Skip to main content

ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ರೂಬಿ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ...

ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್
ರೂಬಿ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ... 
ಇದು ರಘು ಕೋವಿ ಚೊಚ್ಚಲ ಪ್ರಯತ್ನ..
ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು 'ರೂಬಿ' ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಚೊಚ್ಚಲ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.
ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಬಳಿಕ‌ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಮಾತನಾಡಿ, ರೂಬಿ ಕಥೆ ಹಾಗೂ ಚಿತ್ರತಂಡ ಚೆನ್ನಾಗಿದೆ. ಒಳ್ಳೊಳ್ಳೆ ಸಿನಿಮಾ ಬರಬೇಕು. ಈ ಹಿಂದೆ ಹಾಡು ಕೇಳಿಸಿದ. ಆ ಹಾಡು ಸೆನ್ಸೇಷನಲ್ ಕ್ರಿಯೇಟ್ ಮಾಡುತ್ತದೆ. ಲಿರಿಕ್ಸ್ ಹಾಗೂ ಮ್ಯೂಸಿಕ್ ಎಲ್ಲವೂ ಚೆನ್ನಾಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ನಟ ರಾಮ್ ಗೌಡ ಮಾತನಾಡಿ, ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್ ಪಿ ಸರ್ ಮ್ಯೂಸಿಕ್ ಮಾಡ್ತಾ ಇರುವುದು ನನಗೆ ಖುಷಿಯಾಯ್ತು. ನಿರ್ಮಾಪಕರು ತುಂಬಾ ಫ್ಯಾಷನೇಟ್ ಆಗಿದ್ದಾರೆ. ಚಿತ್ರಕ್ಕೆ ಏನೂ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ ಎಂದರು.
ನಿರ್ದೇಶಕ ರಘು ಕೋವಿ ಮಾತನಾಡಿ, ನನ್ನ ಕನಸಿಗೆ ಇಬ್ಬರು ನಿರ್ಮಾಪಕರು ಸಾಥ್ ಕೊಟ್ಟಿದ್ದಾರೆ. ಒಂದು ಲವ್ ಸ್ಟೋರಿಯನ್ನು ಮ್ಯೂಸಿಕ್ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್ ಪಿ ಪಟ್ನಾಯಕ್ ಅವರಂತಹ ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಹೇಳಿದ್ದಾರೆ. ನಾಯಕ ರಾಮ್ ಕಥೆ ಮತ್ತು ಕಲೆ ಬಗ್ಗೆ ಆಸಕ್ತಿ ಇರುವ ವ್ಯಕ್ತಿ.  ಹೈದ್ರಾಬಾದ್ ನಲ್ಲಿ ನಡೆದ ನೈಜ ಘಟನೆಯನ್ನು ರೂಬಿ ಸಿನಿಮಾ ಮೂಲಕ ಹೇಳಲು ಹೊರಟ್ಟಿದ್ದೇವೆ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇಖಡ 50ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಆರ್ ಪಿ ಪಟ್ನಾಯಕ್ ಮಾತನಾಡಿ, ಕಥೆ ತುಂಬಾ ಚೆನ್ನಾಗಿದೆ. ಇದು ಕನ್ನಡ ಇಂಡಸ್ಟ್ರಿಯಲ್ಲಿ ಬೆಸ್ಟ್ ಸಿನಿಮಾವಾಗಲಿದೆ. ರಾಮ್-ವೈಭವಿ ರಾಷ್ಟ್ರಪ್ರಶಸ್ತಿ ಸಿಗುವಷ್ಟು ಚೆನ್ನಾಗಿ ನಟಿಸಿದ್ದಾರೆ. ಈ ಮ್ಯೂಸಿಕಲ್ ಚಿತ್ರದ ಭಾಗವಾಗಿ ಇರುವುದು ನನಗೆ ತುಂಬಾ ಖುಷಿ ಇದೆ. ಚಿತ್ರದಲ್ಲಿ ಒಳ್ಳೆ ಟೆಕ್ನಿಷಿಯನ್ ತಂಡವಿದೆ ಎಂದರು.

