Skip to main content

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.
ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು.
ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು. ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು.
ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು. 
ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು.
BIG BOSS ಮನೆಯಲ್ಲಿ ಇರುವ Lifestyle, Contestants, Anchor, Sets, ವಿಶೇಷ ಪಾತ್ರಗಳು, ಹೀಗೆ ಎಲ್ಲವನ್ನು ಒಂದು ವಾರದಲ್ಲಿ ಸಿದ್ಧತೆ ನಡೆಸಿ ಉತ್ತಮ ನಿರ್ದೇಶನ ನೀಡಿದ್ದು ವಿಕ್ರಮ್ ಸೂರಿ.
ನಮಿತ ರಾವ್ ಹಾಗೂ ವಿಕ್ರಮ್ ಸೂರಿ Celebrity Couple ಆಗಿ, ಡಾ. ನಂದೀಶ್ ವೀರಪ್ಪ, ಶಾಂತರಮ್ ಗುಮ್ಮಾರಾಜು, ಗಿರೀಶ್ ಕೋಟ, ಮಲ್ಲೇಶ್ ಪ್ರಭು, ವಿದ್ಯಾ ರೈ, ಭವ್ಯ ಮಲ್ಲೇಶ್, ಸುಹಾಸಿನಿ ತಲಕಾಡು, ಶ್ರೀದೇವಿ ಶಿವಯೋಗಿಮಟ್ Contestants ಗಳಾಗಿ ಬಂದರೆ, ವಿಶೇಷ ಪಾತ್ರದಲ್ಲಿ ಕುಡಕನಾಗಿ ರವಿ ಪಂಗಲ್, ಸ್ವಾಮಿಗಳಾಗಿ ಕೃಷ್ಣ ಎರೂರ್ ಸಭಿಕರನ್ನು ರಂಜಿಸಿದರು.
No Elimination only Elevation ಎನ್ನುವ Tag Line ಮೂಲಕ ಈ ಪ್ರಸ್ತುತಿ ಮನೋರಂಜಿಸಿತು.
ಹಲವಾರು ವರ್ಷಗಳಿಂದ ಅಮೇರಿಕಾದಲ್ಲಿ ನೆಲೆಸಿ ಕನ್ನಡದ ಕೆಲಸ ಮಾಡುತ್ತಿರುವ ಸುರೇಶ್ ಬಾಬು ಅವರ ನಿರ್ಮಾಣ ಹಾಗೂ ಸಹ ನಿರ್ದೇಶನ, ರವಿ ಪಂಗಲ್ ಹಾಗೂ ಸಂಜೀವ್ ಮೂರ್ತಿ ಅವರ ನಿರ್ವಹಣೆ, ಅನಿಲ್ ಹಾಲಪ್ಪ ಅವರ ಸಹಕಾರದೊಂದಿಗೆ ರಂಗದಮೇಲೆ ಈ BIG BOSS ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬರಲು ಕಾರಣವಾದವು.

Comments

Popular posts from this blog

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...