Skip to main content

ಪ್ಯಾನ್- ಇಂಡಿಯಾ ಸ್ಟಾರ್‌ ಪ್ರಭಾಸ್ ಅಭಿನಯದ 'ದಿ ರಾಜಾಸಾಬ್' ಟ್ರೈಲರ್ ಬಿಡುಗಡೆ!

ಪ್ಯಾನ್- ಇಂಡಿಯಾ ಸ್ಟಾರ್‌ ಪ್ರಭಾಸ್ ಅಭಿನಯದ 'ದಿ ರಾಜಾಸಾಬ್' ಟ್ರೈಲರ್ ಬಿಡುಗಡೆ!
ಬಹುನಿರೀಕ್ಷಿತ ರೆಬೆಲ್ ಸ್ಟಾರ್ ಪ್ರಭಾಸ್ ಅವರ ಪ್ಯಾನ್-ಇಂಡಿಯಾ ಚಿತ್ರ 'ದಿ ರಾಜಾಸಾಬ್' ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಅಭಿಮಾನಿಗಳಿಗೆ ಥ್ರಿಲ್‌ ನೀಡುವುದರ ಜತೆಗೆ ಅಚ್ಚರಿಗೆ ದೂಡಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದಾರೆ. ಹಾರರ್‌ ಕಾಮಿಡಿ ಶೈಲಿಯ ಈ ಸಿನಿಮಾದಲ್ಲಿ, ಹೃದಯಸ್ಪರ್ಶಿ ಭಾವನೆಗಳನ್ನೂ ಬೆರೆಸಿದ್ದಾರೆ ನಿರ್ದೇಶಕ ಮಾರುತಿ.   

ಭಾರತದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ
ಭಾರತದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ ಎಂದು ಬಿಂಬಿಸಲಾಗಿರುವ 'ದಿ ರಾಜಾಸಾಬ್', ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಮೂಲಕವೇ ಎಲ್ಲರನ್ನು ನಿಬ್ಬೆರಗಾಗಿಸಿದೆ. ಈ ಚಿತ್ರವು ಭಾರತದಲ್ಲಿ ಇದುವರೆಗೆ ಕಾಣದ ಅತಿದೊಡ್ಡ ಹಾರರ್ ಸೆಟ್ ಹೊಂದಿದೆ. ನೋಡುಗರನ್ನು ಭಯಕ್ಕೆ ಕೆಡವುದರ ಜತೆಗೆ ಆ ದೃಶ್ಯ ವೈಭವವನ್ನು ಮೀರಿ, ಪ್ರೀತಿ, ಕುಟುಂಬ ಮತ್ತು ಪೂರ್ವಜರ ಪರಂಪರೆಯ ವಿಷಯಗಳನ್ನು ಈ ಸಿನಿಮಾದಲ್ಲಿ ಹೇಳಿದ್ದಾರೆ ನಿರ್ದೇಶಕರು. ಬ್ಲಾಕ್ಬಸ್ಟರ್ ಸಿನಿಮಾ 'ಕಲ್ಕಿ 2898 ಎಡಿ' ನಂತರ ಮತ್ತೆ ದೊಡ್ಡ ಪರದೆಗೆ ಮರಳುತ್ತಿದ್ದಾರೆ ಪ್ರಭಾಸ್ . ಅವರ ನಟನಾ ಮೋಡಿ, ಮೈನವಿರೇಳಿಸುವ ಆಕ್ಷನ್‌ ಮಿಶ್ರಣ, ಹೊಸ ಪ್ರಭಾಸ್‌ ಎದುರಾಗುವ ಸೂಚನೆ ನೀಡಿದಂತಿದೆ. 
ದಾಖಲೆ ಸೃಷ್ಟಿಸಿದ ಟ್ರೈಲರ್ ಬಿಡುಗಡೆ..
ಸಿನಿಮಾ ಬಿಡುಗಡೆಗೆ ಸುಮಾರು ಮೂರು ತಿಂಗಳ ಮುಂಚೆಯೇ 3 ನಿಮಿಷಗಳಿಗಿಂತ ಹೆಚ್ಚಿನ ಅವಧಿಯ ಟ್ರೇಲರ್‌ಅನ್ನು ಬಿಡುಗಡೆ ಮಾಡುವ ಮೂಲಕ ನಿರ್ಮಾಪಕರು ಚಿತ್ರದ ಭವ್ಯತೆಯ ಬಗ್ಗೆ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಟ್ರೈಲರ್ ಬಿಡುಗಡೆಯನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದ 105 ಚಿತ್ರಮಂದಿರಗಳಲ್ಲಿ ಸಾಮೂಹಿಕ ಪ್ರದರ್ಶನಗಳೊಂದಿಗೆ ಸೆಲೆಬ್ರೇಟ್‌ ಮಾಡಲಾಯಿತು. ಅಭಿಮಾನಿಗಳು ಹರ್ಷೋದ್ಗಾರ ಮತ್ತು ಶಿಳ್ಳೆಗಳ ನಡುವೆ ಟ್ರೈಲರ್ ಅನಾವರಣವಾಯಿತು. ಟ್ರೈಲರ್ ಏಕಕಾಲದಲ್ಲಿ ಪೀಪಲ್ ಮೀಡಿಯಾ ಫ್ಯಾಕ್ಟರಿಯ ಡಿಜಿಟಲ್ ವೇದಿಕೆಗಳಲ್ಲಿ ಬಿಡುಗಡೆಯಾಗಿ, ವಿಶ್ವಾದ್ಯಂತ ಅಭಿಮಾನಿಗಳಿಗೆ ಉತ್ಸಾಹಕ್ಕೆ ಒಗ್ಗರಣೆ ಹಾಕಿದೆ.
ನಿರ್ದೇಶಕ ಮತ್ತು ನಿರ್ಮಾಪಕರ ಅಭಿಪ್ರಾಯ..
'ದಿ ರಾಜಾಸಾಬ್' ಟ್ರೈಲರ್ ಬಿಡುಗಡೆಯ ಬಗ್ಗೆ ಮಾತನಾಡಿರುವ ನಿರ್ದೇಶಕ ಮಾರುತಿ, "ದಿ ರಾಜಾಸಾಬ್‌" ಚಿತ್ರದೊಂದಿಗೆ, ನಾವು ಪ್ರತಿ ಅರ್ಥದಲ್ಲಿಯೂ ಭವ್ಯವಾದ, ಭಾವನಾತ್ಮಕವಾದ ಮತ್ತು ಮನರಂಜನೆಯ ಪ್ರಪಂಚವನ್ನು ಸೃಷ್ಟಿಸಲು ಬಯಸಿದ್ದೇವೆ. ಟ್ರೈಲರ್ ಕೇವಲ ಸಣ್ಣ ಝಲಕ್‌ ಮಾತ್ರ. ಪ್ರಭಾಸ್ ಈ ಪಾತ್ರಕ್ಕೆ ಸಾಟಿಯಿಲ್ಲದ ಶಕ್ತಿಯಾಗಿದ್ದಾರೆ ಎಂದಿದ್ದಾರೆ.

