"ಪ್ಯಾರ್" ಒಂದೇ ಮಾತಲಿ.. ಹಾಡು ಹಿಟ್.. ಖುಷಿ ಹಂಚಿಕೊಂಡ ಚಿತ್ರತಂಡ... ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದಾರೆ. ಆ್ಯನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ರಿಲೀಸಾಗಿ, ಸಂಗೀತ ಪ್ರಿಯರ ಮನ ಗೆದ್ದಿರುವ *'ಒಂದೇ ಮಾತಲಿ*ಹೇಳೋದಾದರೆ* ' ಎಂಬ ಹಾಡಿನ ಸುಂದರ ವೀಡಿಯೋ ಇನ್ *ಸ್ಟಾಗ್ರಾಂನಲ್ಲಿ 100* ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಅಲ್ಲದೆ ಮಿಲಿಯನ್ ಪ್ಲಸ್ ವ್ಯೂಸ್ ಆಗಿದೆ. ಪಳನಿ ಡಿ.ಸೇನಾಪತಿ ಅವರ ಸಂಗೀತ, ಕೆಎಸ್.ಚಂದ್ರಶೇಖರ್ ಅವರ ಕ್ಯಾಮೆರಾದಲ್ಲಿ ಲಡಾಕ್ ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಹಾಡಿನ ಯಶಸ್ಸಿನ ಖುಷಿಯನ್ನು ಚಿತ್ರತಂಡ ಮಾಧ್ಯದೊಂದಿಗೆ ಹಂಚಿಕೊಂಡಿತು. ಮೊದಲಿಗೆ ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ ಡಾ.ಬಿಎಸ್.ನಾಗರಾಜು ಮಾತನಾಡುತ್ತ ಲಡಾಕ್, ಕಾಶ್ಮೀರ, ಜೈಸಲ್ಮೇರ್ ನಲ...