Skip to main content

‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾ.ರಾಜ್‌ಕುಮಾರ್ ಚಿತ್ರಗಳಲ್ಲಿ ಬಳಸಿದ್ದ ಲೆನ್ಸ್‌ಗಳನ್ನು ಮರುಕಳಿಸಿದೆ..

‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾ.ರಾಜ್‌ಕುಮಾರ್ ಚಿತ್ರಗಳಲ್ಲಿ ಬಳಸಿದ್ದ ಲೆನ್ಸ್‌ಗಳನ್ನು ಮರುಕಳಿಸಿದೆ..
'666 ಆಪರೇಷನ್ ಡ್ರೀಮ್ ಥಿಯೇಟರ್'ನಲ್ಲಿ ಅಣ್ಣಾವ್ರ ಚಿತ್ರಗಳಲ್ಲಿ‌ ಬಳಸಿದ್ದ ಲೆನ್ಸ್ ಬಳಕೆ..
ಹೇಮಂತ್ ಎಂ ರಾವ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ 1970ರ ದಶಕದ ಚಿತ್ರಗಳಲ್ಲಿ ಬಳಸುತ್ತಿದ್ದ ವಸ್ತ್ರ ವಿನ್ಯಾಸದಿಂದ ಹಿಡಿದು ಆ ಕಾಲದ ಲೆನ್ಸ್‌ಗಳನ್ನೂ ಬಳಸಿ ಚಿತ್ರವನ್ನು ಚಿತ್ರೀಕರಿಸುತ್ತಿದೆ.

1970–1980ರ ದಶಕದಲ್ಲಿ ಡಾ.ರಾಜ್‌ಕುಮಾರ್ ಅವರ ಅನೇಕ ಚಿತ್ರಗಳಲ್ಲಿ ಪರಿಚಯಿಸಲಾದ ‘ವಿಂಟೇಜ್ ಲೊಮೋಸ್’ ಕ್ಯಾಮೆರಾವನ್ನು ಬಳಸಿ ಚಿತ್ರವನ್ನು ಚಿತ್ರೀಕರಿಸಿರುವ ತಂಡ ಈಗಾಗಲೇ ಎರಡು ಹಂತಗಳ ಶೂಟಿಂಗ್‌ನ್ನು ಪೂರ್ಣಗೊಳಿಸಿದೆ. ತಂಡವು ಲೆನ್ಸ್ ಆಯ್ಕೆಗಾಗಿ ಚೆನ್ನೈ, ಮುಂಬೈ ಅಲ್ಲದೆ, ಬೆಂಗಳೂರಿನಲ್ಲೂ ಹುಡುಕಾಟ ನೆಡೆಸಿದೆ .
“ಪ್ರತಿಯೊಂದು ಶಾಟ್, ಬೆಳಕು, ಸೆಟ್ ಎಲ್ಲವೂ ಅಣ್ಣಾವ್ರ ಬಾಂಡ್ ಚಿತ್ರಗಳಾದ ‘ಆಪರೇಷನ್ ಡೈಮಂಡ್ ರಾಕೆಟ್’ ಮತ್ತು ‘ಜೇಡರ ಬಲೆ’ ಚಿತ್ರಗಳ ತರ ಕಾಣ್ಬೇಕು ಅನ್ನೋದು ಆರಂಭದಿಂದಲೇ ಚಿತ್ರತಂಡಕ್ಕೆ ಸ್ಪಷ್ಟವಾಗಿ ಗೊತ್ತಿತ್ತು” ಎಂದು ಈ ಚಿತ್ರದ ಛಾಯಾಗ್ರಾಹಕರಾದ ಅದ್ವೈತ್ ಗುರುಮೂರ್ತಿ ಅವರು ಹೇಳಿದರು.

‘666 ಆಪರೇಷನ್ ಡ್ರೀಮ್ ಥಿಯೇಟರ್’ಗಾಗಿ ನಾವು 1970ರ ದಶಕದ ಡಾ. ರಾಜ್‌ಕುಮಾರ್ ಬಾಂಡ್‌ ಚಿತ್ರಗಳಂತೆಯೇ ವಿಶಿಷ್ಟವಾದ ಲುಕ್‌ ಇರಬೇಕು ಎಂದು ಚಿತ್ರತಂಡ ಬಯಸಿತ್ತು. ಅದಕ್ಕಾಗಿ ಸಂಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್‌ನ ಮೇಲೆ ಅವಲಂಬಿಸದೆ, ಶೂಟಿಂಗ್‌ನಲ್ಲಿಯೇ ಚಿತ್ರೀಕರಿಸಲು ಹಳೆಯ ಶೈಲಿಯ ಟಂಗ್‌ಸ್ಟನ್ ಲೈಟ್ಸ್ ಮತ್ತು ವಿಂಟೇಜ್ ಲೆನ್ಸ್‌ಗಳನ್ನು ಬಳಸಿದ್ದೇವೆ.” 

“16 ವಿಭಿನ್ನ ಲೆನ್ಸ್ ಸೆಟ್‌ಗಳನ್ನು ಪರೀಕ್ಷಿಸಿ, ಗ್ರೇಡ್ ಮಾಡಿದ ನಂತರ, ನಾವು ವಿಂಟೇಜ್ ಲೊಮೋ ಅನಾಮಾರ್ಫಿಕ್ ಮತ್ತು ಲೊಮೋ ಸ್ಫೆರಿಕಲ್ ಲೆನ್ಸ್‌ಗಳನ್ನು ಆಯ್ಕೆ ಮಾಡಿದೆವು. ಈ ಲೆನ್ಸ್‌ಗಳು ತಮ್ಮ ಆರ್ಗ್ಯಾನಿಕ್ ಫ್ಲೇರ್ಸ್,ಪೇಂಟರೀ ಫಾಲ್-ಆಫ್ ಮತ್ತು ಇಂಪರಿಘೆಕ್ಟ್ ಬ್ಯೂಟಿಗೆ ಪ್ರಸಿದ್ಧವಾಗಿವೆ. ಇದನ್ನೇ ನಾವು 666 ಆಪರೇಷನ್ ಡ್ರೀಮ್ ಥಿಯೇಟರ್‌ನ ಜಗತ್ತನ್ನು ಸೃಷ್ಟಿಸಲು ಬಯಸಿದ್ದು” ಎಂದು ಅವರು ಹೇಳಿದರು.

ಧನಂಜಯ್ ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಡಾ. ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ಸಂಸ್ಥೆ ನಿರ್ಮಿಸುತ್ತಿದೆ. ಹೇಮಂತ್ ಎಂ ರಾವ್ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿದ್ದು, ಅದ್ವೈತ್ ಗುರುಮೂರ್ತಿ ಛಾಯಾಗ್ರಾಹಕರಾಗಿದ್ದಾರೆ. ವಿಶ್ವಾಸ್ ಕಶ್ಯಪ್ ಅವರು ಪ್ರೊಡಕ್ಷನ್ ಡಿಸೈನರ್ ಆಗಿ ತಂಡವನ್ನು ಸೇರಿದ್ದಾರೆ.

ಡಾ. ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಪ್ರೇಕ್ಷಕರಿಗೆ ವಿಶಿಷ್ಟವಾದ ಅನುಭವ ನೀಡಲಿದೆ. ಈ ಚಿತ್ರವನ್ನು ಭಾರೀ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದ್ದು, ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸುತ್ತಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.