Skip to main content

20ವರುಷಗಳ ಗೋಲ್ಡನ್ ಸ್ಟಾರ್ ಸಂಭ್ರಮದಲ್ಲಿ ಆರಂಭವಾಯಿತು ಗಣೇಶ್ ನೂತನ ಸಿನಿಮಾ "ತಮ್ಮ ಸುಖಗಮನ ಬಯಸುವ"..

20ವರುಷಗಳ ಗೋಲ್ಡನ್ ಸ್ಟಾರ್ ಸಂಭ್ರಮದಲ್ಲಿ ಆರಂಭವಾಯಿತು ಗಣೇಶ್ ನೂತನ ಸಿನಿಮಾ "ತಮ್ಮ ಸುಖಗಮನ ಬಯಸುವ"..
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಸೆಳೆದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಹೊಂದಿಸಿ ಬರೆಯಿರಿ", "ತೀರ್ಥರೂಪ ತಂದೆಯವರಿಗೆ" ಅಂತಹ ಉತ್ತಮ ಚಿತ್ರಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ನೂತನ ಚಿತ್ರ "ತಮ್ಮ ಸುಖಾಗಮನ ಬಯಸುವ". ವೈಷ್ಣವಿ ಫಿಲಂಸ್ ಮೂಲಕ ವಿಜಯ್ ಲೋಹಿತ್ ಅವರು ನಿರ್ಮಿಸುತ್ತಿರುವ, ಸತೀಶ್ ಎಚ್ ಗೌಡ ಅವರ ಸಹ ನಿರ್ಮಾಣವಿರುವ ಹಾಗೂ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ "ತಮ್ಮ ಸುಖಾಗಮನ ಬಯಸುವ" ಚಿತ್ರದ ಮುಹೂರ್ತ ಸಮಾರಂಭ ಮಾಹಾ ಶಿವರಾತ್ರಿಯ ಶುಭದಿನದಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಿಲ್ಪ ಗಣೇಶ್ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಣೇಶ್ ಅವರ ಸಾಕಷ್ಟು ಅಭಿಮಾನಿಗಳು ಹಾಗೂ ಸ್ನೇಹಿತರು ಮುಹೂರ್ತ ಸಮಾರಂಭಕ್ಕೆ ಸಾಕ್ಷಿಯಾದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
 ಇಂದು ನನ್ನ "ಗೋಲ್ಡನ್" ದಿನ ಎಂದು ಮಾತನಾಡಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ, 2006 ರಲ್ಲಿ "ಮುಂಗಾರು ಮಳೆ" ತೆರೆ ಕಂಡಾಗ ನಾನು ಎಂಜಿನಿಯರಿಂಗ್ ವಿದ್ಯಾರ್ಥಿ. ಆ ಸಿನಿಮಾವನ್ನು ಎಷ್ಟು ಬಾರಿ ನೋಡಿದ್ದೇನೊ ಲೆಕ್ಕ ಇಲ್ಲ. ಇಂದು ಅವರ ಜೊತೆಗೆ ಸಿನಿಮಾ ಮಾಡುತ್ತಿರುವುದು ಬಹಳ ಖುಷಿಯಾಗಿದೆ. ಇದು ಗಣೇಶ್ ಅವರ ಇಪ್ಪತ್ತು ವರ್ಷಗಳ ಜರ್ನಿಯನ್ನು ಸಂಭ್ರಮಿಸುವ ಸಮಯ. "ತೀರ್ಥರೂಪ ತಂದೆಯವರಿಗೆ" ಚಿತ್ರದ ಚಿತ್ರೀಕರಣ ಸಮಯದಲ್ಲಿ ನನ್ನ ಸ್ನೇಹಿತನ ಮೂಲಕ ಗಣೇಶ್ ಅವರನ್ನು ಸಂಪರ್ಕ ಮಾಡಿ ಈ ಚಿತ್ರದ ಕಥೆ ಹೇಳಿದೆ. ಇದು ಗಣೇಶ್ ಅವರಿಗಾಗಿಯೇ ಬರೆದಿರುವ ಕಥೆ. ಈ ಕಥೆಗೆ ಅವರೆ ಸೂಕ್ತ ನಾಯಕ. ಇದೊಂದು ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಹಾಗೂ ಎಮೋಷನಲ್ ಡ್ರಾಮ. ವೈಷ್ಣವಿ ಫಿಲಂಸ್ ಲಾಂಛನದಲ್ಲಿ ವಿಜಯ್ ಲೋಹಿತ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸತೀಶ್ ಎಚ್ ಗೌಡ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. ಉಳಿದ ತಾರಾಬಳಗ ಹಾಗೂ ತಂತ್ರಜ್ಞರ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ. ಇನ್ನೂ, ಶೀರ್ಷಿಕೆಯ ಬಗ್ಗೆ ಹೇಳುವುದಾದರೆ, ಶೀರ್ಷಿಕೆ ಬಳಕೆಗೆ ಹತ್ತಿರವಾಗಿರಬೇಕು. ಜನರಿಗೆ ಆಪ್ತವಾಗಬೇಕು. ನನ್ನ ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಹಾಗೆ ಇತ್ತು. ಈ ಶೀರ್ಷಿಕೆ ಕೂಡ ಜನರಿಗೆ ಆಪ್ತವಾಗುತ್ತದೆ ಜೊತೆಗೆ ಕಥೆಗು ಹಾಗೂ ಪಾತ್ರಗಳಿಗೂ ಪೂರಕವಾಗಿದೆ ಎಂದರು.
