Skip to main content

ಉತ್ತರ ಕರ್ನಾಟಕ ಸೊಗಡಿನ"ಸೂರ್ಯ" ಟ್ರೈಲರ್ ಬಿಡುಗಡೆ..

ಉತ್ತರ ಕರ್ನಾಟಕ ಸೊಗಡಿನ
"ಸೂರ್ಯ" ಟ್ರೈಲರ್ ಬಿಡುಗಡೆ..
    ಉತ್ತರ ಕರ್ನಾಟಕ ಭಾಗದ ಸಾಕಷ್ಟು ನಿರ್ಮಾಪಕ, ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ ಇದೀಗ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಅಡಿಯಲ್ಲಿ ಅವರು "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರವನ್ನು ನಿರ್ಮಿಸಿದ್ದು, ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು
ತೆರೆಗೆ ತರಲಿದ್ದಾರೆ.
     ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.
   ವೇದಿಕೆಯಲ್ಲಿ ನಿರ್ಮಾಪಕ ಬಸವರಾಜ ಬೆಣ್ಣಿ ಮಾತನಾಡುತ್ತ ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ಪೂನಾದಲ್ಲಿ ಉದ್ಯಮ ನಡೆಸುತ್ತಿರುವ ನಾವು, ಹುಟ್ಟಿಬೆಳೆದ ಕನ್ನಡ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂದು ಈ ಚಿತ್ರ ಮಾಡಿದ್ದೇವೆ ಎಂದರೆ, ಅವರ ಸಹೋದರ ರವಿ ಬೆಣ್ಣಿ ಮಾತನಾಡಿ ಜನವರಿ 15 ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಸಾಗರ್ ಕಥೆ ಹೇಳಿದಾಗ ಬಜೆಟ್ ಜಾಸ್ತಿ ಅನಿಸಿತ್ತು. ಸಿನಿಮಾ ನೋಡಿದಾಗ ನಮ್ಮ ಹಣ ಎಲ್ಲೂ ಹೋಗಿಲ್ಲ ಅನ್ನಿಸಿತು ಎಂದರು.
  ನಾಯಕ ಪ್ರಶಾಂತ್ ಮಾತನಾಡಿ ಸ್ಲಂನಲ್ಲಹ ಬೆಳೆದ ಹುಡುಗನಾಗಿ ನಾನೀ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆತನಿಗೆ ಹುಡುಗಿಯ ಜತೆ ಪ್ರೀತಿ ಆದ ನಂತರ ಅದನ್ನು ಆತ ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಎಳೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. 
ನಾಯಕಿಬ ಹರ್ಷಿತಾ ಮಾತನಾಡಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ‌. ಹಿರಿಯ ಕಲಾವಿದರ ಜೊತೆ ಕೆಲಸ ಮಾಡಿದ್ದು ಒಂದೊಳ್ಳೆ ಅನುಭವ ನೀಡಿದೆ. ಕಾಲೇಜ್ ಹೋಗೋ ಹುಡುಗಿ ತನ್ನ ಪ್ರೀತಿಯ ವಿಷಯದಲ್ಲಿ ಯಾವ ನಿರ್ಧಾರ ತಗೋತಾಳೆ ಅನ್ನುವುದೇ ಈ ಚಿತ್ರದ ಕಥೆ. ಡಬ್ಬಿಂಗ್ ಮಾಡುವಾಗ ನನ್ನ ಪಾತ್ರ ನೋಡಿ ಖುಷಿಯಾಯ್ತ ಎಂದು ಹೇಳಿದರು. 
