Skip to main content

21 ನೇ ಕಲಾಕಾರ್ ಪುರಸ್ಕಾರಕ್ಕೆ ನಟˌ ನಿರ್ದೇಶಕ ಕಾಸರಗೋಡು ಚಿನ್ನಾ ಆಯ್ಕೆ..

21 ನೇ ಕಲಾಕಾರ್ ಪುರಸ್ಕಾರಕ್ಕೆ ನಟˌ ನಿರ್ದೇಶಕ ಕಾಸರಗೋಡು ಚಿನ್ನಾ ಆಯ್ಕೆ..
ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ನೀಡುವ 21 ನೇ ವರ್ಷದ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಇವರನ್ನು ಆಯ್ಕೆ ಮಾಡಲಾಗಿದೆ. 2025 ನವೆಂಬರ್ 02 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 6.00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ರೂ. 50,000/- ನಗದು ಒಳಗೊಂಡ ಈ ಪುರಸ್ಕಾರವನ್ನು ಪ್ರದಾನ ಮಾಡಲಿರುವರು. ಭಾಷಾ ತಜ್ಞ ಡೊ ಪ್ರತಾಪ್ ನಾಯ್ಕ್, ಮತ್ತು ಮಸ್ಕತ್ ನಲ್ಲಿರುವ ಉದ್ಯಮಿ ಹಾಗೂ ಶ್ರೇಷ್ಟ ಕಲಾಪ್ರೋತ್ಸಾಹಕ ಸ್ಟ್ಯಾನ್ಲಿ ಫೆರ್ನಾಂಡಿಸ್ (ದಾಟ್ಟು) ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಶ್ರೀನಿವಾಸ ರಾವ್ ಎಸ್. (68) ಕಾಸರಗೋಡು ಚಿನ್ನಾ ಎಂದು ರಂಗಲೋಕದಲ್ಲಿ ಪ್ರಸಿದ್ಧರು. ನಟನೆಯಲ್ಲಿ ಚಿನ್ನದ ಪದಕದೊಡನೆ ಡಿ ಎಫ್ ಎ ಪದವಿ ಪಡೆದಿದ್ದಾರೆ. 1969 ರಲ್ಲಿ ರಂಗ ಪ್ರವೇಶ ಮಾಡಿದ ಇವರು ಕೊಂಕಣಿ, ಕನ್ನಡ, ತುಳು, ಮಲಯಾಳಂ ಹಾಗೂ ಇಂಗ್ಲೀಷಿನ 400ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಲವು ನಾಟಕಗಳಿಗೆ ನಿರ್ದೇಶನ ನೀಡಿದ್ದಾರೆ. ಭಾಷಾಂತರ ಮಾಡಿದ್ದಾರೆ. ಆಕಾಶವಾಣಿಯಲ್ಲಿ, ದೂರದರ್ಶನದಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ. ಲಾರಿ ನಾಟಕ, ಗೀತ ಸಂಗೀತ ರಥ, ಯಕ್ಷತೇರು, ಕನ್ನಡ ಸ್ವರ, ಮೂಕಾಭಿನಯ ಇತ್ಯಾದಿ ಪ್ರಯೋಗಗಳ ನೂರಾರು ಪ್ರದರ್ಶನಗಳನ್ನು ಮಾಡಿದ್ದಾರೆ. ಸಿನಿಮಾ ನಿರ್ದೇಶನ ಹಾಗೂ ನಟನೆಯಲ್ಲೂ ಕೈಯಾಡಿಸಿದ್ದಾರೆ. ಅವರು ನಿರ್ದೇಶಿಸಿದ ʻಉಜ್ವಾಡುʼ ಕೊಂಕಣಿ ಚಲನಚಿತ್ರಕ್ಕೆ 2011 ರ ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರದ ಗೌರವ ಲಭಿಸಿದೆ. 