ರಘು ಕೋವಿ ಜರ್ನಿ..

'ನಾದಬ್ರಹ್ಮ' ಹಂಸಲೇಖ ಅವರ ಕಥಾ ಕಣಜದಿಂದ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ರಘು ಕೋವಿ ಅವರು ಅಜಯ್ ರಾವ್ ನಟನೆಯ 'ಕೃಷ್ಣ ಲೀಲಾ' ಸಿನಿಮಾಗೆ ಸ್ಕ್ರಿಪ್ಟ್‌ ಬರೆದಿದ್ದರು. ಅದ್ಕಕಾಗಿ ಅವರು ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ಈ ಹಿಂದೆ ನಿದೇಶಕರಾದ ಎಸ್‌ ವಿ ರಾಜೇಂದ್ರ ಸಿಂಗ್ ಬಾಬು, ಎಂ ಎಸ್ ರಾಜಶೇಖರ್, ಕೆ ವಿ ರಾಜು, ಶಶಾಂಕ್, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ಕೋ- ಡೈರೆಕ್ಟರ್ ಆಗಿ ಕೆಲಸ ಮಾಡಿದ ಅನುಭವ ಇರುವ ರಘು ಕೋವಿ, ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಅಖಾಡಕ್ಕೆ ಇಳಿದಿದ್ದಾರೆ.
 ತಾರಾ ಬಳಗದಲ್ಲಿ ಯಾರೆಲ್ಲಾ ಇದ್ದಾರೆ?

ದಿಲ್‌ಮಾರ್‌ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ  ಪಾದಾರ್ಪಣೆ ಮಾಡಿದ ರಾಮ್ ಗೌಡ ಅವರು ರೂಬಿಯಲ್ಲಿ ನಾಯಕರಾಗಿ ಅಭಿನಯಿಸುತ್ತಿದ್ದು, 'ಮಾರ್ಟಿನ್', 'ಗಾಳಿಪಟ 2' ಸಿನಿಮಾಗಳ ಖ್ಯಾತಿಯ ವೈಭವಿ ಶಾಂಡಿಲ್ಯ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ.

ತಾಂತ್ರಿಕ ವರ್ಗದ ಮಾಹಿತಿ

ವಂಶಿ, ಆಕಾಶ್ ಮತ್ತು ಎಕ್ಸ್‌ಕ್ಯೂಸ್ ಮಿ ಯ ಚಿತ್ರಗಳಿಗೆ ಸಂಗೀತ ನಿರ್ದೇಶಿಸಿರುವ ಆರ್‌ಪಿ ಪಟ್ನಾಯಕ್ ರೂಬಿಗೆ ಸಂಗೀತ ಒದಗಿಸಿದ್ದಾರೆ. ರಾಜಕುಮಾರ ಮತ್ತು ಯುವರತ್ನ ಚಿತ್ರಗಳ ಛಾಯಾಗ್ರಾಹಕ ವೆಂಕಟೇಶ್ ಅಂಗುರಾಜ್ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದಾರೆ. ರೋಜಾ, ಬಾಂಬೆ ಮತ್ತು ದಿಲ್ ಸೇ ಮುಂತಾದ ಚಿತ್ರಗಳಿಗೆ ಹೆಸರುವಾಸಿಯಾದ  ಸುರೇಶ್ ಅರಸ್ ಸಂಕಲನ ಮಾಡುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸ್ಟಂಟ್ ಕೊರಿಯೋಗ್ರಾಫರ್ ವಿಕ್ರಮ್ ಮೋರ್ ಅವರು ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

