Skip to main content

ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು..

ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು.. ಜನಪದ ಸೊಗಡಿನ ಈ ಗೀತೆಗೆ ತಲೆದೂಗುತ್ತಿದೆ ಕರುನಾಡು‌‌...
 ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಲೋ ನವೀನ". ಇತ್ತೀಚೆಗೆ ಈ ಚಿತ್ರದ "ಕೋಣಾಣೆ" ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ‌.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್ ಡಿ ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನಕ್ಕೆ ಜೊತೆಯಾಗಿದ್ದಾರೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ , ಕೀರ್ತಿಸ್ವಾಮಿ ನಿರ್ಮಿಸಿರುವ ಹಾಗೂ ಧನುರ್ಧಾರಿ ಪವನ್ ನಿರ್ದೇಶನದ "ಲೋ ನವೀನ" ಚಿತ್ರದ ಮೊದಲ ಹಾಡು ಇದ್ದಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಲಭ್ಯವಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ್ದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ "ಲೂಸಿಯಾ" ಚಿತ್ರದಲ್ಲಿ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಮೊದಲ ಹಾಡಾಗಿ "ಕೋಣಾಣೆ" ಬಿಡುಗಡೆಯಾಗಿದೆ. ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್ ಡಿ ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ. ಇವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಎಂದರು ಚಿತ್ರದ ನಾಯಕ ಹಾಗೂ ಸಂಗೀತ ನಿರ್ದೇಶಕ ನವೀನ್ ಸಜ್ಜು.
ನಾನು ಬೆಂಗಳೂರಿನವಳು. ನನ್ನ ಪತಿ ಮಳವಳ್ಳಿಯವರು. ಮೂವತ್ತೈದು ವರ್ಷಗಳಿಂದ ಅಮೇರಿಕಾದಲ್ಲಿದ್ದೇವೆ. ಅಲ್ಲೂ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ‌‌. ನಮಗೆ ಕನ್ನಡ ಎಂದರೆ ಬಹಳ ಪ್ರೀತಿ. ಹೀಗೆ ಕಾರ್ಯಕ್ರಮವೊಂದರಲ್ಲಿ ನವೀನ್ ಸಜ್ಜು ಅವರನ್ನು ಭೇಟಿಯಾದಾಗ ಈ ಚಿತ್ರದ ಕುರಿತು ಹೇಳಿದರು. ಹಳ್ಳಿಯ ಸೊಗಡಿನ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು ಎಂದು ನಿರ್ಮಾಪಕಿ ಕೀರ್ತಿ ಸ್ವಾಮಿ ತಿಳಿಸಿದರು.
ನಾನು ಮಳವಳ್ಳಿಯವನು. ಚಿಕ್ಕವಯಸ್ಸಿನಲ್ಲೇ ಇದೇ ತರಹದ ಗ್ರಾಮೀಣ ಜನಪದ ಹಾಡುಗಳನ್ನು ಕೇಳುತ್ತಾ ಬೆಳೆದವನು. ನಲವತ್ತು ವರ್ಷಗಳಿಂದ ಅಮೇರಿಕಾದಲ್ಲಿದ್ದರೂ ಕನ್ನಡವನ್ನೇ ಮಾತನಾಡುತ್ತೇನೆ. ದಿನ ಮುದ್ದೆ , ಉಪ್ಸಾರು ತಿನ್ನುತ್ತೇನೆ. ನಮ್ಮ ಮನೆಗೆ‌ ಬಂದವರಿಗೂ ನಾನೇ ಮಾಡಿ ಕೊಡುತ್ತೇನೆ. ಹಾಗಾಗಿ ನವೀನ್ ಸಜ್ಜು ಹಳ್ಳಿಯ ಸೊಗಡಿನ ಕಥೆ ಹೇಳಿದಾಗ ಬಹಳ ಖುಷಿಯಾಯಿತು ಎಂದು ನಿರ್ಮಾಪಕ ಬೆನ್ ಚಿಕ್ಕಸ್ವಾಮಿ ಹೇಳಿದರು.
ಮೊದಲ ನಿರ್ದೇಶನದ ಚಿತ್ರ‌. ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಧನುರ್ಧಾರಿ ಪವನ್ ತಿಳಿಸಿದರು. ಛಾಯಾಗ್ರಾಹಕ ರಿಷಿಕೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಮಾರಂಭಕ್ಕೂ ಮುನ್ನ ನವೀನ್ ಸಜ್ಜು ಅನೇಕ ಜನಪ್ರಿಯ ಗೀತೆಗಳನ್ನು ಹಾಡಿ ನೆರೆದಿದವರನ್ನು ರಂಜಿಸಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.