Skip to main content

ಟೀಸರ್ ನಲ್ಲೇ ಗಮನ ಸೆಳೆದ ಹೇಮಂತ್ ಕುಮಾರ್ ಅಭಿನಯದ "ಆಲ್ಫಾ MEN LOVE ವೆಂಗೇನ್ಸ್..

ಟೀಸರ್ ನಲ್ಲೇ ಗಮನ ಸೆಳೆದ ಹೇಮಂತ್ ಕುಮಾರ್ ಅಭಿನಯದ "ಆಲ್ಫಾ MEN LOVE ವೆಂಗೇನ್ಸ್..
L A ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ವಿಜಯ್ ನಿರ್ದೇಶನ...
ಮಾಲೂರಿನ ಹೇಮಂತ್ ಕುಮಾರ್ "ಆಲ್ಫಾ MEN LOVE VENGEANCE* ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು " ಗೀತಾ" ಹಾಗೂ "ಗುರುದೇವ ಹೊಯ್ಸಳ" ಚಿತ್ರಗಳ ನಿರ್ದೇಶಕ ವಿಜಯ್ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಲಹರಿ ವೇಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
ನನಗೆ ಮಾಸ್ತಿ ಅವರ ಮೂಲಕ ನಾಯಕ ಹೇಮಂತ್ ಕುಮಾರ್ ಅವರ ಪರಿಚಯವಾಯಿತು. ಅವರಿಗಿರುವ ಸಿನಿಮಾ ಬಗ್ಗೆಗಿನ ಆಸಕ್ತಿ ಬಹಳ ಇಷ್ಟವಾಯಿತು. ಹೇಮಂತ್ ಕುಮಾರ್ ಅವರು ಒಂದೊಳ್ಳೆ ಕಥೆ ಇದ್ದರೆ ಸಿನಿಮಾ ಮಾಡೋಣ ಎಂದು ಹೇಳಿದರು. ಲವ್ ಜಾನರ್ ನ ಚಿತ್ರ ಬೇಡ ಎಂದರು. ಆಗ ಈ "ಆಲ್ಫಾ #MEN LOVE VENGEANCE* ಚಿತ್ರದ ಕಥೆ ಹೇಳಿದೆ. ಅವರಿಗೆ ಇಷ್ಟವಾಯಿತು. ಮಾರ್ಚ್ ನಲ್ಲಿ ಚಿತ್ರ ಪ್ರಾರಂಭವಾಯಿತು. ಈಗ ಮುಕ್ತಾಯ ಹಂತದಲ್ಲಿದೆ. ಫೆಬ್ರವರಿ ವೇಳೆಗೆ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಇದು ಆಕ್ಷನ್ ಥ್ರಿಲ್ಲರ್ ಚಿತ್ರ ಮಾತ್ರವಲ್ಲ. ಸೆಂಟಿಮೆಂಟ್ ಸೇರಿದಂತೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ. ಇದು ಮೂರು ಜನ ಅಪ್ಪಂದಿರ ಹಾಗೂ ಮೂರು ಜನ ಮಕ್ಕಳ ಸುತ್ತ ನಡೆಯುವ ಕಥೆ. ಅಪ್ಪನ ತಂಟೆಗೆ ಯಾರಾದರೂ ಬಂದರೆ, ಮಕ್ಕಳ "ಪ್ರತಿಕಾರ" ಹೇಗಿರುತ್ತದೆ ಎಂದು ತಿಳಿಸುವ ಕಥೆಯೂ ಹೌದು. ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಹೇಮಂತ್ ಕುಮಾರ್, ನಾಯಕನಾಗಲೂ ಬೇಕಾಗಿರುವ ಪೂರ್ವಸಿದ್ದತೆಗಳನ್ನು ಮಾಡಿಕೊಂಡು ಬಂದಿದ್ದರು. ಹಾಗಾಗಿ‌ ಅವರಿಗೆ ಅಭಿನಯ ಅಷ್ಟು ಕಷ್ಟವಾಗಲಿಲ್ಲ. ಕೇರಳ ಮೂಲದ ಗೋಪಿಕಾ ಸುರೇಶ್ ಹಾಗೂ ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ಆಯನಾ ಈ ಚಿತ್ರದ ನಾಯಕಿಯರು. "ಬಿಗ್ ಬಾಸ್" ಖ್ಯಾತಿಯ ಕಾರ್ತಿಕ್ ಮಹೇಶ್ ಕೂಡ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವಿನಾಶ್, ಅಚ್ಯುತಕುಮಾರ್, ಮಾನಸಿ ಸುಧೀರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ವಿನಯ್ ಬಿದ್ದಪ್ಪ, ಮಹಾಂತೇಶ್, ರಾಘು ಶಿವಮೊಗ್ಗ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ‌. ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಸುಮಧುರ ಹಾಡುಗಳು ಹಾಗೂ ಕಾರ್ತಿಕ್ ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಉತ್ತಮವಾಗಿದೆ ಎಂದು ನಿರ್ದೇಶಕ ವಿಜಯ್ ತಿಳಿಸಿದರು.
ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ಹೇಮಂತ್ ಕುಮಾರ್, ಮಾಲೂರು ಶ್ರೀನಿವಾಸ್ ಅವರ ಮೂಲಕ ಮಾಸ್ತಿ ಅವರ ಪರಿಚಯವಾಯಿತು. ಮಾಸ್ತಿ ಅವರು ನಿರ್ದೇಶಕ ವಿಜಯ್ ಅವರನ್ನು ಪರಿಚಯಿಸಿದರು. ವಿಜಯ್ ಅವರು ಹೇಳಿದ ಕಥೆ ಇಷ್ಟವಾಯಿತು. ನಂತರ ಈ ಸಿನಿಮಾ ಆರಂಭವಾಯಿತು. ನನಗೆ ನಾಯಕನಾಗಬೇಕೆಂಬುದು ಬಹಳ ದಿನಗಳ ಕನಸು. ಆದರೆ ಪೂರ್ವ ತಯಾರಿ ಇಲ್ಲದೆ ನಟಿಸುವುದು ಬೇಡ ಅಂದುಕೊಂಡು ನಾಯಕನಾಗಲೂ ಬೇಕಾದ ಎಲ್ಲಾ ತರಭೇತಿಗಳನ್ನು ಪಡೆದುಕೊಂಡು ಬಂದು ಈ ಚಿತ್ರದಲ್ಲಿ ನಟಿಸಿದ್ದೇನೆ. ನನ್ನ ಮೊದಲ ಚಿತ್ರಕ್ಕೆ ಅಷ್ಟೇ ಒಳ್ಳೆಯ ತಂಡ ಸಿಕ್ಕಿದೆ‌. ನನ್ನ ತಂದೆ ಆನಂದ್ ಕುಮಾರ್ ಅವರು ಈ ಚಿತ್ರದ ನಿರ್ಮಾಪಕರು. ಆದರೆ, ನಾನೇ ಪ್ರೊಡಕ್ಷನ್ ನೋಡಿಕೊಂಡಿದ್ದೇನೆ. ನಿರ್ಮಾಣ ನಿರ್ವಾಹಕ‌ ಚಂಪಕಧಾಮ ಬಾಬು ಅವರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಫೆಬ್ರವರಿ ವೇಳೆಗೆ ಚಿತ್ರ ತೆರೆಗೆ ಬರಲಿದೆ ಎಂದರು.
ನಾನು ಈ ಚಿತ್ರದಲ್ಲಿ ಈವರೆಗೂ ಮಾಡಿರದ ವಿಶೇಷ ಹಾಗೂ ವಿಭಿನ್ನ ಪಾತ್ರ ಮಾಡಿದ್ದೇನೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ಕಾರ್ತಿಕ್ ಮಹೇಶ್ ತಿಳಿಸಿದರು.
ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವುದಾಗಿ ನಾಯಕಿ ಆಯನಾ ಹೇಳಿದರು. ನನ್ನದು ನಾಯಕನ ಪ್ರೇಯಸಿಯ ಪಾತ್ರ ಎಂದರು ಮತ್ತೊಬ್ಬ ನಾಯಕಿ ಗೋಪಿಕ ಸುರೇಶ್. ಚಿತ್ರದಲ್ಲಿ ನಟಿಸಿರುವ ಬಾಲು ನಾಗೇಂದ್ರ, ರಾಘು ಶಿವಮೊಗ್ಗ, ಮಹಾಂತೇಶ್, ವಿನಯ್ ಬಿದ್ದಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಾಡುಗಳ ಬಗ್ಗೆ ಅನೂಪ್ ಸೀಳಿನ್, ಸಂಭಾಷಣೆ ಕುರಿತು ಮಾಸ್ತಿ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ , ಕಲಾ ನಿರ್ದೇಶಕ ಅಮರ್ ಹಾಗೂ ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...