Skip to main content

ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರಕ್ಕೆ ಚಿತ್ರೀಕರಣ ಪೂರ್ಣ .

ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರಕ್ಕೆ ಚಿತ್ರೀಕರಣ ಪೂರ್ಣ .          
 ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.  
"ಬಾಸ್", ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ. ಕೆಲವೇ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಡಿಸೆಂಬರ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. "ಬಾಸ್" ಚಿತ್ರಕ್ಕೆ "ಸತ್ಯಮೇವ ಜಯತೇ" ಎಂಬ ಅಡಿಬರಹವಿದೆ. ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್ ಆರ್ ಪುರ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನ ಹಾಗೂ ಮಂಜುನಾಥ್ ಮತ್ತು ತೀರ್ಥ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ವಿ.ಲವ ತಿಳಿಸಿದರು. 
ಇದು ನಾನು ನಾಯಕನಾಗಿ ನಟಿಸಿರುವ ಐದನೇ ಚಿತ್ರ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಸೆಲೆಬ್ರಿಟಿ ಪಾತ್ರ ನಿರ್ವಹಣೆ ಮಾಡಿದ್ದೇನೆ. ಚಿತ್ರದಲ್ಲಿ ಎಲ್ಲರೂ ನನ್ನ "ಬಾಸ್" ಎನ್ನುತ್ತಾರೆ. ತಾವೆಲ್ಲರು ನನ್ನ‌ ಹಿಂದಿನ ಚಿತ್ರಗಳಿಗೆ ತೋರಿದ ಪ್ರೋತ್ಸಾಹ ಈ ಚಿತ್ರದಲ್ಲೂ ಮುಂದುವರೆಯಲಿ ಎಂದರು.
ನನ್ನ ಪಾತ್ರ ಕೂಡ ಚೆನ್ನಾಗಿದೆ. ಶೀಲಾ ನನ್ನ ಪಾತ್ರದ ಹೆಸರು ಎಂದು ನಾಯಕಿ ಮೋನಿಕಾ ಗೌಡ ಹೇಳಿದರು. ಚಿತ್ರದಲ್ಲಿ ನಟಿಸಿರುವ ಸಂದೀಪ್, ವೀರೇನ್ ಕೇಶವ್, ಸುಜನ್ ಶೆಟ್ಟಿ, ದುನಿಯಾ ಮಹೇಶ್, ಜೋಶ್ ಅಕ್ಷಯ್, ಮಹೇಶ್, ಮನು, ಮಂಡ್ಯ ರವಿ, ಮಹೇಂದ್ರ ರಾವ್, ಪೃಥ್ವಿ, ನಿಶಾಂತ್, ಮೋಹಿತ್, ಲಕ್ಷ್ಮಣ್ ಪೂಜಾರಿ, ಸಂಗೀತ ನಿರ್ದೇಶಕ ಡೆವಿ ಸುರೇಶ್, ಛಾಯಾಗ್ರಾಹಕ ಶರತ್ ಹಾಗೂ ಸಹ ನಿರ್ದೇಶಕ ಮಂಜುನಾಥ್ ಮುಂತಾದವರು "ಬಾಸ್" ಚಿತ್ರದ ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.