Skip to main content

"ಘಾರ್ಗಾ" ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್..

"ಘಾರ್ಗಾ" ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್..
  ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಘಾರ್ಗಾ ತನ್ನ ವಿಭಿನ್ನ ಕಂಟೆಂಟ್, ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. 
  ಫೆ.6ರಂದು ರಿಲೀಸಾಗುತ್ತಿರುವ ಈ ಚಿತ್ರದಲ್ಲಿ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗಾಗಿಯೇ ದರ್ಶನ್ ಅಭಿನಯದ ಗಜ ಚಿತ್ರದ ‌ ಸೂಪರ್ ಹಿಟ್ ಬಂಗಾರಿ ಯಾರೇ ನೀ ಬುಲ್ ಬುಲ್ ಹಾಡನ್ನು ರೀಮಿಕ್ಸ್ ಮಾಡಿ ಬಳಸಿಕೊಳ್ಳಲಾಗಿದೆ. ಇದು ದರ್ಶನ್ ಫ್ಯಾನ್ಸ್ ಗೆ ಒಂದು ಸರ್ ಪ್ರೈಸ್ ಗಿಪ್ಟ್ ಆಗಿದೆ. 
    ಇತ್ತೀಚೆಗೆ ನಡೆದ ಸಮಾರಂಭದಲ್ಲಿ 
ಈ ಹಾಡನ್ನು ಆಗಮಿಸಿದ್ದ 50ಕ್ಕೂ ಹೆಚ್ಚು ದರ್ಶನ್ ಫ್ಯಾನ್ಸ್ ಲಾಂಚ್ ಮಾಡಿದರು. 
ಫಾರ್ಗಾ ಒಂದು ಊರಿನ ಹೆಸರು, ದ ಲ್ಯಾಂಡ್ ಆಫ್ ಶಾಡೋ ಎಂಬ ಅಡಿಬರಹವಿದೆ. ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಘಾರ್ಗಾ ಒಂದು ಅಡ್ವೆಂಚರಸ್ ಡ್ರಾಮಾ, ಹಾರರ್ ಚಿತ್ರವಾಗಿದ್ದು, ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
    ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ಹಾಗೂ ನಾಯಕಿ ಪಾತ್ರದಲ್ಲಿ ರೆಹಾನ ಅಭಿನಯಿಸಿದ್ದಾರೆ. ಎಂ. ಶಶಿಧರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.
     ಈ ಸಂದರ್ಭದಲ್ಲಿ ನಿರ್ಮಾಪಕ ಅಶ್ವಿನಿ ರಾಮ್‌ಪ್ರಸಾದ್ ಮಾತನಾಡುತ್ತ ಗಜ ಚಿತ್ರದ ಹಾಡುಗಳು ನಮ್ಮ ಅಶ್ವಿನಿ ಆಡಿಯೋದಲ್ಲೇ ರಿಲೀಸಾಗಿತ್ತು‌. ಆಗ ಆ ಹಾಡನ್ನು ಮಿಲಿಯನ್ ಗಟ್ಟಲೇ ಪ್ರೇಕ್ಷಕರು ನೋಡಿದ್ದರು. ಈಗಲೂ ಸಹ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಈ ಹಾಡನ್ನು ದರ್ಶನ್ ಅವರಿಗೆ ಡೆಡಿಕೇಟ್ ಮಾಡುತ್ತಿದ್ದೇವೆ. ಚಿತ್ರದ ರಿಲೀಸ್ ದಿನ ಈ ಹಾಡಿನ ಯಶಸ್ಸನ್ನು ಸೆಲಬ್ರೇಟ್ ಮಾಡುತ್ತೇವೆ. ಈಗಾಗಲೇ ಎಲ್ಕಾ ಕಡೆ ಪ್ರೊಮೋಷನ್ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಎಷ್ಟು ಬೇಕೋ ಅಷ್ಟು ಸೆಂಟರ್ ಗಳಲ್ಲಿ ಮಾತ್ರ ರಿಲೀಸ್ ಮಾಡುತ್ತಿದ್ದೇವೆ. ಎನ್. ಕುಮಾರ್ ಅವರು ಒಳ್ಳೊಳ್ಳೆ ಥೇಟರ್ ಸೆಟಪ್ ಮಾಡಿಕೊಟ್ಡಿದ್ದಾರೆ. ಇದು ಮಾಮೂಲಿ ಸಿನಿಮಾ ಅಲ್ಲ, ವಿಭಿನ್ನ ರೀತಿಯ ಮೇಕಿಂಗ್ ನಿರೂಪಣೆ ಕಾಣಬಹುದು ಎಂದು ಹೇಳಿದರು.
ನಿರ್ದೇಶಕ ಶಶಿಧರ್ ಮಾತನಾಡಿ ಜನ‌ ಮೆಚ್ಚುವಂಥ ಸಿನಿಮಾ ಮಾಡಿದ್ದೇನೆ. ಚಿತ್ರದಲ್ಲಿ ನಾಯಕನಿಗೆ 3 ಗೆಟಪ್‌ಗಳಿವೆ ಎಂದರು.
  ನಾಯಕ ಅರುಣ್ ಮಾತನಾಡಿ ಚಿತ್ರದಲ್ಲಜ ನನ್ನ ಪಾತ್ರ ತುಂಬಾ ವಿಭಿನ್ನವಾಗಿದ್ದು, ರೈಟರ್, ಅಂಡರ್‌ವರ್ಡ್ಲ್ ಹೀಗೆ ಹಲವಾರು ಶೇಡ್ಸ್ ಇದೆ, ಇದೊಂದು ಹಾರರ್, ಕ್ರೈಮ್ ಥ್ರಿಲ್ಲರ್ ಸಬ್ಜೆಕ್ಟ್ಎಂದು ಹೇಳಿದರು.
   ಈ ಚಿತ್ರವನ್ನು ಎನ್. ಕುಮಾರ್ ಅವರು ರಿಲೀಸ್ ಮಾಡುತ್ತಿದ್ದಾರೆ. ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್ ಹೀಗೆ ಎಲ್ಲ ರೀತಿಯ ಮನರಂಜನಾತ್ಮಕ ಅಂಶಗಳೂ ಚಿತ್ರದಲ್ಲಿದ್ದು, ಮಂಗಳೂರು, ಚಿಕ್ಕಮಗಳೂರು, ದಾಂಡೇಲಿ, ಆಗುಂಬೆ ಹಾಗೂ ಬೆಂಗಳೂರಲ್ಲಿ ಚಿತ್ರೀಕರಿಸಲಾಗಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...