Skip to main content

ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ..

ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ.. 
ಒಂದು ಕಾಲದಲ್ಲಿ ಚಿತ್ರದ ಆಡಿಯೊ ಹಿಟ್ ಆಯಿತೊ ಇಲ್ಲವೋ ಎಂದು ನಿರ್ಧಾರವಾಗುತ್ತಿದ್ದದ್ದು ಎಷ್ಟು ಕ್ಯಾಸೆಟ್ ಗಳು ಮಾರಾಟವಾಯಿತು ಎಂಬುದರ ಆಧಾರದ ಮೇಲೆ. ಅದರೆ ಕಾಲ ಬದಲಾದಂತೆ 
ಕ್ಯಾಸೆಟ್ ಗಳನ್ನು ಬಹುತೇಕ ಎಲ್ಲರೂ ಮರೆತು ಹೋಗಿರುವ ಸಂದರ್ಭದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ ತಮ್ಮ ಚಿತ್ರದ ‘ವಾಹ್ ಏನೋ ಹವಾ’ ಹಾಡನ್ನು ಕ್ಯಾಸೆಟ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಎಲ್ಲರನ್ನೂ ಹಳೆಯ ನೆನಪುಗಳಿಗೆ ದೂಡುವುದರೊಂದಿಗೆ ತಮ್ಮ ಕ್ರಿಯಾತ್ಮಕ ಪ್ರಯತ್ನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.. 
ವಿಜಯ ನಗರದ ಮಾರುತಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಫುಲ್ ಮೀಲ್ಸ್ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ ಆಶ್ಚರ್ಯ ಕಾದಿತ್ತು.. ಚಿತ್ರದ ಸಂಗಿತ ನಿರ್ದೇಶಕ ಗುರುಕಿರಣ್, ನಾಯಕ ಲಿಖಿತ್ ಶೆಟ್ಟಿ, ನಿರ್ದೇಶಕ ಎನ್ ವಿನಾಯಕ ನಾಯಕಿಯರಾದ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಹಾಡಿನ ಕ್ಯಾಸೆಟ್ ಅನ್ನು ಪ್ರದರ್ಶಿಸಿ ವಿಭಿನ್ನವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಗುರು ಕಿರಣ್ ಟೇಪ್ ರೆಕಾರ್ಡರ್ ನಲ್ಲಿ ಹಾಡನ್ನು ಹಾಕುವ ಮುಖಾಂತರ ಹಾಡನ್ನು ಲೋಕಾರ್ಪಣೆ ಮಾಡಿ, ನೆರೆದಿದ್ದ ಎಲ್ಲರೂ ಕೆಲಕಾಲ ಹಳೆಯ ನೆನಪುಗಳನ್ನು ಮೆಲಕು ಹಾಕುವಂತೆ ಮಾಡಿದರು.. ಬಿಡುಗಡೆಯಾದ ‘ವಾಹ್ ಏನೋ ಹವಾ’ ಮೆಲೋಡಿ ಪ್ರೇಮಗೀತೆ ಎಲ್ಲರ ಗಮನ ಸೆಳೆಯಿತು.. 
ಕವಿರಾಜ್ ಸಾಹಿತ್ಯವಿರುವ ಈ ಹಾಡು ಡಿಜಿಕೆ ಆಡಿಯೋ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.. ವಿಜೇತ್ ಅರಸ್ ಮತ್ತು ಸುನಿಧಿ ಗಣೇಶ್ ಹಾಡಿಗೆ ಧ್ವನಿಯಾಗಿದ್ದಾರೆ.. 
ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುರುಕಿರಣ್ ಸಂಗೀತವನ್ನು ಪ್ರಸ್ತುತಪಡಿಸುವ ರೀತಿ ಬದಲಾಗಬಹುದು ಆದರೆ ಸಂಗೀತ ಎಂದಿಗೂ ಬದಲಾಗುವುದಿಲ್ಲ, ಈಗಿನ ಪೀಳಿಗೆಯ ಟ್ರೆಂಡ್ ಗೆ ತಕ್ಕಂತೆ ಮಾಡಿರುವ ಫುಲ್ ಮೀಲ್ಸ್ ನ ಹಾಡುಗಳನ್ನು ಪ್ರೆಕ್ಷಕರು ಮೆಚ್ಚುಕೊಳ್ಳುತ್ತಾರೆ ಎಂದರು. 
 ಫುಲ್ಸ್ ಮೀಲ್ಸ್ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ. ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. 
ನವೆಂಬರ್ ಇಪ್ಪತ್ತೊಂದಕ್ಕೆ ಸಿನೆಮಾ ಬಿಡುಗಡೆ ದಿನಾಂಕ ನಿಗದಿ ಮಾಡಿಕೊಂಡಿರುವ ಚಿತ್ರತಂಡ ಮುಂದಿನ ಹಂತಗಳಲ್ಲಿ ಚಿತ್ರದ ಉಳಿದ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯೊಂದಿಗೆ ಮತ್ತಷ್ಟು ಪ್ರಚಾರ ಮಾಡುತ್ತಾ ನವೆಂಬರ್ ಇಪ್ಪತ್ತೊಂದಕ್ಕೆ ‘ಫುಲ್ ಮೀಲ್ಸ್’ ಸವಿಯಲು ಜನರನ್ನು ಚಿತ್ರಮಂದಿರದತ್ತ ಬರುವಂತೆ ಮಾಡುವ ಗುರಿಯನ್ನು ಹೊಂದಿದೆ.
ಒಂದು ಸಮಯದಲ್ಲಿ ಉದಯ ಮ್ಯೂಸಿಕ್ ನಲ್ಲಿ ಜನಪ್ರಿಯ ನಿರೂಪಕರಾಗಿದ್ದ ಲಿಖಿತ್ ಶೆಟ್ಟಿ ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕಳೆದ ವರ್ಷ ತೆರೆಕಂಡ ಕೆ. ಎಮ್. ಚೈತನ್ಯ ನಿರ್ದೇಶನದ ಅಬ್ಬಬ್ಬ ಚಿತ್ರದಲ್ಲಿ ಕೂಡ ನಾಯಕನಾಗಿ ಗಮನ ಸೆಳೆದಿದ್ದರು. ‘ಫುಲ್ ಮೀಲ್ಸ್’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ತೊಡಗಿಸಿಕೊಂಡಿರುವ ಲಿಖಿತ್ ಶೆಟ್ಟಿ ತಮ್ಮ ಹಿಂದಿನ ಸಿನೆಮಾಗಳಿಗಿಂತ ಹೆಚ್ಚಿನ ಯಶಸ್ಸನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, , ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...