Skip to main content

"ಪ್ಯಾರ್" ಒಂದೇ ಮಾತಲಿ.. ಹಾಡು ಹಿಟ್.. ಖುಷಿ ಹಂಚಿಕೊಂಡ ಚಿತ್ರತಂಡ...

"ಪ್ಯಾರ್" ಒಂದೇ ಮಾತಲಿ.. ಹಾಡು ಹಿಟ್..
 ಖುಷಿ ಹಂಚಿಕೊಂಡ ಚಿತ್ರತಂಡ...
   ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದಾರೆ. 
   ಆ್ಯನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ರಿಲೀಸಾಗಿ, ಸಂಗೀತ ಪ್ರಿಯರ ಮನ ಗೆದ್ದಿರುವ *'ಒಂದೇ ಮಾತಲಿ*ಹೇಳೋದಾದರೆ* ' ಎಂಬ ಹಾಡಿನ ಸುಂದರ ವೀಡಿಯೋ ಇನ್ *ಸ್ಟಾಗ್ರಾಂನಲ್ಲಿ 100* ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಅಲ್ಲದೆ ಮಿಲಿಯನ್ ಪ್ಲಸ್ ವ್ಯೂಸ್ ಆಗಿದೆ. ಪಳನಿ ಡಿ.ಸೇನಾಪತಿ ಅವರ ಸಂಗೀತ, ಕೆಎಸ್.ಚಂದ್ರಶೇಖರ್ ಅವರ ಕ್ಯಾಮೆರಾದಲ್ಲಿ ಲಡಾಕ್ ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಹಾಡಿನ ಯಶಸ್ಸಿನ ಖುಷಿಯನ್ನು ಚಿತ್ರತಂಡ ಮಾಧ್ಯದೊಂದಿಗೆ ಹಂಚಿಕೊಂಡಿತು.
 ಮೊದಲಿಗೆ ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ ಡಾ.ಬಿಎಸ್.ನಾಗರಾಜು ಮಾತನಾಡುತ್ತ ಲಡಾಕ್, ಕಾಶ್ಮೀರ, ಜೈಸಲ್ಮೇರ್ ನಲ್ಲಿ ಶೂಟ್ ಮಾಡಲಾಗಿರುವ ಈ ಹಾಡು ಅಧ್ಭುತವಾಗಿ ಮೂಡಿಬಂದಿದೆ ಎಂದರು.
  ನಿರ್ದೇಶಕ ಸುಪ್ರೀತ್ ಮಾತನಾಡುತ್ತ ನಮ್ಮ ಚಿತ್ರದಲ್ಲಿ ರವಿಸರ್ ಅಭಿನಯಿಸಲು ಒಪ್ಪಿದಾಗ ಈ ಟೈಟಲ್ ಇಟ್ಟಿದ್ದಕ್ಕೂ ಸಾರ್ಥಕ ಎನಿಸಿತು. 
ಪ್ರೀತಿ ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ವಿಭಿನ್ನ ಕಾನ್ಸೆಪ್ಟ್ ನಮ್ಮ ಚಿತ್ರದಲ್ಲಿದೆ. ಕಥೆ ಮಾಡಿಕೊಂಡ ಮೇಲೆ ಮುಖ್ಯವಾಗಿ ಗಮನ ಹರಿಸಿದ್ದೇ ಹಾಡುಗಳ‌ ಮೇಲೆ. 7 ವರ್ಷಗಳ ನಂತರ ಈ ಹಾಡನ್ನು ಸೋನು ನಿಗಂ, ಶ್ರೇಯಾ ಘೋಷಾಲ್ ಅದ್ಭುತವಾಗಿ ಹಾಡಿದ್ದಾರೆ.
ಉತ್ತರ ಭಾರತದ ಕಾಶ್ಮೀರದಲ್ಲಿ ತುಂಬಾ ಎತ್ತರದ ಲೊಕೇಶನ್ ನಲ್ಲಿ 4 ದಿನ ಶೂಟ್ ಮಾಡಿದ್ದೇವೆ. ನಿರ್ಮಾಪಕರು ಯಾವುದಕ್ಕೂ ಬೇಡ ಎನ್ನದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ. ರಾಜಸ್ಥಾನ, ಅಂಡಮಾನ್ ದ್ವೀಪ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ತಂದೆ ಮಗಳ ನಡುವಿನ ಬಾಂಧವ್ಯ ಯಾವ ಮಟ್ಟಕ್ಕೆ ತಗೊಂಡು ಹೋಗಬಹುದು‌, ತಂದೆಗೋಸ್ಕರ ಮಗಳು ಯಾವರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಅಂತ ಚಿತ್ರದಲ್ಲಿ ಹೇಳಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದು ಹೇಳಿದರು. ನಾಯಕ ರಿತ್ವಿಕ ಮಾತನಾಡಿ ಈ ಹಾಡನ್ನು ಯಾವಾಗ ಶೂಟ್ ಮಾಡ್ತಿವೋ ಎಂಬ ಕುತೂಹಲವಿತ್ತು.ಒಂದು ಸಿನಿಮಾಗೆ ಹಾಡೇ ಆಹ್ವಾನ ಇದ್ದಹಾಗೆ ಎಂದು ಹೇಳಿದರು.
ಸಧ್ಯ ನಾಯಕಿ ರಾಶಿಕಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿದ್ದಾರೆ. 
   ಸಂಗೀತ ಸಂಯೋಜಕ ಪಳನಿ ಡಿ.ಸೇನಾಪತಿ ಮಾತನಾಡಿ ಒಂದೇ ಮಾತಲಿ ಲೈನ್ ಕೊಟ್ಟಿದ್ದೇ ನಿರ್ದೇಶಕರು.ಇದನ್ನು ನಾಗೇಂದ್ರ ಪ್ರಸಾದ್ ಕೈಲಿ ಬರೆಸಿದರೆ ಚೆನ್ನಾಗಿರತ್ತೆ ಅಂತ ಬರೆಸಿದೆವು. ಮ್ಯೂಸಿಕ್ ಲವರ್ಸ್ ಗೆ ಈ ಹಾಡು ತುಂಬಾ ಇಷ್ಟವಾಗಿದೆ. ಹಂಸಲೇಖಾ ಅವರು ಹಾಡನ್ನು ಕೇಳಿ ವ್ಹಾವ್ ಎಂದು ಪ್ರತಿಕ್ರಯಿಸಿದರು. ಉಳಿದ ಹಾಡುಗಳು ಇದಕ್ಕಿಂತ ಚೆನ್ನಾಗಿ ಬಂದಿವೆ ಎಂದು ಹೇಳಿದರು.

ಚಿತ್ರಕ್ಕಿದೆ. ಈ ಚಿತ್ರದ ಒಂದೇ ಮಾತಲ್ಲಿ ಹೇಳೋದಾದರೆ ಎಂಬ ಹಾಡಿಗೆ ಬಾಲಿವುಡ್ ಗಾಯಕಿ ಶ್ರೇಯಾ ಘೋಷಾಲ್ ದನಿಯಾಗಿದ್ದಾರೆ.  
ಸೋನು ನಿಗಮ್, ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಚಿತ್ರದಲ್ಲಿ ಹಾಡಿದ್ದಾರೆ. ಹಿರಿಯನಟ ಶ್ರೀನಿವಾಸ ಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.