Skip to main content

ಮಿರಾಯ್ ಟ್ರೇಲರ್ ರಿಲೀಸ್.. ಸೂಪರ್ ಯೋಧನಾಗಿ ಬಂದ ತೇಜ ಸಜ್ಜಾ..

ಮಿರಾಯ್ ಟ್ರೇಲರ್ ರಿಲೀಸ್.. ಸೂಪರ್ ಯೋಧನಾಗಿ ಬಂದ ತೇಜ ಸಜ್ಜಾ..
ನಿರೀಕ್ಷೆ ಹೆಚ್ಚಿಸಿದ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೇಲರ್...
ಭರ್ಜರಿ ವಿಷ್ಯುವಲ್ ಟ್ರೀಟ್..

ಹನುಮಾನ್ ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಿದ್ದ ತೇಜ ಸಜ್ಜಾ ಈಗ ಸೂಪರ್ ಯೋಧನಾಗಿ ಮತ್ತೆ ಎಂಟ್ರಿ‌ ಕೊಟ್ಟಿದ್ದಾರೆ. ಬಹು ನಿರೀಕ್ಷಿತ ಮಿರಾಯ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಪ್ರೇಕ್ಷಕರಿಗೆ ಭರ್ಜರಿ ವಿಷ್ಯುವಲ್ ಟ್ರೀಟ್ ನೀಡಿದ್ದಾರೆ. ಮೂರು ನಿಮಿಷ ಏಳು ಸೆಕೆಂಡ್ ಇರುವ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ತೇಜ ಸಜ್ಜಾ ಹೋರಾಟ ಮಾಡ್ತಾರೆ. ಅವರ ವಿರುದ್ಧ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಜೊತೆಗೆ ಪುರಾಣದ ಕಥೆಯನ್ನು ಸೊಗಸಾಗಿ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಧರ್ಮ ರಕ್ಷಕನಾಗಿ ತೇಜ ಸಜ್ಜಾ ಹೋರಾಟ ನಡೆಸುತ್ತಾರೆ. ಟ್ರೇಲರ್ ಕೊನೆಯಲ್ಲಿ ಬರುವ ಭಗವಾನ್ ಶ್ರೀರಾಮ ಝಲಕ್ ಪ್ರೇಕ್ಷಕರಿಗೆ ರೋಮಾಂಚನ ನೀಡಲಿದೆ.
ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದ್ದಾರೆ. ರಿತಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. 

ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಸೆಪ್ಟೆಂಬರ್ 12ರಂದು ಮಿರಾಯ್ ಸಿನಿಮಾ 2D ಮತ್ತು 3D ಫಾರ್ಮಾಟ್ನಲ್ಲಿ ಏಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಈ ಚಿತ್ರವನ್ನು ವಿಕೆ‌ ಫಿಲ್ಮ್ ಬ್ಯಾನರ್ ನಡಿ ಹೊಂಬಾಳೆ ಫಿಲ್ಮ್ ರಿಲೀಸ್ ಮಾಡುತ್ತಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...