Skip to main content

ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು 'ಓಂ ಶಿವಂ' ಚಿತ್ರದ ಟ್ರೇಲರ್..

ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು 'ಓಂ ಶಿವಂ' ಚಿತ್ರದ ಟ್ರೇಲರ್..ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಸೆಪ್ಟೆಂಬರ್ 5 ರಂದು ತೆರೆಗೆ..
ಚಿತ್ರರಂಗದೊಂದಿಗೆ ಹಲವು ವರ್ಷಗಳ ನಂಟಿರುವ ಅಲ್ವಿನ್ ನಿರ್ದೇಶನದ, ದೀಪಾ ಮೂವೀಸ್ ಲಾಂಛನದಲ್ಲಿ ಕೆ.ಎನ್.ಕೃಷ್ಣ ಅವರು ನಿರ್ಮಿಸಿರುವ ಹಾಗೂ ಭಾರ್ಗವ ಕೃಷ್ಣ ಮತ್ತು ವಿರಾನಿಕ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಓಂ ಶಿವಂ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುನಿ ಅವರಿಗೆ ಧನ್ಯವಾದ ಎಂದು ಮಾತನಾಡಿದ ನಿರ್ದೇಶಕ ಆಲ್ವಿನ್, ನಮ್ಮ ಚಿತ್ರಕ್ಕೆ ಆರಂಭದ ದಿನದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಈಗಾಗಲೇ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಅವರು ಸಂಗೀತ ನೀಡಿರುವ ನಮ್ಮ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದೆ. ನಾಲ್ಕನೇ ಹಾಡನ್ನು ಲೂಸ್ ಮಾದ ಯೋಗಿ ಅವರು ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಲಿದ್ದಾರೆ. ಇಂದು ಟ್ರೇಲರ್ ಅನಾವರಣವಾಗಿದೆ. ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿದೆ. ಸೆಪ್ಟೆಂಬರ್ 5 ರಂದು ಚಿತ್ರ ತೆರೆಗೆ ಬರಲಿದೆ. ವಿಜಯ್ ಸಿನಿಮಾಸ್ ಅವರು ವಿತರಣೆ ಮಾಡುತ್ತಿದ್ದಾರೆ. ಇದೊಂದು ಲವ್ ಮತ್ತು ಆ್ಯಕ್ಷನ್ ಚಿತ್ರ. ಎರಡು ಜಾನರ್‌ನಲ್ಲಿ ಸಿನಿಮಾ ಸಾಗುತ್ತದೆ. ಇಂದಿನ ಹುಡುಗ-ಹುಡುಗಿ ಪ್ರೀತಿ ಉಳಿಸಿಕೊಳ್ಳಲು ಹೇಗೆಲ್ಲಾ ಹೊರಾಡುತ್ತಾರೆ ಎಂಬ ಕಥೆ ಜೊತೆಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಗಮನ ಸೆಳೆಯುತ್ತದೆ ಎಂದು ಹೇಳಿದರು. 
ಚಿತ್ರದ ನಿರ್ಮಾಪಕ ಕೃಷ್ಣ ಕೆ.ಎನ್ ಮಾತನಾಡಿ, 20 ವರ್ಷಗಳ ಹಿಂದೆ ನಾನೇ ನಾಯಕನಾಗುವ ಆಸೆ‌ ಇತ್ತು. ಅದು ಆಗಲಿಲ್ಲ. ಈಗ ನನ್ನ ಮಗ ಭಾರ್ಗವ ಕೃಷ್ಣ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾನೆ. ನಾನು ಕೂಡ ನಿರ್ಮಾಣದ ಜೊತೆಗೆ ಪೊಲೀಸ್ ಅಧಿಕಾರಿ ಪಾತ್ರ ಕೂಡ ಮಾಡಿದ್ದೇನೆ. ನಿರ್ದೇಶಕ ಆಲ್ವಿನ್ ಅವರು ಒಂದೊಳ್ಳೆ ಚಿತ್ರ ಮಾಡಿದ್ದಾರೆ. ಚಿತ್ರ ಉತ್ತಮವಾಗಿ ಬರಲು ಚಿತ್ರತಂಡ ಸಾಥ್ ನೀಡಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲೂ "ಓಂ ಶಿವಂ" ನಿರ್ಮಾಣವಾಗಿದೆ. ಆದರೆ, ಸೆಪ್ಟೆಂಬರ್ 5 ಮೊದಲು ಕನ್ನಡದಲ್ಲಿ ಮಾತ್ರ ಈ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.
ನಾನು ದುಬೈನಲ್ಲಿ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಮುಗಿಸಿದ್ದೇನೆ. ಚಿತ್ರೀಕರಣದ ಸಮಯದಲ್ಲಿ ಅಲ್ಲಿಂದಲೇ ಓಡಾಡುತ್ತಿದೆ.‌ ಆಲ್ವಿನ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಇದೆ. ಶಿವ ನನ್ನ ಪಾತ್ರದ ಹೆಸರು. ಚಿತ್ರೀಕರಣಕ್ಕೂ ಮುನ್ನ ತಯಾರಿ ಮಾಡಿಕೊಂಡು ಆನಂತರ ನಟಿಸಿದ್ದೇನೆ. ಲವ್, ಆಕ್ಷನ್, ಸೆಂಟಿಮೆಂಟ್ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ನಮ್ಮ ತಂದೆ ಕೃಷ್ಣ ಅವರೆ ಈ ಚಿತ್ರದ ನಿರ್ಮಾಪಕರು. ವಿರಾನಿಕ ಶೆಟ್ಟಿ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಕಾಕ್ರೋಜ್ ಸುಧೀ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದು ನಾಯಕ ಭಾರ್ಗವ ಕೃಷ್ಣ ತಿಳಿಸಿದರು.
ಚಿತ್ರದ ಆರಂಭದಿಂದಲೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ನಾಯಕಿ ವಿರಾನಿಕ ಶೆಟ್ಟಿ, ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. 
ಚಿತ್ರದಲ್ಲಿ ನಟಿಸಿರುವ ನಟ ವರ್ಧನ್ ತೀರ್ಥಹಳ್ಳಿ, ನಟಿ ಅಪೂರ್ವ ಮುಂತಾದ ಚಿತ್ರತಂಡದ ಸದಸ್ಯರು "ಓಂ ಶಿವಂ" ಬಗ್ಗೆ ಮಾತನಾಡಿದರು. ವೀರೇಶ್ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.

.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.