Skip to main content

“ದಿ ರಾಜಾಸಾಬ್‌” ಸಿನಿಮಾದಿಂದ ಹೊರಬಂತು “ರೆಬೆಲ್‌ ಸಾಬ್‌” ಹಾಡು..

“ದಿ ರಾಜಾಸಾಬ್‌” ಸಿನಿಮಾದಿಂದ ಹೊರಬಂತು “ರೆಬೆಲ್‌ ಸಾಬ್‌” ಹಾಡು..
ಕಲರ್‌ಫುಲ್‌ ಹಾಡಿನಲ್ಲಿ ಪ್ರಭಾಸ್‌ ಜಬರ್‌ದಸ್ತ್‌ ಡಾನ್ಸ್‌..
ಜನವರಿ 9ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ..
ಟಾಲಿವುಡ್‌ ರೆಬಲ್‌ ಸ್ಟಾರ್ ಪ್ರಭಾಸ್‌ ನಾಯಕನಾಗಿ ನಟಿಸಿರುವ “ದಿ ರಾಜಾಸಾಬ್” ಸಿನಿಮಾ ಟ್ರೇಲರ್‌ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರುವುದರಿಂದ ಹಿಂದಿ ಬೆಲ್ಟ್‌ನಲ್ಲಿಯೂ ಈ ಚಿತ್ರಕ್ಕೆ ದೊಡ್ಡ ಡಿಮಾಂಡ್‌ ಸೃಷ್ಟಿಯಾಗಿದೆ. ಇದೀಗ ಸಿನಿಮಾದ ಪ್ರಚಾರ ಕೆಲಸದಲ್ಲಿಯೂ ಚಿತ್ರತಂಡ ಬಿಜಿಯಾಗಿದೆ. ಅದರಂತೆ ಇದೀಗ ಇದೇ ಚಿತ್ರದ “ರೆಬೆಲ್‌ ಸಾಬ್” ಹಾಡನ್ನು ಬಿಡುಗಡೆ ಮಾಡಿದೆ ಚಿತ್ರತಂಡ. 
ಪಕ್ಕಾ ಟಪ್ಪಾಂಗುಚ್ಚಿ ಶೈಲಿಯಲ್ಲಿ ಮೂಡಿಬಂದಿರುವ “ರೆಬಲ್‌ ಸಾಬ್‌” ಹಾಡಿನಲ್ಲಿ ನಟ ಪ್ರಭಾಸ್‌ ಸಖತ್‌ ಸ್ಟೈಲಿಶ್‌ ಆಗಿ ಕಂಡಿದ್ದಾರೆ. ಕಲರ್‌ ಕಲರ್‌ ಶರ್ಟ್‌ ಧರಿಸಿ, ಹಾಡಿಗೆ ಮಸ್ತ್‌ ಮಸ್ತ್‌ ಡಾನ್ಸ್‌ ಮಾಡಿದ್ದಾರೆ. ಈ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದ್ದು, ಅಭಿಮಾನಿ ವಲಯದಲ್ಲಿ ಸಂಭ್ರಮ ಇಮ್ಮಡಿಯಾಗಿದೆ. 

ಅಂದಹಾಗೆ, “ದಿ ರಾಜಾಸಾಬ್‌” ಸಿನಿಮಾಕ್ಕೆ ಸಂಗೀತ ನೀಡಿರುವುದು ಖ್ಯಾತ ಸಂಗೀತ ಸಂಯೋಜಕ ಥಮನ್‌ ಎಸ್. ಆದರೆ, ಈ ವರೆಗೂ ಇದೇ ಚಿತ್ರದ ಒಂದೇ ಒಂದು ಹಾಡಿನ ಝಲಕ್‌ ಹೊರಬಿದ್ದಿರಲಿಲ್ಲ. ಇದೀಗ ಅವರ ಥಮನ್‌ ಮ್ಯೂಸಿಕ್‌ ಒದಗಿಸಿರೋ “ರೆಬೆಲ್‌ ಸಾಬ್‌” ಹಾಡು ಬಿಡುಗಡೆ ಆಗಿದೆ. ಟಿ ಸಿರೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ “ರೆಬೆಲ್‌ ಸಾಬ್‌” ಹಾಡು ಹಬ್ಬ ಮಾಡುತ್ತಿದೆ.