ಪೀಪಲ್ ಮೀಡಿಯಾ ಫ್ಯಾಕ್ಟರಿಯ ಟಿಜಿ ವಿಶ್ವ ಪ್ರಸಾದ್ ಮಾತನಾಡಿ, "ಭಾರತದ ಅತಿದೊಡ್ಡ ಹಾರರ್ ಸೆಟ್ ನಿರ್ಮಿಸುವುದರಿಂದ ಹಿಡಿದು ರೆಬೆಲ್ ಸ್ಟಾರ್ ಪ್ರಭಾಸ್‌ ಅವರ ಹೊಸ ಅವತಾರ ಸೃಷ್ಟಿಸುವುದು ನಿಜಕ್ಕೂ ಒಂದು ಸ್ಮರಣೀಯ ಅನುಭವ. ಈ ಪ್ಯಾನ್-ಇಂಡಿಯಾ ವೈಭವವನ್ನು ನೋಡುಗ ಪ್ರತಿಯೊಬ್ಬರಿಗೂ ಉಣಬಡಿಸುವುದು ನಮ್ಮ ಗುರಿಯಾಗಿದೆ. ಆನ್‌ಲೈನ್‌ನಲ್ಲಿ ಮತ್ತು ಚಿತ್ರಮಂದಿರಗಳಲ್ಲಿ ಟ್ರೈಲರ್‌ಗೆ ಸಿಕ್ಕಿರುವ ಅಗಾಧ ಪ್ರತಿಕ್ರಿಯೆ, ಈ ಚಿತ್ರವು ಎಲ್ಲೆಡೆ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತದೆ ಎಂಬ ನಮ್ಮ ನಂಬಿಕೆಯಿದೆ ಎಂದಿದ್ದಾರೆ. 

ತಾರಾಗಣ ಮತ್ತು ತಾಂತ್ರಿಕ ವಿವರ..
ರೆಬೆಲ್ ಸ್ಟಾರ್ ಪ್ರಭಾಸ್ ಅವರೊಂದಿಗೆ ಸಂಜಯ್ ದತ್, ಬೋಮನ್ ಇರಾನಿ, ಜರೀನಾ ವಹಾಬ್, ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿಧಿ ಕುಮಾರ್ ನಟಿಸಿದ್ದಾರೆ. ಟಿಜಿ ವಿಶ್ವ ಪ್ರಸಾದ್ ಮತ್ತು ಕೃತಿ ಪ್ರಸಾದ್ ಅವರು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ ಈ ಚಿತ್ರಕ್ಕೆ ಥಮನ್ ಎಸ್ ಸಂಗೀತ ನೀಡಿದ್ದಾರೆ. ಅಂದಹಾಗೆ, 'ದಿ ರಾಜಾಸಾಬ್' ಚಿತ್ರವು 2026ರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅಂದರೆ, ಜನವರಿ 9, 2026 ರಂದು ವಿಶ್ವಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.