Skip to main content

ಮಾಸ್ತಿಯಲ್ಲಿ ಬಿಡುಗಡೆಯಾಯಿತು "ಆಲ್ಫಾ #men love vengeance" ಚಿತ್ರದ ಮೊದಲ ಹಾಡು...

ಮಾಸ್ತಿಯಲ್ಲಿ ಬಿಡುಗಡೆಯಾಯಿತು "ಆಲ್ಫಾ #men love vengeance" ಚಿತ್ರದ ಮೊದಲ ಹಾಡು... 
 L A ಪ್ರೊಡಕ್ಷನ್ಸ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರ ಫೆಬ್ರವರಿ 20 ರಂದು ಬಿಡುಗಡೆ.. 
L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ಅವರು ನಿರ್ಮಾಣ ಮಾಡಿರುವ, ವಿಜಯ್ ನಿರ್ದೇಶನದ ಹಾಗೂ ಯುವಪ್ರತಿಭೆ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ "ಆಲ್ಫಾ #men love vengeance" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ಜ್ಞಾನಪೀಠ ಪ್ರಶಸ್ತಿ ವಿಜೇತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಊರು ಮಾಸ್ತಿಯಲ್ಲಿ ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ನಾಗಾರ್ಜುನ ಶರ್ಮ ಅವರು ಬರೆದಿರುವ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಹಾಗೂ ಅನರಾಗ್ ಕುಲಕರ್ಣಿ ಅವರು ಹಾಡಿರುವ "ರಾವಾ ರಾವಾ" ಎಂಬ ಹಾಡು ಮಾಸ್ತಿಯಲ್ಲಿ ನಡೆದ 70 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಬಿಡುಗಡೆಯಾಗಿದ್ದು, ಶಾಸಕರಾದ ನಂಜೇಗೌಡ ಅವರು ಈ ಹಾಡನ್ನು ಅನಾವರಣ ಮಾಡಿದ್ದಾರೆ. ಈ ಅದ್ದೂರಿ ಸಮಾರಂಭದಲ್ಲಿ ನಿರ್ದೇಶಕ ವಿಜಯ್, ನಾಯಕ ಹೇಮಂತ್ ಕುಮಾರ್, ಸಂಭಾಷಣೆಕಾರ ಮಾಸ್ತಿ ಹಾಗೂ ನಾಯಕಿಯರಾದ ಗೋಪಿಕ ಸುರೇಶ್, ಆಯನಾ ಉಪಸ್ಥಿತರಿದ್ದರು. ಲಹರಿ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನ ತಲುಪಿರುವ ಈ ಚಿತ್ರ ಫೆಬ್ರವರಿ 20 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.      
ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಈ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನೂತನ ನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. "ಬಿಗ್ ಬಾಸ್" ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.
 ನಾಗಾರ್ಜುನ ಶರ್ಮ ಅವರು ಬರೆದಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ "ಆಲ್ಫಾ #men love vengeance"ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.