ಮಾರುತಿ ನಿರ್ದೇಶನದಲ್ಲಿ ಮೂಡಿಬಂದಿರುವ ಹಾರರ್‌ ಕಾಮಿಡಿ ಶೈಲಿಯ “ದಿ ರಾಜಾ ಸಾಬ್” ಸಿನಿಮಾವನ್ನು ಪೀಪಲ್‌ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಾಣ ಮಾಡಿದ್ದು, ಟಿಜಿ ವಿಶ್ವಪ್ರಸಾದ್‌ ಮತ್ತು ಕೃತಿ ಪ್ರಸಾದ್‌ ಈ ಸಿನಿಮಾದ ನಿರ್ಮಾಪಕರು. ಪ್ರಭಾಸ್‌ ನಾಯಕನಾದರೆ, ಸಂಜತ್‌ ದತ್ ಖಳನಾಯಕನಾಗಿದ್ದಾರೆ. ಮಾಳವಿಕಾ ಮೋಹನನ್‌, ನಿಧಿ ಅಗರ್‌ವಾಲ್‌, ರಿದ್ಧಿ ಕುಮಾರ್‌ ಮತ್ತು ಝರೀನಾ ವಹಾಬ್‌ ನಟಿಯರು ಚಿತ್ರದಲ್ಲಿದ್ದಾರೆ. 

ಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಮಾರುತಿ ಹೊತ್ತರೆ, ಥಮನ್‌ ಸವರ ಸಂಗೀತ, ಕಾರ್ತಿಕ್‌ ಪಳನಿ ಅವರ ಛಾಯಾಗ್ರಹಣ, ಕೊಟಗಿರಿ ವೆಂಕಟೇಶ್ವರ್‌ ರಾವ್‌ ಅವರ ಸಂಕಲನ ಚಿತ್ರಕ್ಕಿದೆ. 2026ರ ಜನವರಿ 9ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿನಿಮಾ ತೆರೆಗೆ ಬರಲಿದೆ. ತೆಲುಗು ಜತೆಗೆ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ವಿಶ್ವದಾದ್ಯಂತ ರಿಲೀಸ್‌ ಆಗಲಿದೆ. 
ಭಾರತದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ ಎಂದು ಬಿಂಬಿಸಲಾಗಿರುವ 'ದಿ ರಾಜಾಸಾಬ್', ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಮೂಲಕವೇ ಎಲ್ಲರನ್ನು ನಿಬ್ಬೆರಗಾಗಿಸಿದೆ. ಈ ಚಿತ್ರವು ಭಾರತದಲ್ಲಿ ಇದುವರೆಗೆ ಕಾಣದ ಅತಿದೊಡ್ಡ ಹಾರರ್ ಸೆಟ್ ಹೊಂದಿದೆ. ನೋಡುಗರನ್ನು ಭಯಕ್ಕೆ ಕೆಡವುದರ ಜತೆಗೆ ಆ ದೃಶ್ಯ ವೈಭವವನ್ನು ಮೀರಿ, ಪ್ರೀತಿ, ಕುಟುಂಬ ಮತ್ತು ಪೂರ್ವಜರ ಪರಂಪರೆಯ ವಿಷಯಗಳನ್ನು ಈ ಸಿನಿಮಾದಲ್ಲಿ ಹೇಳಿದ್ದಾರೆ ನಿರ್ದೇಶಕರು. ಬ್ಲಾಕ್ಬಸ್ಟರ್ ಸಿನಿಮಾ 'ಕಲ್ಕಿ 2898 ಎಡಿ' ನಂತರ ಮತ್ತೆ ದೊಡ್ಡ ಪರದೆಗೆ ಮರಳುತ್ತಿದ್ದಾರೆ ಪ್ರಭಾಸ್ . ಅವರ ನಟನಾ ಮೋಡಿ, ಮೈನವಿರೇಳಿಸುವ ಆಕ್ಷನ್‌ ಮಿಶ್ರಣ, ಹೊಸ ಪ್ರಭಾಸ್‌ ಎದುರಾಗುವ ಸೂಚನೆ ನೀಡಿದಂತಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.