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ʻಘರ್ ಘರ್ ಕೊಂಕಣಿʼ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಕೊಂಕಣಿಯ ಎಲ್ಲಾ ಸಮುದಾಯಗಳ ನಡುವೆ ಭಾಷಾಭಿಮಾನ ಮೂಡಿಸಿದ್ದಾರೆ. ರಂಗ ಚಿನ್ನಾರಿ ಟ್ರಸ್ಟ್ ಮೂಲಕ ಹಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯಕ್ಕೂ ಕೊಡುಗೆ ನೀಡಿದ್ದಾರೆ. ಅವರ ʻತೀಸ್ ಕಾಣಿಯೊʼ ಅನುವಾದ ಸಂಗ್ರಹಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಪುರಸ್ಕಾರ ಲಭಿಸಿದೆ. ಕೊಂಕಣಿ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ರಿ, ಕೇರಳ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಟಕ ರಂಗದಲ್ಲಿ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳೊಡನೆ ಹಲವಾರು ಸನ್ಮಾನಗಳು ದೇಶ ವಿದೇಶಗಳಲ್ಲಿ ಲಭಿಸಿವೆ. 

ಸನ್ಮಾನ ಕಾರ್ಯಕ್ರಮದ ನಂತರ ತಿಂಗಳ ವೇದಿಕೆ ಸರಣಿಯ 287 ನೇ ಕಾರ್ಯಕ್ರಮದಲ್ಲಿ ಮ್ಯಾಕ್ಸಿಮ್ ಪಿರೇರಾ ಮತ್ತು ತಂಡದಿಂದ 17 ನೇ ಮ್ಯಾಕ್ಸಿಮ್ ನೈಟ್ ರಸಮಂಜರಿ ನಡೆಯಲಿದೆ.

ಕೊಂಕಣಿ ಕಲಾವಿದರನ್ನು ಗೌರವಿಸಲು 2005 ರಲ್ಲಿ ಕಾರ್ವಾಲ್ ಮನೆತನದ ಹೆಸರಲ್ಲಿ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕಲಾಕಾರ್ ಪುರಸ್ಕಾರವನ್ನು ಸ್ಥಾಪಿಸಲಾಗಿತ್ತು. ಇದುವರೆಗೆ ಅರುಣ್‍ರಾಜ್ ರೊಡ್ರಿಗಸ್ (ನಾಟಕ), ಜೊಯೆಲ್ ಪಿರೇರಾ (ಸಂಗೀತ), ಹ್ಯಾರಿ ಡಿಸೊಜಾ (ಬ್ರಾಸ್ ಬ್ಯಾಂಡ್), ವಂ. ಚಾರ್ಲ್ಸ್ ವಾಸ್ (ಭಕ್ತಿ ಸಂಗೀತ), ಅನುರಾಧಾ ಧಾರೇಶ್ವರ್ (ಸಂಗೀತ), ಸಂತ ಭದ್ರಗಿರಿ ಅಚ್ಯುತದಾಸ್, ಬೆಂಗಳೂರು (ಹರಿಕಥೆ), ಜೇಮ್ಸ್ ಲೊಪಿಸ್, ಹೊನ್ನಾವರ (ಬ್ರಾಸ್ ಬ್ಯಾಂಡ್), ನೊರ್ಬರ್ಟ್ ಗೊನ್ಸಾಲ್ವಿಸ್ (ಸಂಗೀತ), ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ (ನಾಟಕ), ರೋಶನ್ ಡಿಸೋಜ (ಸಂಗೀತ), ಕ್ರಿಸ್ಟೋಫರ್ ಡಿಸೋಜ (ನಾಟಕ), ಆವಿಲ್ ಡಿಕ್ರೂಜ್ (ನೃತ್ಯ) ಎಂ. ಗೋಪಾಲ ಗೌಡ (ಜನಪದ), ಡೊಲ್ಲಾ ಮಂಗಳೂರು (ನಾಟಕ), ಐರಿನ್ ರೆಬೆಲ್ಲೊ (ಮದುವೆ ಸೊಭಾನೆ ಹಾಡುಗಳು), ಅನಿತಾ ಡಿಸೋಜ (ಗಾಯನ), ನಿಹಾಲ್ ತಾವ್ರೊ (ಗಾಯನ), ಮೆಲ್ವಿನ್ ಪೆರಿಸ್ (ಸಂಗೀತ), ಆಪೊಲಿನಾರಿಸ್ ಡಿಸೋಜ (ಗಾಯನ) ಮತ್ತು ರೋಶನ್ ಬೇಳ (ಸಂಗೀತ) ಇವರಿಗೆ ಈ ಪುರಸ್ಕಾರ ಲಭಿಸಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...