Skip to main content

‘ಸೀತಾ ಪಯಣ’ ಭಾವನೆಗಳ ಜೊತೆಗಿನ ಸುಂದರ ಪಯಣ...

‘ಸೀತಾ ಪಯಣ’ ಭಾವನೆಗಳ ಜೊತೆಗಿನ ಸುಂದರ ಪಯಣ...
ಅರ್ಜುನ್ ಸರ್ಜಾ ನಿರ್ದೇಶನದ ಹಾಗೂ ನಿರಂಜನ್ - ಐಶ್ವರ್ಯ ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14ರಂದು ತೆರೆಗೆ..
 ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದ, ಶ್ರೀ ರಾಮ್ ಫಿಲಂಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾಗೂ ನಿರಂಜನ್ - ಐಶ್ವರ್ಯ ಅರ್ಜುನ್ ನಾಯಕ - ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಸೀತಾ ಪಯಣ" ಚಿತ್ರ ಫೆಬ್ರವರಿ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
'ಸೀತಾ ಪಯಣ" ನಾನು ನಿರ್ದೇಶಿಸಿರುವ ಕನ್ನಡದ ಎರಡನೇ ಸಿನಿಮಾ. ಈವರೆಗೂ ಸುಮಾರು ಹದಿನೈದು ಚಿತ್ರಗಳ ನಿರ್ದೇಶನ ಮಾಡಿದ್ದೇನೆ. "ಸೀತಾ ಪಯಣ"ದ ಕಥೆಯನ್ನು ಹದಿಮೂರು ವರ್ಷಗಳ ಹಿಂದೆಯೇ ಸಿದ್ದಮಾಡಿಕೊಂಡಿದೆ. ಯಾವಾಗ ಇದನ್ನು ಚಿತ್ರ ಮಾಡುತ್ತೇನೊ ಎಂದು ಕಾಯುತ್ತಿದೆ. ಈಗ ಕಾಲ ಕೂಡಿಬಂದಿದೆ. ನನ್ನ ಮಗಳು ಐಶ್ವರ್ಯ ನಾಯಕಿಯಾಗಿ, ನಿರಂಜನ್ ನಾಯಕನಾಗಿ ನಟಿಸಿರುವ ಚಿತ್ರವಿದು. ಪ್ರಕಾಶ್ ರೈ, ಸತ್ಯರಾಜ್, ಕೋವೈ ಸರಳ ಅವರಂತಹ ಅನುಭವಿ ಕಲಾವಿದರ ತಾರಾಬಳಗವಿರುವ ಈ ಚಿತ್ರದಲ್ಲಿ ನಾನು ಕೂಡ ಅಭಿನಯಿಸಿದ್ದೇನೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಧ್ರುವ ಅವರ ಅಭಿಮಾನಿಗಳಿಗೆ ಈ ಪಾತ್ರ ಮೆಚ್ಚುಗೆಯಾಗುತ್ತದೆ. ಅನೂಪ್ ರುಬೆನ್ಸ್ ಸಂಗೀತ ಸಂಯೋಜನೆ, ಬಾಲಮುರುಗನ್ ಛಾಯಾಗ್ರಹಣ ಹಾಗೂ ಆಯೂಬ್ ಅವರ ಸಂಕಲನ ಈ ಚಿತ್ರಕ್ಕಿದೆ. "ಸೀತಾ ಪಯಣ", ಇದು ಬರೀ ವ್ಯಕ್ತಿಯ ಪಯಣವಲ್ಲ. ಮನಸ್ಸಿನ ಪಯಣ, ನಾವು ತಿಳಿದುಕೊಳ್ಳಬೇಕಿರುವ ಮೌಲ್ಯಗಳ ಪಯಣ ಹಾಗೂ ಭಾವನೆಗಳ ಜೊತೆಗಿನ ಸುಂದರ ಪಯಣ. ಒಟ್ಟಿನಲ್ಲಿ ಈ ಚಿತ್ರ ನೋಡಿದವರು ಚಿತ್ರಮಂದಿರದಿಂದ ಹೋಗುವಾಗ ಒಂದು ನಗುವಿನ ಜೊತೆ ಹೋಗುವುದು ಖಂಡಿತ. ಫೆಬ್ರವರಿ 14 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ " ಸೀತಾ ಪಯಣ" ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ನಟ ಅರ್ಜುನ್ ಸರ್ಜಾ.
ಬಹಳ ದಿನಗಳ ನಂತರ "ಸೀತಾ ಪಯಣ" ಚಿತ್ರದಲ್ಲಿ ನಟಿಸಿದ್ದೇನೆ. ನನ್ನ ಮೊದಲ ಚಿತ್ರ "ಪ್ರೇಮ ಬರಹ" ಕ್ಕೆ ತಾವು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ. ಇನ್ನೂ ಅಪ್ಪ ಒಂದೊಳ್ಳೆ ಚಿತ್ರ ನಿರ್ದೇಶನ ಮಾಡಿದ್ದಾರೆ. ಎಲ್ಲರೂ ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಪ್ರಕಾಶ್ ರೈ, ಸತ್ಯಜಿತ್ ಹಾಗೂ ಅಪ್ಪ ಸೇರಿದಂತೆ ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ನಿರಂಜನ್ ಅವರು ಕೂಡ ಒಳ್ಳೆಯ ನಟ. ಇನ್ನೂ, ಧ್ರುವ ಸರ್ಜಾ ಅವರು ವಿಶೇಷ ಪಾತ್ರದಲ್ಲ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಎಲ್ಲರ ಗಮನ ಸೆಳೆಯಲಿದೆ. ಅನೂಪ್ ರುಬೆನ್ಸ್ ಸಂಗೀತ ಸಂಯೋಜಿಸಿರುವ ಹಾಡುಗಳು ಈಗಾಗಲೇ ಎಲ್ಲರ ಮೆಚ್ಚುಗೆ ಗಳಿಸಿದೆ. ಇನ್ನು ಎರಡು ಹಾಡುಗಳು ಸದ್ಯದಲ್ಲೇ ಅನಾವರಣವಾಗಲಿದೆ. ನಮ್ಮ ಚಿತ್ರ ಫೆಬ್ರವರಿ 14 ರಂದು ತೆರೆಗೆ ಬರುತ್ತಿದೆ ಎಂದು ನಾಯಕಿ ಐಶ್ವರ್ಯ ಅರ್ಜುನ್ ತಿಳಿಸಿದರು.
"ಸೀತಾ ಪಯಣ" ದಲ್ಲಿ ನಟಿಸಿದ್ದು ಬಹಳ ಸಂತೋಷವಾಗಿದೆ. ಬೇರೆ ಚಿತ್ರದಲ್ಲಿ ಅಭಿನಯಿಸಿದ್ದು ಅಂತ ಅನಿಸಲಿಲ್ಲ. ನಮ್ಮ ಕುಟುಂಬದವರ ಜೊತೆಗೆ ಇದ್ದ ಹಾಗೆ ಇತ್ತು. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ನಿರಂಜನ್ ಹೇಳಿದರು.
ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನೂಪ್ ರುಬೆನ್ಸ್ ಮಾಹಿತಿ ನೀಡಿದರು. ಚಿತ್ರದ ತಂತ್ರಜ್ಞರಾದ ಅಂಜನ ಅರ್ಜುನ್ ಹಾಗೂ ಸೂರಜ್ ಸರ್ಜಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.