Skip to main content

ಹೊಂದಿಸಿ ಬರೆಯಿರಿ ನಿರ್ದೇಶಕರ ಹೊಸ ಸಾಹಸ 'ತೀರ್ಥರೂಪ ತಂದೆಯವರಿಗೆ' ಸಿನಿಮಾದ ಮೊದಲ ಹಾಡು ರಿಲೀಸ್..

ಹೊಂದಿಸಿ ಬರೆಯಿರಿ ನಿರ್ದೇಶಕರ ಹೊಸ ಸಾಹಸ 'ತೀರ್ಥರೂಪ ತಂದೆಯವರಿಗೆ' ಸಿನಿಮಾದ ಮೊದಲ ಹಾಡು ರಿಲೀಸ್..
'ತೀರ್ಥರೂಪ ತಂದೆಯವರಿಗೆ' ಸಿನಿಮಾದ ಭಾವನಾತ್ಮಕ ಹಾಡು ರಿಲೀಸ್..

ಹೊಂದಿಸಿ ಬರೆಯಿರಿ ಸಿನಿಮಾ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ಅವರ ಹೊಸ ಪ್ರಯತ್ನ ತೀರ್ಥರೂಪ ತಂದೆಯವರಿಗೆ. ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನನದೇ ಜಗದಲಿ ಎಂಬ ಹಾಡಿಗೆ ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಗಳನ್ನು ಪೊಣಿಸಿದ್ದಾರೆ. ಭಾವನಾತ್ಮಕವಾಗಿ ಸಾಗುವ ಗೀತೆ ನೋಡುಗರನ್ನು ಕಾಡುತ್ತದೆ. ಸುಂದರ ದೃಶ್ಯಗಳ ಜೊತೆಯಲ್ಲಿ ಕಾಡುವ ಸಾಹಿತ್ಯ ಹಾಗೂ ಜೋ‌ ಕೋಸ್ಟ ಸಂಗೀತವಿರುವ ನನದೇ ಜಗದಲಿ ಸಾಂಗ್ ಗೆ ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ತೀರ್ಥರೂಪ ತಂದೆಯವರಿಗೆ ಎಂಬ ಶೀರ್ಷಿಕೆ ಇದ್ದರೂ ಕೂಡ ಇಲ್ಲಿ ಅಮ್ಮ ಮಗನ ಬಾಂಧವ್ಯ ಅನಾವರಣಗೊಳಿಸುವ ಮೂಲಕ ನಿರ್ದೇಶಕರು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದಾರೆ. 
ತೆಲುಗಿನ ಕಿರುತೆರೆಯಲ್ಲಿ ಹೆಸರು ಮಾಡಿರುವ ಕನ್ನಡದ ಹುಡುಗ ನಿಹಾರ್ ಮುಕೇಶ್ ನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಸಾಥ್ ಕೊಡುತ್ತಿದ್ದಾರೆ. ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ ಸೇರಿದಂತೆ ಅನುಭವಿ ತಾರಾಬಳಗದ ಜೊತೆ‌ ಹೊಸ‌ ಪ್ರತಿಭೆಗಳಿಗೆ ಜಗನ್ನಾಥ್ ಅವರು ಅವಕಾಶ ನೀಡಿದ್ದಾರೆ.
'ತೀರ್ಥರೂಪ ತಂದೆಯವರಿಗೆ’ ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ‘ಬ್ಲಿಂಕ್’ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ದೀಪಕ್ ಯರಗೇರಾ ಅವರು ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಮಾಡುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಸಂಭಾಷಣೆ ಬರೆದಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.