Skip to main content

ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ "LSD"...

ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ "LSD"...
 ಯುವಪ್ರತಿಭೆ ಶಕ್ತಿಪ್ರಸಾದ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್ ನಟನೆ...
ಸುರಾಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಶಕ್ತಿಪ್ರಸಾದ್ ನಿರ್ದೇಶನದಲ್ಲಿ ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "LSD"(ಲೈಲಾಸ್ ಸ್ವೀಟ್ ಡ್ರೀಮ್) ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೈಟಲ್ ಟೀಸರ್ ಬಹಳ ಕುತೂಹಲ ಮೂಡಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"LSD", ನಮ್ಮ ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ. "ನಿದ್ರಾದೇವಿ ನೆಕ್ಸ್ಟ್ ಡೋರ್" ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರ. ನಂತರ ಶ್ರೀಮುರಳಿ ಅಭಿನಯದ "ಉಗ್ರಾಯಧಮ್" ಹಾಗೂ "ನೀ ನಂಗೆ ಅಲ್ವಾ" ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ಹೊಸಪ್ರತಿಭೆಗಳಿಗೆ ಅವಕಾಶ ಮಾಡಿಕೊಡಬೇಕೆಂಬುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ. ಹಾಗಾಗಿ ಯುವ ಪ್ರತಿಭೆ ಶಕ್ತಿಪ್ರಸಾದ್ ಅವರು ಬಂದು "LSD" ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಚೈತ್ರಾ ಜೆ ಆಚಾರ್, ಎಂ.ಡಿ.ಪಲ್ಲವಿ, ಅವಿನಾಶ್ ಮುಂತಾದವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಜಯರಾಮ್ ದೇವಸಮುದ್ರ. 
ನಾನು ನನ್ನ ತಂಡದ ಜೊತೆಗೆ ಅನೇಕ ಕಿರುಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಬೆಳ್ಳಿತೆರೆಯಲ್ಲಿ ಇದು ನನ್ನ ಮೊದಲ ಚಿತ್ರ. ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ ಧನ್ಯವಾದ. "LSD" ಎಂದರೆ "ಲೈಲಾಸ್ ಸ್ವೀಟ್ ಡ್ರೀಮ್" ಅಂತ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ತಾಯಿ - ಮಗಳ ಬಾಂಧವ್ಯದ ಚಿತ್ರವೂ ಹೌದು. ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ತಾಯಿ ಪಾತ್ರದಲ್ಲಿ ಎಂ.ಡಿ.ಪಲ್ಲವಿ ನಟಿಸುತ್ತಿದ್ದಾರೆ. ಬ್ಯುಸ್ ನೆಸ್ ಮ್ಯಾನ್ ಪಾತ್ರದಲ್ಲಿ ಹಿರಿಯನಟ ಅವಿನಾಶ್ ಕಾಣಿಸಿಕೊಳ್ಳುತ್ತಿದ್ದಾರೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ರಿತೇಶ್ ಛಾಯಾಗ್ರಹಣ ಹಾಗೂ ಬಲರಾಮ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಈಗಾಗಲೇ ಒಂದು ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಶಕ್ತಿಪ್ರಸಾದ್ ತಿಳಿಸಿದರು. 
ನನಗೆ ಶಕ್ತಿಪ್ರಸಾದ್ ಅವರು ಸುಮಾರು ಒಂದುವರೆ ವರ್ಷಗಳ ಹಿಂದೆ ಈ ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ಶಕ್ತಿಪ್ರಸಾದ್ ಈ ಮೊದಲು ಬೇರೆ ಭಾಷೆಗಳ ನಿರ್ಮಾಪಕರ ಬಳಿ ಈ ಕಥೆ ಹೇಳಿದ್ದಾರೆ. ಅವರೆಲ್ಲರೂ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಕನ್ನಡದಲ್ಲೇ ಈ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಅವರು ಬೇರೆ ಭಾಷೆಗಳಲ್ಲಿ ಈ ಚಿತ್ರ ಮಾಡಲಿಲ್ಲ. ನಂತರ ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಕನ್ನಡದಲ್ಲಿ ನಿರ್ಮಾಣಕ್ಕೆ ಮುಂದಾದರು. ನಾನು ಈ ಚಿತ್ರದಲ್ಲಿ ಈವರೆಗೂ ಮಾಡಿರದ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ ಎಂದು ನಟಿ ಚೈತ್ರಾ ಜೆ ಆಚಾರ್ ಹೇಳಿದರು.

ಕೆಲವು ವರ್ಷಗಳ ನಂತರ ಮತ್ತೆ ಸಿನಿಮಾದಲ್ಲಿ ನಾನು ಈ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಚೈತ್ರಾ ಜೆ ಆಚಾರ್ ಅವರ ಮೂಲಕ ನನಗೆ ಈ ವಿಷಯ ತಿಳಿಯಿತ್ತು. ಶಕ್ತಿಪ್ರಸಾದ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಚೈತ್ರಾ ಜೆ ಆಚಾರ್ ಅವರ ಅಮ್ಮನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ ಎಂದರು ಎಂ.ಡಿ.ಪಲ್ಲವಿ.
ನಾನು ಸಾಕಷ್ಟು ಸಿನಿಮಾ ತಂಡಗಳ ಜೊತೆಗೆ ಕೆಲಸ ಮಾಡಿದ್ದೇನೆ. ಆದರೆ ಈ ತಂಡದ ಜೊತೆಗೆ ಕೆಲಸ ಮಾಡಿರುವುದು ಬಹಳ ಖುಷಿಯಾಗಿದೆ. ನನ್ನದು ಈ ಚಿತ್ರದಲ್ಲಿ ಬ್ಯುಸಿನೆಸ್ ಮ್ಯಾನ್ ಪಾತ್ರ ಎಂದು ಹಿರಿಯ ನಟ ಅವಿನಾಶ್ ಹೇಳಿದರು.
ಸಂಗೀತ ನಿರ್ದೇಶನದ ಕುರಿತು ಮಿಥುನ್ ಮುಕುಂದನ್ ಹಾಗೂ ಛಾಯಾಗ್ರಹಣದ ಬಗ್ಗೆ ರಿತೇಶ್ ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.