Skip to main content

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ 'ಆಜಾದ್ ಭಾರತ್' ಚಿತ್ರ ದೇಶದಾದ್ಯಂತ ಬಿಡುಗಡೆ...

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ 'ಆಜಾದ್ ಭಾರತ್' ಚಿತ್ರ ದೇಶದಾದ್ಯಂತ ಬಿಡುಗಡೆ...
ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ..
ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 
 'ನೀರಾ ಆರ್ಯ' ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಅರ್ಪಣೆ ಮಾಡಲಾಗಿದೆ.‌ ಸುಭಾಷ್ ಚಂದ್ರ ಬೋಸ್ ಸ್ಥಾಪಿಸಿದ್ದ ಮೊದಲ ಮಹಿಳಾ ಆರ್ಮಿಯ ಕಥೆ 'ಆಜಾದ್ ಭಾರತ್' ಚಿತ್ರದಲ್ಲಿದೆ. ನೇತಾಜಿ ಪಾತ್ರದಲ್ಲಿ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರದಲ್ಲಿ ಮೂರು ಮಹಿಳಾ ಮುಖ್ಯ ಪಾತ್ರಗಳಿದ್ದು, ನಾನು ನೀರಾ ಆರ್ಯ ಪಾತ್ರದಲ್ಲಿ, ಹಿತ ಚಂದ್ರಶೇಖರ್ ದುರ್ಗಾ ಪಾತ್ರದಲ್ಲಿ ನಟಿಸಿದ್ದೇವೆ. ಸರಸ್ವತಿ ರಾಜಾಮಣಿ ಎಂಬ ಪಾತ್ರದಲ್ಲಿ ಜನಪ್ರಿಯ ನಟಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುರೇಶ್ ಒಬೆರಾಯ್, ಬಿರಾದಾರ್, ಸುಚೇಂದ್ರ ಪ್ರಸಾದ್, ಜೀ ವಾಹಿನಿಯ ಮುಖ್ಯಸ್ಥರಾದ ಸುಭಾಷ್ ಚಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಂಗೀತ ನಿರ್ದೇಶನವನ್ನು ನನ್ನ ಪತಿ ಗೌತಮ್ ಶ್ರೀವತ್ಸ ಮಾಡಿದ್ದಾರೆ. ಶ್ರಿ ಕ್ರೇಜಿ ಮೈಂಡ್ಸ್ ಅವರ ಸಂಕಲನವಿರುವ ಈ ಚಿತ್ರವನ್ನು ನಾನು, ಜಯಗೋಪಾಲ್ ಹಾಗೂ ರಾಜೇಂದ್ರ ರಾಜನ್ ನಿರ್ಮಿಸಿದ್ದೇವೆ. ಜನವರಿ ತಿಂಗಳನ್ನು ಸುಭಾಷ್ ಚಂದ್ರ ಬೋಸ್ ಅವರ ಜನ್ಮ ಮಾಸ ಎಂದು ಆಚರಿಸುತ್ತಾರೆ. ಹಾಗಾಗಿ ಜನವರಿ ಎರಡನೇ ತಾರೀಖು ಈ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ಈ ಚಿತ್ರವನ್ನು ನಿರ್ಮಾಣ ಮಾಡುವ ಮೊದಲು ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದವರನ್ನು ಸಂಪರ್ಕ ಮಾಡಿ ಅನೇಕ ಮಾಹಿತಿ ಪಡೆದುಕೊಂಡಿದ್ದೇನೆ. ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಈ ಚಿತ್ರ ತೋರಿಸುವ ಯೋಚನೆ ಇದೆ. 2026 ರ ಜನವರಿ 2 ರಂದು ಜೀ ಸ್ಟುಡಿಯೋಸ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌ ಎಂದು ನಿರ್ಮಾಪಕಿ, ನಟಿ ನಿರ್ದೇಶಕಿ ರೂಪಾ ಅಯ್ಯರ್ ತಿಳಿಸಿದರು. 
ರೂಪಾ ಅಯ್ಯರ್ ಅವರು ಒಂದು ಕಾಲದ ಹೇಳದೇ ಹೋದ ಘಟನೆಗಳನ್ನು ತೆರೆಯ ಮೇಲೆ ಹೇಳಲು ಹೊರಟ್ಟಿದ್ದಾರೆ. ಇದಕ್ಕಾಗಿ ಬಹಳ ವರ್ಷಗಳ ಪ್ರಯತ್ನ ಪಟ್ಟಿದ್ದಾರೆ. ಇದಕ್ಕೆಲ್ಲಾ ಮುಖ್ಯ ಕಾರಣ ಅವರ ರಾಷ್ಟ್ರಪ್ರೇಮ. ಎಲ್ಲರೂ ಈ ಚಿತ್ರ ನೋಡಿ ಎಂದರು ಹಿರಿಯ ನಟ ಸುಚೇಂದ್ರ ಪ್ರಸಾದ್.   
 ಇಂತಹ ದೇಶಪ್ರೇಮ ಸಾರುವ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. ದುರ್ಗಾ ಪಾತ್ರದಲ್ಲಿ ಅಭಿನಯಿಸಿರುವುದಾಗಿ ನಟಿ ಹಿತ ಚಂದ್ರಶೇಖರ್ ಹೇಳಿದರು.  
ಚಿತ್ರದಲ್ಲಿ ಏಳು ಹಾಡುಗಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತ ಫಡ್ನವಿಸ್ ಅವರು ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಯಶ್ ರಾಜ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆದಿದೆ ಎಂದರು ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ. 
ನಿರ್ಮಾಪಕ ಜಯಗೋಪಾಲ್ ಹಾಗೂ ಸಂಕಲನಕಾರ ಶ್ರೀ ಕ್ರೇಜಿಮೈಂಡ್ಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.