ರೂಬಿ ಸಿನಿಮಾವನ್ನು ಈ ಹಿಂದೆ ಓ ಮೈ ಗಾಡ್ 2 ನಿರ್ಮಿಸಿದ ಬಾಲಿವುಡ್ ಬ್ಯಾನರ್ ನಿಖುಲ್ ದೇಸಾಯಿ ಅವರ ಇವಾನ್ ಫಿಲ್ಮ್ಸ್ ನಿರ್ಮಿಸುತ್ತಿದ್ದು, ಶಿವರಾಜ್ ಅವರ ನವಿಶಾ ಫಿಲ್ಮ್ಸ್ ಸಹಯೋಗದೊಂದಿಗೆ ಮೊದಲ ಬಾರಿ ಕನ್ನಡ ಚಿತ್ರ ಎಂಟ್ರಿ ಕೊಡುತ್ತಿದೆ.

ಶಿವರಾಜ ಕನಗನಪಳ್ಳಿ,
ಮನರಂಜನಾ ಲೋಕದಲ್ಲಿ ಯಶಸ್ವಿಯಾಗಿ ಗುರುತಿಸಿಕೊಂಡಿರುವ ನಿರ್ಮಾಪಕ ಶಿವರಾಜ ಕನಗನಪಳ್ಳಿ ಈಗ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಅವರ ನಿರ್ಮಾಣ ಸಂಸ್ಥೆ Navisha Films ತನ್ನ ಮೊದಲ ಕನ್ನಡ ಚಿತ್ರವಾದ ‘ರೂಬಿ’ ಮೂಲಕ ದೊಡ್ಡ ಪರ್ದೆಗೆ ಕಾಲಿಡುತ್ತಿದೆ.
ಟೆಲಿವಿಷನ್ ಕ್ಷೇತ್ರದಲ್ಲಿ ಹಲವು ಯಶಸ್ವಿ ಯೋಜನೆಗಳನ್ನು ನಿರ್ಮಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಶಿವರಾಜ ಕನಗನಪಳ್ಳಿ, ನಿರ್ಮಾಣದ ನಿಷ್ಠೆ ಮತ್ತು ದೃಷ್ಟಿಕೋನದ ಮೂಲಕ ಮನರಂಜನಾ ವಲಯದಲ್ಲಿ ತಮ್ಮದೇ ಆದ ಗುರುತು ಮೂಡಿಸಿಕೊಂಡಿದ್ದಾರೆ.
ಈಗ ಅವರು ತಮ್ಮ ನಿರ್ಮಾಣ ಅನುಭವವನ್ನು ಚಿತ್ರರಂಗದತ್ತ ತಂದು, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ, ಹೊಸ ಕನಸುಗಳಿಗೆ ವೇದಿಕೆ ಕಲ್ಪಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ‘ರೂಬಿ’ ಚಿತ್ರದ ಮೂಲಕ ಅವರು ಕನ್ನಡದ ದೊಡ್ಡ ಪರ್ದೆಯಲ್ಲಿ ಹೊಸ ಪ್ರಯೋಗಕ್ಕೆ ಚಾಲನೆ ನೀಡುತ್ತಿದ್ದಾರೆ.
ಚಿತ್ರತಂಡದವರ ಪ್ರಕಾರ, ಶಿವರಾಜ ಕನಗನಪಳ್ಳಿ ಅವರ Navisha Films ನಿರ್ಮಾಣದ ಬೆಂಬಲ ರೂಬಿ ತಂಡಕ್ಕೆ ಹೊಸ ಶಕ್ತಿ ಮತ್ತು ವಿಶ್ವಾಸವನ್ನು ನೀಡಿದೆ.
ಸೃಜನಶೀಲತೆ, ತಾಂತ್ರಿಕ ಗುಣಮಟ್ಟ ಮತ್ತು ನಂಬಿಕೆಯ ಸಂಯೋಜನೆಯಾಗಿ ಮೂಡಿಬರುತ್ತಿರುವ ‘ರೂಬಿ’ — ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ತರಲಿದೆ ಎಂಬ ನಿರೀಕ್ಷೆ ಇದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...