Skip to main content

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಮಾಜರ್"..

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಮಾಜರ್".. 
ಜನವರಿ 15 ಕ್ಕೆ ತೆರೆಗೆ ಬರಲಿದೆ ಡಾ||ಮುರುಗನಂದನ್ ನಿರ್ಮಾಣದ ಹಾಗೂ ಲೋಕಲ್ ಲೋಕಿ ನಿರ್ದೇಶನದ ಈ ಚಿತ್ರ..
 ಸಂಗೀತ ಸಿನಿ ಹೌಸ್ ಲಾಂಛನದಲ್ಲಿ ಡಾ||ಮುರುಗನಂದನ್ ಎಮ್(ಪುಲಿಮುರುಗನ್) ಅವರು ನಿರ್ಮಿಸಿರುವ, ಲೋಕಲ್ ಲೋಕಿ ನಿರ್ದೇಶನದೊಂದಿಗೆ ಪ್ರಮುಖಪಾತ್ರದಲ್ಲೂ ನಟಿಸಿರುವ "ಮಾಜರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.                
ದೇಶದಲ್ಲಿ ನಾನು ಕಂಡಿರುವ ನಿರ್ಭಯ ಹತ್ಯೆ ಮೊದಲಾದ ದುರಂತಗಳೆ ಈ ಕಥೆ ಬರೆಯಲು ಮುಖ್ಯ ಕಾರಣ. ಇಂತಹ ಕೃತ್ಯಗಳನ್ನು ಪ್ರತಿಯೊಬ್ಬರು ಖಂಡಿಸಬೇಕು. ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಎಂಬುದೆ "ಮಾಜರ್" ಚಿತ್ರದ ಮುಖ್ಯ ಉದ್ದೇಶ. ನಾನು ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಮುಖ್ಯಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ಮುರುಗನಂದನ್ ಅವರು ನಿರ್ಮಾಣ ಮಾಡಿದ್ದಾರೆ. ಎ.ಟಿ.ರವೀಶ್ ಸಂಗೀತ ನಿರ್ದೇಶನ, ರಾಜೇಶ್ ರಾಮನಾಥ್ ಹಿನ್ನಲೆ ಸಂಗೀತ ಹಾಗೂ ಗಗನ್ ಗೌಡ, ವಿನಯ್ ಗೌಡ, ಜಗನ್ ಬಾಬು ಅವರ ಛಾಯಾಗ್ರಹಣ "ಮಾಜರ್" ಚಿತ್ರಕ್ಕಿದೆ. ಶ್ರೀಹಾನ್, ದೀಪಕ್, ಉಗ್ರಂ ರವಿ, ಸಂಭ್ರಮಶ್ರೀ, ರಾಜು, ರಂಜನ್, ಅಜಯ್ ಶರ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 15 ರ ಸಂಕ್ರಾಂತಿ ದಿನದಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಲೋಕಲ್ ಲೋಕಿ ತಿಳಿಸಿದರು. 
ನಾನು ಉದ್ಯಮಿ ಹಾಗೂ ರಾಜಕಾರಣಿ. ಚಿತ್ರ ನಿರ್ಮಾಣ ಮಾಡಬೇಕೆಂಬುದು ನನಗೆ ಮೊದಲಿನಿಂದಲೂ ಆಸೆ. ಅದು ಈ ಚಿತ್ರದ ಮೂಲಕ ಈಡೇರಿದೆ. ನನ್ನ ನಿರ್ಮಾಣದ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮುರುಗನಂದನ್.
ನಟಿ ಸಂಭ್ರಮಶ್ರೀ ಮಾತನಾಡಿ ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತೆರೆಯ ಮೇಲೆ ನೋಡಿದಾಗಲೇ ಇಷ್ಟು ಭಯ ಆಗತ್ತೆ. ಇನ್ನೂ ಅನುಭವಿಸಿದವರ ಕಷ್ಟ ನೆನೆಸಿಕೊಳ್ಳಲು ಆಗುವುದಿಲ್ಲ. ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಕೊನೆಯಾಗಬೇಕು ಎಂದರು. 
ಚಿತ್ರದಲ್ಲಿ ನಟಿಸಿರುವ ಶ್ರೀಹಾನ್, ದೀಪಕ್, ಅಜಯ್ ಶರ್ಮ, ರಾಜು, ರಂಜನ್, ಉಗ್ರಂ ರವಿ ಹಾಗೂ ನೃತ್ಯ ನಿರ್ದೇಶಕಿ ಗೀತಾ ಮತ್ತು ನೃತ್ಯ ನಿರ್ದೇಶಕ ರಂಜನ್ "ಮಾಜರ್" ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.