ಡಿಸೆಂಬರ್ 11ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ತೆರೆಗೆ..
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು ಹಾಗೂ ಟ್ರೇಲರ್ ಅಭಿಮಾನಿಗಳ ಮನ ಗೆದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇತ್ತೀಚೆಗೆ ಅನಾವರಣಗೊಂಡ ಟ್ರೇಲರ್ ಗಂತೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. "ದಿ ಡೆವಿಲ್" ಅಬ್ಬರವನ್ನು ತೆರೆಯ ಮೇಲೆ ನೋಡಲು ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ "ದಿ ಡೆವಿಲ್" ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ. ಕಾಂತರಾಜ್ ಸಂಭಾಷಣೆ ಬರೆದಿದ್ದಾರೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
Comments
Post a Comment