Skip to main content

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ "kite ಬ್ರದರ್ಸ್"..

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ "kite ಬ್ರದರ್ಸ್"..
 ಭಜರಂಗ ಸಿನೆಮಾ ಲಾಂಛನದಲ್ಲಿ ಮಂಜುನಾಥ್ ಬಿ.ಎಸ್, ರಜನಿಕಾಂತ್ ರಾವ್ ಹಾಗೂ ಮಂಜುನಾಥ್ ಬಗಾಡೆ ನಿರ್ಮಿಸಿರುವ ಹಾಗೂ ವಿರೇನ್ ಸಾಗರ್ ಬಗಾಡೆ ನಿರ್ದೇಶಿಸಿರುವ "KITE ಬ್ರದರ್ಸ್" ಚಿತ್ರ ನವೆಂಬರ್ 14ರಂದು ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 
 "kite ಬ್ರದರ್ಸ್" ಮಕ್ಕಳ ಚಿತ್ರವಾದರೂ, ಎಲ್ಲಾ ವಯಸ್ಸಿನವರೂ ನೋಡಬೇಕಾದ ಉತ್ತಮ ಸಂದೇಶವಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವಿರೇನ್ ಸಾಗರ್ ಬಗಾಡೆ, ಹಳೆಯ ಸರ್ಕಾರಿ ಶಾಲೆಗಳನ್ನು ಸರ್ಕಾರವೇ ದುರಸ್ತಿ ಮಾಡಿಸಲಿ ಎಂದು ಸಮಾಜ ಕಾಯಬಾರದು. ಆ ಶಾಲೆಯಲ್ಲಿ ಕಲಿತವರು ಸಶಕ್ತರಾಗಿ ಬದುಕು ರೂಪಿಸಿಕೊಂಡಾಗ ಆ ಶಾಲೆಯ ನಿಸ್ಸಹಾಯಕ ಉಪಾಧ್ಯಯರ ಬೆಂಬಲಕ್ಕೆ ನಿಂತು ಆ ಶಾಲೆಯನ್ನು ಸರಿಪಡಿಸಿ ಮುಂದಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ಈ ರೀತಿ ಮನಸ್ಸಿನ ಜನರು ನಮ್ಮ ಸುತ್ತ ಸಾಕಷ್ಟು ಜನರು ಇದ್ದಾರೆ. ಇದೇ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ. ಇನ್ನು ಶೀರ್ಷಿಕೆಯ ಬಗ್ಗೆ ಹೇಳಬೇಕಾದರೆ, ರೈಟ್ ಬ್ರದರ್ಸ್ ಅವರು ಫ್ಲೈಟ್ ಇಂಜಿನಿಯರಿಂಗ್ ನಲ್ಲಿ ಆವಿಷ್ಕಾರ ಮಾಡಿದರೆ ಇಲ್ಲಿ ಇಬ್ಬರು ವಿದ್ಯಾರ್ಥಿಗಳು ದೂರದ ಅಹಮದಾಬಾದ್ ನಲ್ಲಿ ನಡೆಯುವ ಗಾಳಿಪಟ ಸ್ಪರ್ಧೆಯಲ್ಲಿ ಭಾಗವಹಿಸಿ ಕೈಟ್ ನಲ್ಲಿ ಮಾಡುವ ಎಂಜಿನಿಯರಿಂಗ್ ನಿಂದಾಗಿ ಪಡೆಯುವ ಒಂದು ರೋಚಕ ಗೆಲುವಿನ ಕಾರಣ ಕೈಟ್ ಬ್ರದರ್ಸ್ ಎನಿಸಿಕೊಂಡು ಅದರಿಂದ ಬಂದ ಹಣದಿಂದ ಶಾಲೆಯ ದುರಸ್ತಿ ಮಾಡಿಸುತ್ತಾರೆ. ಹಾಗಾಗಿ ಚಿತ್ರಕ್ಕೆ "KITE ಬ್ರದರ್ಸ್" ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದಲ್ಲಿ ಪ್ರಣಿಲ್ ನಾಡಗೀರ್, ಸಮರ್ಥ ಆಶಿ, ವಿನೋದ್ ಬಗಾಡೆ, ಅನಂತ ದೇಶಪಾಂಡೆ, ಪ್ರಭು ಹಂಚಿನಾಳ, ಶ್ರೇಯಾ ಹರಿಹರ, ರಾಜೀವ್ ಸಿಂಗ್ ಹಲವಾಯಿ ಮತ್ತು ಇತರ ಧಾರವಾಡದ ಹೊಸ ಪ್ರತಿಭೆಗಳೆ ಅಭಿನಯಿಸಿದ್ದಾರೆ. ಮೂರು ಹಾಡುಗಳಿದ್ದು, ವಿಜಯ್ ಭರಮಸಾಗರ, ಸಿಂಪಲ್ ಸುನಿ ಹಾಗೂ ನಾನು ಹಾಡುಗಳನ್ನು ಬರೆದಿದ್ದೇವೆ. ಅನೀಶ್ ಚೆರಿಯನ್ ಸಂಗೀತ ನೀಡಿದ್ದಾರೆ. ಹಿರಿಯ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಛಾಯಾಗ್ರಹಣ ‌ಮಾಡಿದ್ದಾರೆ. ಮಂಜುನಾಥ ಬಗಾಡೆ, ರಜನಿಕಾಂತ್ ರಾವ್ ದಳವಿ ಹಾಗೂ ಮಂಜುನಾಥ್ ಬಿ.ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಧಾರಾವಾಡದಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ನವೆಂಬರ್ 14 ಮಕ್ಕಳ ದಿನಾಚರಣೆಯ ದಿನದಂದೆ ನಮ್ಮ ಚಿತ್ರ ತೆರೆ ಕಾಣುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹ, ಬೆಂಬಲವಿರಲಿ ಎಂದರು.
ನಾನು ಈವರೆಗೂ ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದೇನೆ. ಅದರಲ್ಲಿ ಮೊದಲ ನಿರ್ದೇಶಕರ ಚಿತ್ರಗಳಿಗೆ ಹೆಚ್ಚು ಕೆಲಸ ಮಾಡಿರುವುದು ವಿರೇನ್ ಸಾಗರ್ ಬಗಾಡೆ ಅವರು ಕೂಡ ಉತ್ತಮ ನಿರ್ದೇಶಕರು. ಒಳ್ಳೆಯ ಕಥೆ ಮಾಡಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ಛಾಯಾಗ್ರಾಹಕ ಅಶೋಕ್ ಕಶ್ಯಪ್ ತಿಳಿಸಿದರು. 
ಕಾರ್ಯಕಾರಿ ನಿರ್ಮಾಪಕರಾದ ವಿನೋದ್ ಬಗಾಡೆ ಮತ್ತು ನಿರ್ಮಾಪಕ ಬಿ.ಎಸ್ ಮಂಜುನಾಥ್ ಚಿತ್ರದ ಕುರಿತು ಮಾತನಾಡಿದರು. ಹಾಡುಗಳ ಬಗ್ಗೆ ಅನೀಶ್ ಚೆರಿಯನ್ ಮಾಹಿತಿ ನೀಡಿದರು. ನಿರ್ದೇಶಕ ಅರವಿಂದ್ ಕೌಶಿಕ್ ಚಿತ್ರಕ್ಕೆ ಶುಭ ಕೋರಿದರು. ಸಂತೋಷ್ ರಾಧಾಕೃಷ್ಣನ್ ಹಾಗೂ ಗೀತರಚನೆಕಾರ ವಿಜಯ್ ಭರಮಸಾಗರ ಪತ್ರಿಕಾಗೋಷ್ಠಿಯಲ್ಲಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.