಳ ಚೆಂದ ಇದೆ. ಪೋಸ್ಟರ್, ಟೀಸರ್ ನೋಡಿದಲೂ ಇಷ್ಟವಾಗಿತ್ತು. ಇಂಟೆನ್ಸ್ ಎಮೋಷನ್, ಮುದ್ದಾದ ಜೋಡಿ, ಹೋರಾಟದ ಜರ್ನಿ, ಒಳ್ಳೊಳ್ಳೆ ನಟರು, ಒಳ್ಳೆ ಮ್ಯೂಸಿಕ್ ಇದೆ. ನಮ್ಮ ಟೂರಿಸ್ಟ್ ನ ಟ್ಯಾಗ್ ಲೈನ್ ಒಂದು ರಾಜ್ಯ , ಹಲವು ಜಗತ್ತು. ಈ ಸಿನಿಮಾದಲ್ಲಿ ನೀವು ಇನ್ನೊಂದು ಜಗತ್ತು ನೋಡುತ್ತೀರಾ. ಎಲ್ಲಾ ಭಾಗದ ಕಥೆಗಳು ತೆರೆಗೆ ಬರಬೇಕು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. 

ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ಒಬ್ಬ ನಿರ್ದೇಶಕನಾಗಿ ನನಗೆ ಏನೂ ದುಡಿಮೆ ಬರುತ್ತದೆ ಅದನ್ನು ಇಟ್ಕೊಂಡು ಸಿನಿಮಾ ಮಾಡುತ್ತೇನೆ. ಅದಕ್ಕೆ ಅಟ್ಲಾಂಟಾ ನಾಗೇಂದ್ರ ಅವರು ನೈತಿಕ ಬೆಂಬಲವಾಗಿ ನಿಲ್ಲುತ್ತಾರೆ.‌ ತುಂಬಾ ಶ್ರಮ ಹಾಕಿ ಸಿನಿಮಾ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಂದ ಈ ಚಿತ್ರ ಮಾಡಿದ್ದಾರೆ. ಇದು ಪುನೀತ್ ಸಿನಿಮಾ. ಇದು ಅವನ ಪ್ರಾಮಾಣಿಕತೆ. ಏಳುಮಲೆ ಪ್ರೀತಿಯೇ ಪರಮ ಶ್ರೇಷ್ಠ ಎಂದು ಹೇಳುತ್ತದೆ. ಇದನ್ನು ನಾವು ಥ್ರಿಲ್ಲರ್ ಮೂಲಕ ಹೇಳುತ್ತಿದ್ದೇವೆ. ಇದು ನಿಮ್ಮನ್ನು ನಿರಾಶೆ ಮಾಡುವುದಿಲ್ಲ ಎಂದರು.

ಏಳುಮಲೆ ಸಿನಿಮಾ ಇದೇ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ, ಮಹಾನಟಿ ಖ್ಯಾತಿಯ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಏಳುಮಲೆಯ ಭಾಗವಾಗಿದ್ದಾರೆ.

ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಹೊಂದಿರುವ ಈ ಪ್ರಾಜೆಕ್ಟ್ ಗೆ ತರುಣ್ ಕಿಶೋರ್ ಸುಧೀರ್ ಅವರು ಬಂಡವಾಳ ಹೂಡಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಸಹ ನಿರ್ಮಾಪಕರಾಗಿ ಜೊತೆಯಾಗಿ ನಿಂತಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ನಾಗಾರ್ಜುನ ಶರ್ಮಾ ಸಾಹಿತ್ಯ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮಾನ್ ಸಂಗೀತ ಈ ಸಿನಿಮಾಗಿದೆ.

ಹೇಗಿದೆ ಟ್ರೇಲರ್?
ಏಳುಮಲೆ ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದೆ. ಆಕ್ಷನ್, ಎಮೋಷನ್, ಒಂದೊಳ್ಳೆ ಲವ್ ಸ್ಟೋರಿ ಜೊತೆಗೆ ಥ್ರಿಲ್ಲಿಂಗ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಒಂದೊಳ್ಳೆ ಕಥೆಯನ್ನು ಚಿತ್ರತಂಡ ಪ್ರೇಕ್ಷಕರಿಗೆ ಉಣಬಡಿಸುವ ಕಾತರದಲ್ಲಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.