"ಮುಂಗಾರು ಮಳೆ" 2006 ರಲ್ಲಿ ಬಿಡುಗಡೆಯಾಗಿದ್ದು, ಈಗ 2026. ಇಪ್ಪತ್ತು ವರ್ಷಗಳಾಗಿದೆ. ಇಪ್ಪತ್ತು ವರ್ಷಗಳು ಹೇಗೆ ಕಳೆಯಿತು ಗೊತ್ತಾಗಲಿಲ್ಲ. ದೇವರು ನನಗೆ ಒಳ್ಳೆಯ ನಿರ್ಮಾಪಕರು, ನಿರ್ದೇಶಕರು, ಬರಹಗಾರರು ಹಾಗೂ ನಿಮ್ಮೆಲ್ಲರ ಪ್ರೀತಿ ಕೊಟ್ಟಿದ್ದಾನೆ. ಇದು ಹೀಗೆ ಮುಂದುವರೆಯಲಿ. ಇನ್ನೂ, ಒಂದು ದಿನ ಸ್ನೇಹಿತರೊಬ್ಬರು ಫೋನ್ ಮಾಡಿ ನನ್ನ ಸ್ನೇಹಿತ ಒಂದು ಸ್ಕ್ರಿಪ್ಟ್ ಮಾಡಿಕೊಂಡಿದ್ದಾನೆ. ಅದು ನಿಮಗಾಗಿಯೇ ಮಾಡಿರುವ ಕಥೆಯಂತೆ ಎಂದರು. ನಾನು ಯಾರು ಅಂತ ಕೇಳಿದೆ. ರಾಮೇನಹಳ್ಳಿ ಜಗನ್ನಾಥ. "ಹೊಂದಿಸಿ ಬರೆಯಿರಿ" ನಿರ್ದೇಶಕರು ಎಂದರು. ಹೌದಾ. ನಾನು ಆ ಸಿನಿಮಾ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಅವರೊಬ್ಬ ಸೆನ್ಸಿಬಲ್ ರೈಟರ್. ಮನುಷ್ಯನ ಭಾವನೆಗಳನ್ನು ಆ ಚಿತ್ರದಲ್ಲಿ ತುಂಬಾ ಚೆನ್ನಾಗಿ ಹೇಳಿದ್ದಾರೆ ಅಂದೆ. ಆನಂತರ ಜಗನ್ನಾಥ ಅವರು ಬಂದು ಕಥೆ ಹೇಳಿದರು. ಕಥೆ ಕೇಳುವಾಗಲೇ ಸಂತೋಷದಲ್ಲಿ ಅಳು ಬಂತು. ಅಂತಹ ಅಪರೂಪದ ಕಥೆ ಇದು. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ನಿರ್ದೇಶಕರ ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಬಹಳ ಚೆನ್ನಾಗಿತ್ತು. ನಮ್ಮ ಚಿತ್ರಕ್ಕೂ ಇಂತಹ ಶೇರ್ಷಿಕೆಯನ್ನೇ ಆಯ್ಕೆ ಮಾಡಿ ಎಂದು ಹೇಳಿದ್ದೆ. "ತಮ್ಮ ಸುಖಾಗಮನ ಬಯಸುವ" ಎಂದು ಎಲ್ಲರಿಗೂ ಪ್ರಿಯವಾಗುವ ಶೀರ್ಷಿಕೆ ಇಟ್ಟಿದ್ದಾರೆ. ಚಿತ್ರವನ್ನು ಸಹ ಚೆನ್ನಾಗಿ ಮಾಡುತ್ತಾರೆ ಎಂಬ ಭರವಸೆ ಇದೆ. ಅದಕ್ಕೆ ನಿರ್ಮಾಪಕರು ಸಹಕಾರ ನೀಡುತ್ತಾರೆ. ಇನ್ನೂ, ಅರ್ಜುನ್ ಜನ್ಯ ಹಾಗೂ ನನ್ನ ಕಾಂಬಿನೇಶನ್ ನಲ್ಲಿ ಸಾಕಷ್ಟು ಜನಪ್ರಿಯ ಹಾಡುಗಳು ಬಂದಿದೆ. ಈ ಚಿತ್ರದಲ್ಲೂ ಸುಮಧುರ ಹಾಡುಗಳಿರಲ್ಲಿದೆ ಎಂದು ನಾಯಕ ಗಣೇಶ್ ತಿಳಿಸಿದರು.       
ಇದು ನಮ್ಮ ಸಂಸ್ಥೆಯ ಎರಡನೇ ಚಿತ್ರ. ಮೊದಲ ಚಿತ್ರಕ್ಕೆ ತಾವು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು ನಿರ್ಮಾಪಕ ವಿಜಯ್ ಲೋಹಿತ್. ಸಹ ನಿರ್ಮಾಪಕ ಸತೀಶ್ ಎಚ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...