ನಿರ್ದೇಶಕ ಸಾಗರ್ ಮಾತನಾಡಿ ಸೂರ್ಯ ನಾಯಕನ ಹೆಸರು. ಚಿತ್ರದ ಬಜೆಟ್ ಮೂರು, ನಾಲ್ಕು ಪಟ್ಟು ಹೆಚ್ಚಾಗಿದೆ. ಚಿತ್ರದ ಹಾಡಲ್ಲಿ ಕಲಾಂ, ಅಂಬೇಡ್ಕರ್, ಮೋದಿ ಅವರನ್ನು ಬಳಸಿಕೊಂಡಿದ್ದೇವೆ. ಏಕೆಂದರೆ ನಾಯಕನೂ ಅವರಂತೆಯೇ ಮಿಡಲ್ ಕ್ಲಾಸ್ ನಿಂದ ಬಂದು ಸಾಧನೆ ಮಾಡುತ್ತಾನೆ. 
ಉತ್ತರ ಕರ್ನಾಟಕ, ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ, ಪ್ರಮೋದ್ ಶೆಟ್ಟಿ, ಶೃತಿ ಅವರನ್ನು ಬೇರೆಯದೇ ಪಾತ್ರದಲ್ಲಿ ನೋಡಬಹುದು. ಆರ್ಮುಗಂ ರವಿಶಂಕರ್ ಅವರದು ಈವರೆಗೆ ಮಾಡಿರದಂಥ ಪಾತ್ರ.
ಸೂರ್ಯ ಚಿತ್ರವನ್ನು ಕನ್ನಡ ವರ್ಷನ್ ಮಾತ್ರ ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಕನ್ನಡದಲ್ಲೇ ರಿಲೀಸ್ ಮಾಡುತ್ತೇವೆ. ಸಂಕ್ರಾಂತಿ ಹಬ್ಬಕ್ಕೆ ಸಮ್ ಕಾಂತ್ರಿ ಮಾಡಲು ನಮ್ಮ ಚಿತ್ರ ರೆಡಿಯಾಗಿದೆ ಎಂದರು.
ಹಿರಿಯನಟಿ ಶೃತಿ ಮಾತನಾಡಿ ಚಿತ್ರದಲ್ಕಿ ಡಾಕ್ಟರ್ ಮಮತ ಎಂಬ ಪಾತ್ರ ಮಾಡಿದ್ದೇನೆ. ಒಂದು ವಿಚಾರಕ್ಕೆ ಆಕೆಗೆ ತುಡಿತವಿರುತ್ತೆ. ಆಕೆ ಸಾಫ್ಟ್ ಆದರೂ, ಕಷ್ಟ ಬಂದಾಗ ರೆಬೆಲ್ ಆಗ್ತಾಳೆ. 
 ಸಾಗರರ ಆತ್ಮವಿಶ್ವಾಸ ನೋಡಿ ಈ ಸಿನಿಮಾ ಮಾಡಿದೆ. ಒಳ್ಳೆಯ ಟೀಮ್ ಗೆ ಬೆಂಬಲ‌ ನೀಡಿ ಎಂದರು.
ಪ್ರಮೋದ್ ಶೆಟ್ಟಿ ಮಾತನಾಡಿ ಮೊದಲಬಾರಿಗೆ ಉತ್ತರ ಕರ್ನಾಟಕ ಶೈಲಿಯ ಪಾತ್ರ ಮಾಡಿದ್ದೇನೆ. ಸ್ಲಂನಲ್ಲಿ ಬೆಳೆದ ಹುಡುಗನಿಗೆ ಬೆನ್ನೆಲುಬಾಗಿ ನಿಲ್ಲುವ 
ಬಾಂಡ್ ಬಸು ಪಾತ್ರ ನನ್ನದು ಎಂದರು.
    ಬಿ.ಸುರೇಶ್ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್ ದಾಸ್ ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ೫ ಹಾಡುಗಳಿಗೆ ಶ್ರೀ ಶಾಸ್ತ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಹಾಗೂ ನಿರ್ದೇಶಕರೂ ಸಾಹಿತ್ಯ ರಚಿಸಿದ್ದಾರೆ. ಉತ್ತರ ಕರ್ನಾಟಕ ಶೈಲಿಯ 'ಕೆಳಪಾನ ಗಲ್ಲದ ಹುಡುಗಿ' ಎಂಬ ಹಾಡು ಎಲ್ಲಾ ಕಡೆ ವೈರಲ್ ಆಗಿದೆ. 
ಮನುರಾಜ್ ಅವರ ಛಾಯಾಗ್ರಹಣ, ಮಣಿಕಂಠ ಕೆ.ವಿ. ಅವರ ಸಂಭಾಷಣೆ, ನರಸಿಂಹ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಮಿದೆ.
    ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ‌ ಪ್ರಸನ್ನ, ಪ್ರಮೋದ್ ಶೆಟ್ಟಿ, ಕುಂಕುಮ್ ಹರಿಹರ, ದೀಪಿಕಾ, ಕಡ್ಡಿಪುಡಿ ಚಂದ್ರು ಚಿತ್ರದ ಉಳಿದ ಪಾತ್ರ ವರ್ಗದಲ್ಲಿದ್ದಾರೆ,

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...